ಹಾಸನ, 30 ಸೆಪ್ಟೆಂಬರ್ (ಹಿ.ಸ.) :
ಆ್ಯಂಕರ್ : ಹಾಸನ ಜಿಲ್ಲೆಯ ಆಲೂರು ತಾಲೂಕಿನ ಹಳೇಆಲೂರು ಗ್ರಾಮದಲ್ಲಿ ಮನೆಯಲ್ಲಿ ಸಂಭವಿಸಿದ ನಿಗೂಢ ಸ್ಫೋಟದಿಂದ ದಂಪತಿ ಗಂಭೀರವಾಗಿ ಗಾಯಗೊಂಡ ಘಟನೆ ನಡೆದಿದೆ. ಗಾಯಗೊಂಡವರನ್ನು ಸುದರ್ಶನ್ ಆಚಾರ್ ಹಾಗೂ ಪತ್ನಿ ಕಾವ್ಯ ಎಂದು ಗುರುತಿಸಲಾಗಿದೆ.
ಘಟನೆಯಲ್ಲಿ ಗಾಯಗೊಂಡ ಇಬ್ಬರಿಗೂ ಹಾಸನದ ಹಿಮ್ಸ್ ಆಸ್ಪತ್ರೆಯಲ್ಲಿ ಪ್ರಾಥಮಿಕ ಚಿಕಿತ್ಸೆ ನೀಡಿ, ಹೆಚ್ಚಿನ ಚಿಕಿತ್ಸೆಗೆ ಬೆಂಗಳೂರಿನ ಆಸ್ಪತ್ರೆಗೆ ಸ್ಥಳಾಂತರಿಸಲಾಗಿದೆ.
ಸ್ಫೋಟಕ್ಕೆ ನಿಖರ ತಿಳಿದುಬಂದಿಲ್ಲ ಆಲೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ತನಿಖೆ ಮುಂದುವರೆದಿದೆ.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa