ಅಂಜನಾದ್ರಿ ಬೆಟ್ಟ ಅಭಿವೃದ್ಧಿಗೆ ಸಿದ್ದರಾಮಯ್ಯ ಸೂಚನೆ
ಬೆಂಗಳೂರು, 03 ಸೆಪ್ಟೆಂಬರ್ (ಹಿ.ಸ.) : ಆ್ಯಂಕರ್ : ಅಂಜನಾದ್ರಿ ಬೆಟ್ಟವನ್ನು ಪ್ರವಾಸೋದ್ಯಮ, ಪೌರಾಣಿಕ ಹಾಗೂ ಅಧ್ಯಾತ್ಮಿಕ ಕೇಂದ್ರವಾಗಿ ಅಭಿವೃದ್ಧಿಪಡಿಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅಧಿಕಾರಿಗಳಿಗೆ ಸೂಚಿಸಿದರು. ಕಾವೇರಿ ನಿವಾಸದಲ್ಲಿ ನಡೆದ ಸಭೆಯಲ್ಲಿ ಹನುಮ ಜಯಂತಿ ಸಂದರ್ಭದಲ್ಲಿ ಲಕ್ಷಾಂತರ ಯಾತ್
Meeting


ಬೆಂಗಳೂರು, 03 ಸೆಪ್ಟೆಂಬರ್ (ಹಿ.ಸ.) :

ಆ್ಯಂಕರ್ : ಅಂಜನಾದ್ರಿ ಬೆಟ್ಟವನ್ನು ಪ್ರವಾಸೋದ್ಯಮ, ಪೌರಾಣಿಕ ಹಾಗೂ ಅಧ್ಯಾತ್ಮಿಕ ಕೇಂದ್ರವಾಗಿ ಅಭಿವೃದ್ಧಿಪಡಿಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅಧಿಕಾರಿಗಳಿಗೆ ಸೂಚಿಸಿದರು.

ಕಾವೇರಿ ನಿವಾಸದಲ್ಲಿ ನಡೆದ ಸಭೆಯಲ್ಲಿ ಹನುಮ ಜಯಂತಿ ಸಂದರ್ಭದಲ್ಲಿ ಲಕ್ಷಾಂತರ ಯಾತ್ರಿಕರು ಆಗಮಿಸುವ ಹಿನ್ನೆಲೆಯಲ್ಲಿ, ಡಾರ್ಮೆಟರಿ, ಸಮುದಾಯ ಭವನ, ಮೆಟ್ಟಿಲು ವ್ಯವಸ್ಥೆ, ಪ್ರದಕ್ಷಿಣೆ ಮಾರ್ಗ ಸೇರಿದಂತೆ ಮೂಲಭೂತ ಸೌಲಭ್ಯಗಳನ್ನು ಕಲ್ಪಿಸಲು ಚರ್ಚೆ ನಡೆಯಿತು.

ಹಿರಿಯ ಭಕ್ತರು ಬೆಟ್ಟದ ತುದಿಗೆ ಸುಲಭವಾಗಿ ತಲುಪುವಂತೆ ಅಗತ್ಯ ಸವಲತ್ತುಗಳನ್ನು ಒದಗಿಸುವುದರ ಕುರಿತು ಚರ್ಚೆ ನಡೆಯಿತು.

ಹಂತ-1 ಮತ್ತು ಹಂತ-2ರಲ್ಲಿ ರೂ.200 ಕೋಟಿ ಮಂಜೂರಾಗಿದ್ದು, ಇದುವರೆಗೆ ರೂ.10 ಕೋಟಿ ಬಿಡುಗಡೆ ಮಾಡಲಾಗಿದೆ. ಸರ್ಕಾರಿ ಭೂಮಿ ಕೊರತೆಯಿಂದಾಗಿ 101.30 ಎಕರೆ ಖಾಸಗಿ ಭೂಸ್ವಾಧೀನಕ್ಕೆ ಅನುದಾನ ಒದಗಿಸಲು ಕ್ರಮಕೈಗೊಳ್ಳಲು ಸೂಚಿಸಲಾಯಿತು. ಅರಣ್ಯ ಇಲಾಖೆಯ ವ್ಯಾಪ್ತಿಗೆ ಬರುವ ಜಮೀನಿನಲ್ಲಿ ಕಾಮಗಾರಿಗಳು ಇರುವುದರಿಂದ, ಅರಣ್ಯ ಇಲಾಖೆಯ ಅನುಮತಿ ಪಡೆಯುವುದು ಕಡ್ಡಾಯವಾಗಿದೆ ಎಂದು ಮುಖ್ಯಮಂತ್ರಿ ತಿಳಿಸಿದ್ದಾರೆ.

2024–25ನೇ ಸಾಲಿನ ಬಜೆಟ್ ಪ್ರಕಾರ ಅಂಜನಾದ್ರಿ ಬೆಟ್ಟ ಸೇರಿ ರಾಜ್ಯದ 11 ಪ್ರವಾಸಿ ತಾಣಗಳಿಗೆ ಪಿಪಿಪಿ ಮಾದರಿಯಲ್ಲಿ ರೋಪ್ ವೇ ನಿರ್ಮಾಣಕ್ಕೆ ಅನುಮೋದನೆ ನೀಡಲಾಗಿದೆ.

ಸಭೆಯಲ್ಲಿ ಸಚಿವ ಎಚ್.ಕೆ. ಪಾಟೀಲ್, ಅಪರ ಮುಖ್ಯ ಕಾರ್ಯದರ್ಶಿ ಅಂಜುಂ ಪರ್ವೇಜ್ ಹಾಗೂ ಪ್ರವಾಸೋದ್ಯಮ ಇಲಾಖೆಯ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande