ನವದೆಹಲಿ, 30 ಸೆಪ್ಟೆಂಬರ್ (ಹಿ.ಸ.) :
ಆ್ಯಂಕರ್ : ರಾಷ್ಟ್ರ ರಾಜಧಾನಿ ದೆಹಲಿ ಎನ್‌ಸಿಆರ್‌ನಲ್ಲಿ ಭಾರಿ ಮಳೆಯಾಗಿದೆ. ಹಠಾತ್ ಮಳೆಯು ಶಾಖ ಮತ್ತು ತೇವಾಂಶದಿಂದ ಜನರಿಗೆ ತಾತ್ಕಾಲಿಕ ಪರಿಹಾರ ನೀಡಿದೆ.
ನಗರ ಪ್ರದೇಶಗಳಲ್ಲಿ, ವಿಶೇಷವಾಗಿ ದೆಹಲಿ, ಗಾಜಿಯಾಬಾದ್ ಮತ್ತು ನೋಯ್ಡಾದಲ್ಲಿ ತಗ್ಗು ಪ್ರದೇಶಗಳಲ್ಲಿ ಮಳೆ ನೀರು ನಿಂತಿದ್ದು ಫಿರೋಜ್‌ಶಾ ರಸ್ತೆ, ಪಟೇಲ್ ಚೌಕ್ ಮೆಟ್ರೋ ನಿಲ್ದಾಣದ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಸಂಚಾರ ಅಸ್ತವ್ಯಸ್ತವಾಗಿದೆ.
ಭಾರತ ಹವಾಮಾನ ಇಲಾಖೆ ಮುಂದಿನ ಎರಡು ಮೂರು ಗಂಟೆಗಳಲ್ಲಿ ಗುಡುಗು ಸಹಿತ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ತಿಳಿಸಿದೆ.
ನೋಯ್ಡಾ, ಗಾಜಿಯಾಬಾದ್, ಫರಿದಾಬಾದ್, ಪಿತಂಪುರ, ಬಾಗ್‌ಪತ್ ಹಾಗೂ ಹರಿಯಾಣದ ಜಜ್ಜರ್, ರೋಹ್ಟಕ್ ಮತ್ತು ಭಿವಾನಿಗಳಲ್ಲಿ ಮುಂದಿನ ಆರು ಗಂಟೆಗಳಲ್ಲಿ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa