ಕಾಂಗ್ರೆಸ್ ಶಾಸಕ ಟಿ.ಡಿ. ರಾಜೇಗೌಡ ಮನೆ ಮೇಲೆ ಲೋಕಾಯುಕ್ತ ದಾಳಿ
ಚಿಕ್ಕಮಗಳೂರು, 30 ಸೆಪ್ಟೆಂಬರ್ (ಹಿ.ಸ.) : ಆ್ಯಂಕರ್ : ಅಕ್ರಮ ಆಸ್ತಿ ಸಂಪಾದನೆ ಆರೋಪದ ಹಿನ್ನೆಲೆಯಲ್ಲಿ ಚಿಕ್ಕಮಗಳೂರು ಜಿಲ್ಲೆಯ ಶೃಂಗೇರಿ ವಿಧಾನ ಸಭಾ ಕ್ಷೇತ್ರದ ಕಾಂಗ್ರೆಸ್ ಶಾಸಕ ಟಿ.ಡಿ. ರಾಜೇಗೌಡ ಅವರ ಮನೆ ಮೇಲೆ ಲೋಕಾಯುಕ್ತ ಪೊಲೀಸರು ದಾಳಿ ನಡೆಸಿದ್ದಾರೆ. ನ್ಯಾಯಾಲಯದ ಆದೇಶದಂತೆ ರಾಜೇಗೌಡ, ಅವರ ಪತ್
Rajegowda


ಚಿಕ್ಕಮಗಳೂರು, 30 ಸೆಪ್ಟೆಂಬರ್ (ಹಿ.ಸ.) :

ಆ್ಯಂಕರ್ : ಅಕ್ರಮ ಆಸ್ತಿ ಸಂಪಾದನೆ ಆರೋಪದ ಹಿನ್ನೆಲೆಯಲ್ಲಿ ಚಿಕ್ಕಮಗಳೂರು ಜಿಲ್ಲೆಯ ಶೃಂಗೇರಿ ವಿಧಾನ ಸಭಾ ಕ್ಷೇತ್ರದ ಕಾಂಗ್ರೆಸ್ ಶಾಸಕ ಟಿ.ಡಿ. ರಾಜೇಗೌಡ ಅವರ ಮನೆ ಮೇಲೆ ಲೋಕಾಯುಕ್ತ ಪೊಲೀಸರು ದಾಳಿ ನಡೆಸಿದ್ದಾರೆ.

ನ್ಯಾಯಾಲಯದ ಆದೇಶದಂತೆ ರಾಜೇಗೌಡ, ಅವರ ಪತ್ನಿ ಪುಷ್ಪ ಹಾಗೂ ಮಗನ ವಿರುದ್ಧ ಲೋಕಾಯುಕ್ತ ಕಚೇರಿಯಲ್ಲಿ ಪ್ರಕರಣ ದಾಖಲಾಗಿದ್ದು, ಈ ಹಿನ್ನೆಲೆಯಲ್ಲಿ ತನಿಖೆ ಚುರುಕುಗೊಂಡಿದೆ.

ಚುನಾವಣಾ ಆಯೋಗಕ್ಕೆ ಸಲ್ಲಿಸಿದ ಮಾಹಿತಿಯಲ್ಲಿ ಆಸ್ತಿಗಳನ್ನು ಸಂಪೂರ್ಣವಾಗಿ ಘೋಷಿಸದಿರುವ ಬಗ್ಗೆ ಬಿಜೆಪಿ ಮುಖಂಡ ದಿನೇಶ್‌ ಹೊಸೂರು ಜನಪ್ರತಿನಿಧಿಗಳ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದರು.

ಜನಪ್ರತಿನಿಧಿಗಳ ನ್ಯಾಯಾಲಯದ ಸೂಚನೆ ಮೇರೆಗೆ ಲೋಕಾಯುಕ್ತ ಕಚೇರಿಯಲ್ಲಿ ಪ್ರಕರಣ ದಾಖಲಾಗಿ, ಚಿಕ್ಕಮಗಳೂರಿನ ಬಸಾಪುರದಲ್ಲಿರುವ ರಾಜೇಗೌಡರ ಮನೆಯಲ್ಲಿ ಲೋಕಾಯುಕ್ತ ಪೊಲೀಸರು ಪರಿಶೀಲನೆ ನಡೆಸುತ್ತಿದ್ದಾರೆ.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande