ಇನ್ನೊಂದು ದಿನ ಮಳೆ ಮುಂದುವರೆಯುವ ಮುನ್ಸೂಚನೆ
ಬೆಂಗಳೂರು, 03 ಸೆಪ್ಟೆಂಬರ್ (ಹಿ.ಸ.) : ಆ್ಯಂಕರ್ : ರಾಜ್ಯದಲ್ಲಿ ಮುಂದಿನ ಒಂದು ದಿನ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ರಾಜ್ಯದ ಎಲ್ಲ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಲಿದೆ. ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ, ಶಿವಮೊಗ್ಗ ಹಾಗೂ ಚಿಕ್ಕಮಗಳೂರು ಜಿಲ್ಲೆಗಳ ಬಹುತೇಕ ಭಾಗಗಳಲ್
ಇನ್ನೊಂದು ದಿನ ಮಳೆ ಮುಂದುವರೆಯುವ ಮುನ್ಸೂಚನೆ


ಬೆಂಗಳೂರು, 03 ಸೆಪ್ಟೆಂಬರ್ (ಹಿ.ಸ.) :

ಆ್ಯಂಕರ್ : ರಾಜ್ಯದಲ್ಲಿ ಮುಂದಿನ ಒಂದು ದಿನ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ರಾಜ್ಯದ ಎಲ್ಲ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಲಿದೆ.

ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ, ಶಿವಮೊಗ್ಗ ಹಾಗೂ ಚಿಕ್ಕಮಗಳೂರು ಜಿಲ್ಲೆಗಳ ಬಹುತೇಕ ಭಾಗಗಳಲ್ಲಿ ಮಳೆಯಾಗಲಿದೆ. ಮಲೆನಾಡು ಹಾಗೂ ಕರಾವಳಿ ಜಿಲ್ಲೆಗಳಲ್ಲಿ ಮಳೆಯ ತೀವ್ರತೆ ಹೆಚ್ಚುವ ಸಾಧ್ಯತೆ ಇದೆ ಎಂದು ಇಲಾಖೆ ತಿಳಿಸಿದೆ.

ರಾಜಧಾನಿ ಬೆಂಗಳೂರಿನಲ್ಲಿ ಇಂದು ಸಾಧಾರಣ ಮಳೆಯಾಗುವ ನಿರೀಕ್ಷೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande