ನವದೆಹಲಿ, 03 ಸೆಪ್ಟೆಂಬರ್ (ಹಿ.ಸ.) :
ಆ್ಯಂಕರ್ : ಪಂಜಾಬ್ ಸೇರಿ ಜಮ್ಮು-ಕಾಶ್ಮೀರ, ಹಿಮಾಚಲ ಮತ್ತು ಉತ್ತರಾಖಂಡದಲ್ಲಿ ಭೀಕರ ಪ್ರವಾಹದಿಂದ ಉಂಟಾಗಿರುವ ಹಾನಿ ಹಿನ್ನೆಲೆಯಲ್ಲಿ ತಕ್ಷಣ ವಿಶೇಷ ಪರಿಹಾರ ನೀಡುವಂತೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಪ್ರಧಾನಿ ನರೇಂದ್ರ ಮೋದಿಗೆ ಮನವಿ ಮಾಡಿದ್ದಾರೆ.
ಸಾಮಾಜಿಕ ಮಾಧ್ಯಮದಲ್ಲಿ ಮನಿ ಮಾಡಿರುವ ಅವರು, ಪ್ರವಾಹವು ಪಂಜಾಬ್‌ನಲ್ಲಿ ಭೀಕರ ವಿನಾಶ ಉಂಟುಮಾಡಿದೆ. ಜಮ್ಮು-ಕಾಶ್ಮೀರ, ಹಿಮಾಚಲ ಮತ್ತು ಉತ್ತರಾಖಂಡದ ಪರಿಸ್ಥಿತಿಯೂ ಚಿಂತಾಜನಕವಾಗಿದೆ. ಸಾವಿರಾರು ಕುಟುಂಬಗಳು ತಮ್ಮ ಮನೆ, ಜೀವ ಮತ್ತು ಪ್ರೀತಿಪಾತ್ರರನ್ನು ಉಳಿಸಿಕೊಳ್ಳಲು ಹೋರಾಟ ನಡೆಸುತ್ತಿವೆ,
ಇಂತಹ ಕಷ್ಟದ ಸಮಯದಲ್ಲಿ ಕೇಂದ್ರ ಸರ್ಕಾರ ತಕ್ಷಣ ನೆರವು ನೀಡುವುದು ಅವಶ್ಯಕವೆಂದು ಅವರು ಒತ್ತಾಯಿಸಿದ್ದಾರೆ. ವಿಶೇಷವಾಗಿ ರೈತರಿಗೆ ಮೀಸಲಾಗುವಂತೆ ವಿಶೇಷ ಪರಿಹಾರ ಪ್ಯಾಕೇಜ್ ತಕ್ಷಣ ಘೋಷಿಸಬೇಕು ಮತ್ತು ರಕ್ಷಣಾ-ಪರಿಹಾರ ಕಾರ್ಯಾಚರಣೆಗಳನ್ನು ವೇಗಗೊಳಿಸಬೇಕೆಂದು ರಾಹುಲ್ ಗಾಂಧಿ ಆಗ್ರಹಿಸಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa