ನವದೆಹಲಿ, 05 ಸೆಪ್ಟೆಂಬರ್ (ಹಿ.ಸ.) :
ಆ್ಯಂಕರ್ : ತೆರಿಗೆ ವಂಚನೆ, ಅಕ್ರಮ ಜೂಜಾಟ ಹಾಗೂ ಹಣ ವರ್ಗಾವಣೆ ಪ್ರಕರಣಗಳಲ್ಲಿ ಬೇಕಾಗಿದ್ದ ಹರ್ಷಿತ್ ಬಾಬುಲಾಲ್ ಜೈನ್ ಅವರನ್ನು ಯುನೈಟೆಡ್ ಅರಬ್ ಎಮಿರೇಟ್ಸ್‌ನಿಂದ ಭಾರತಕ್ಕೆ ಹಸ್ತಾಂತರಿಸಲಾಗಿದೆ.
ಇಂದು ಅಹಮದಾಬಾದ್ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಅವರನ್ನು ಗುಜರಾತ್ ಪೊಲೀಸರಿಗೆ ಹಸ್ತಾಂತರ ಮಾಡಲಾಗಿದೆ. ಈ ಕಾರ್ಯಾಚರಣೆಯಲ್ಲಿ ಸಿಬಿಐ, ಗುಜರಾತ್ ಪೊಲೀಸ್, ವಿದೇಶಾಂಗ ಸಚಿವಾಲಯ ಮತ್ತು ಗೃಹ ಸಚಿವಾಲಯ ಪರಸ್ಪರ ಸಹಕಾರದಿಂದ ಕಾರ್ಯನಿರ್ವಹಿಸಿವೆ.
ಸಿಬಿಐ ಪ್ರಕಾರ, ಜೈನ್ ವಿರುದ್ಧ 2023 ಆಗಸ್ಟ್ 9 ರಂದು ಇಂಟರ್‌ಪೋಲ್ ಮೂಲಕ ರೆಡ್ ನೋಟಿಸ್ ಹೊರಡಿಸಲಾಗಿತ್ತು. ಅದಾದ ಬಳಿಕ ಯುಎಇ ಅಧಿಕಾರಿಗಳ ಸಹಕಾರದಿಂದ ಅವರನ್ನು ಗಡಿಪಾರು ಮಾಡಿ ಭಾರತಕ್ಕೆ ಕರೆತರಲಾಯಿತು.
ಸಿಬಿಐ ಇಂಟರ್‌ಪೋಲ್‌ನ ರಾಷ್ಟ್ರೀಯ ಕೇಂದ್ರೀಯ ಬ್ಯೂರೋ ಆಗಿ ಕಾರ್ಯನಿರ್ವಹಿಸುತ್ತಿದ್ದು, ಇಂಟರ್‌ಪೋಲ್‌ನಿಂದ ಬರುವ ಎಲ್ಲಾ ವಿನಂತಿಗಳು ಮತ್ತು ಮಾಹಿತಿಯನ್ನು ಸಂಗ್ರಹಿಸಿ ದೇಶದ ತನಿಖಾ ಸಂಸ್ಥೆಗಳಿಗೆ ರವಾನಿಸುತ್ತದೆ.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa