ಮೌಲ್ಯಾಧಾರಿತ ಶಿಕ್ಷಣ ಅವಶ್ಯ : ಸಚಿವ ತಿಮ್ಮಾಪೂರ
ವಿಜಯಪುರ, 05 ಸೆಪ್ಟೆಂಬರ್ (ಹಿ.ಸ.) : ಆ್ಯಂಕರ್ : ಶಿಕ್ಷಣದ ಜೊತೆಗೆ ತಂದೆ, ತಾಯಿ, ಗುರುಗಳು, ಹಿರಿಯರು ಸರಿ, ತಪ್ಪು, ನ್ಯಾಯ ನೀತಿಗಳಿಗೆ ಗೌರವ ನೀಡುವಂತಹ ಮೌಲ್ಯಾಧಾರಿತ ಶಿಕ್ಷಣದ ಅವಶ್ಯಕತೆ ಇದೆ ಎಂದು ಅಬಕಾರಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಆರ್.ಬಿ.ತಿಮ್ಮಾಪೂರ ಹೇಳಿದರು. ನವನಗರದ ಕಲಾಭವನದಲ್ಲಿ
ತಿಮ್ಮಾಪುರ


ವಿಜಯಪುರ, 05 ಸೆಪ್ಟೆಂಬರ್ (ಹಿ.ಸ.) :

ಆ್ಯಂಕರ್ : ಶಿಕ್ಷಣದ ಜೊತೆಗೆ ತಂದೆ, ತಾಯಿ, ಗುರುಗಳು, ಹಿರಿಯರು ಸರಿ, ತಪ್ಪು, ನ್ಯಾಯ ನೀತಿಗಳಿಗೆ ಗೌರವ ನೀಡುವಂತಹ ಮೌಲ್ಯಾಧಾರಿತ ಶಿಕ್ಷಣದ ಅವಶ್ಯಕತೆ ಇದೆ ಎಂದು ಅಬಕಾರಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಆರ್.ಬಿ.ತಿಮ್ಮಾಪೂರ ಹೇಳಿದರು.

ನವನಗರದ ಕಲಾಭವನದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ, ಉಪನಿರ್ದೇಶಕರ ಹಾಗೂ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಾರ್ಯಾಲಯ ಶಾಲಾ ಶಿಕ್ಷಣ ಸಂಸ್ಥೆ ಸಹಯೋಗದಲ್ಲಿ ಹಮ್ಮಿಕೊಂಡ ಜಿಲ್ಲಾ ಮಟ್ಟದ ಶಿಕ್ಷಕರ ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.

ಕಳೆದ ೧೫-೨೦ ವರ್ಷಗಳಲ್ಲಿ ನಾವು ಕಂಡು ಅರಿಯದ ರೀತಿಯಲ್ಲಿ ಬದಲಾವಣೆ ಕಾಣುತ್ತಿದ್ದೇವೆ. ಸರಕಾರಿ ಶಾಲೆ ಹಾಗೂ ಖಾಸಗಿ ಶಾಲೆಗಳ ನಡುವೆ ಇಂದಿನ ಆನ್‌ಲೈನ್ ಪಾಠದ ಗುರು ಇಂದಿನ ವೈಜ್ಞಾನಿಕ ಯುಗದಲ್ಲಿ ದೊಡ್ಡ ಗುರುಗಳಾಗಿ ಪರಿಣಮಿಸಿದ್ದಾರೆ. ಗುರು-ಶಿಷ್ಯರ ಸಂಬ0ದ ಕಡಿಮೆಯಾಗುತ್ತಿರುವುದು ಕಳವಳಕಾರಿ ಸಂಗತಿ ಎಂದರು.

ಮೊಬೈಲ್ ಸೇರಿದಂತೆ ಆಧುನಿಕ ತಂತ್ರಜ್ಞಾನ ಮಾಹಿತಿಯುಳ್ಳ ಇಂದಿನ ಮಕ್ಕಳು ಶಿಕ್ಷಕರನ್ನೇ ಮೂಖರನ್ನಾಗುವಂತೆ ಪ್ರಶ್ನೆಗಳನ್ನು ಕೇಳುತ್ತಿರುವುದರಿಂದ ಶಿಕ್ಷಕರು ಇಂದಿನ ಮಕ್ಕಳಿಗೆ ಬೇಕಾಗುವಂತಹ ವಿಷಯಗಳ ಬಗ್ಗೆ ಅಧ್ಯಯನ ಮಾಡಬೇಕಾದ ಕಾಲ ಬಂದಿದೆ. ಶಿಕ್ಷಕರು ಪ್ರತಿನಿತ್ಯ ಕಲಿತು ಮಕ್ಕಳ ಜೊತೆ ಮಕ್ಕಳಾಗಿ ಬೋಧಿಸಬೇಕಾಗಿದೆ. ಗುರು-ಶಿಷ್ಯರ ಸಂಬ0ದ ತಂದೆ-ತಾಯಿ ಸಂಬ0ಧಕ್ಕಿ0ತ ಹೆಚ್ಚು ಪರಿಣಾಮಕಾರಿಯಾಗಿದೆ. ವಿದ್ಯಾರ್ಥಿಗಳು ಕೇವಲ ಹೆಚ್ಚು ಅಂಕ ಪಡೆಯುವದರಿಂದ ಎಲ್ಲವನ್ನು ಕಲಿಯಲು ಸಾಧ್ಯವಿಲ್ಲ. ಮುಂದಿನ ಪೀಳಿಗೆ ಉತ್ತಮವಾಗಿರಬೇಕಾದರೆ ಮೌಲ್ಯಾಧಾರಿತ ಶಿಕ್ಷಣದ ಅವಶ್ಯಕತೆ ಇದೆ ಎಂದು ತಿಳಿಸಿದರು.

ಸಂಸದ ಪಿ.ಸಿ.ಗದ್ದಿಗೌಡ ಮಾತನಾಡಿ ಅಕ್ಷರ ಜ್ಞಾನದ ಜೊತೆಗೆ ಮಾನವೀಯ ಮೌಲ್ಯವನ್ನು ಕೊಟ್ಟು ಬದುಕನ್ನು ರೂಪಿಸಿಕೊಟ್ಟ ಶಿಕ್ಷಕರನ್ನು ನೆನಪಿಸಿಕೊಳ್ಳುವ ಮಹತ್ವದ ದಿನವಾಗಿದೆ. ಮಕ್ಕಳಿಗೆ ಪಠ್ಯದ ಜೊತೆಗೆ ಕೌಶಲ್ಯಾಭಿವೃದ್ದಿ ಯಂತಹ ಶಿಕ್ಷಣ ನೀಡಿದಲ್ಲಿ ಕಲಿತ ವಿದ್ಯೆಯಿಂದ ಸ್ವಯಂ ಉದ್ಯೋಗ ಪ್ರಾರಂಭಿಸಿ ಆರ್ಥಿಕ, ಸಾಮಾಜಿಕ ಬೆಳೆವಣಿಗೆ ಹೊಂದಲು ಸಾದ್ಯವಾಗುತ್ತದೆ. ಗುರುಭವನ ನಿರ್ಮಾಣಕ್ಕೆ ಅನುಧಾನ ನೀಡುವುದಾಗಿ ತಿಳಿಸಿದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಶಾಸಕ ಹಾಗೂ ಬಿಟಿಡಿಎ ಅಧ್ಯಕ್ಷ ಎಚ್.ವಾಯ್.ಮೇಟಿ ಮಾತನಾಡಿ ಶಿಕ್ಷಕರ ವೃತ್ತಿ ಪವಿತ್ರವಾಗಿದ್ದು, ಪ್ರತಿಯೊಬ್ಬ ಶಿಕ್ಷಕ ತಾನು ಶಿಕ್ಷಣ ನೀಡಿದ ವಿದ್ಯಾರ್ಥಿ ಸಮಾಜದಲ್ಲಿ ಒಳ್ಳೆಯ ಕೆಲಸ ಮತ್ತು ಕೆಟ್ಟ ಕೆಲಸ ಮಾಡಿದರೂ ಶಿಕ್ಷಕರ ಮೇಲೆ ಬರುತ್ತದೆ. ಈ ನಿಟ್ಟಿನಲ್ಲಿ ಶಿಕ್ಷಕರು ಜಾಗೃತಿಯಿಂದ ಕೆಲಸ ಮಾಡಬೇಕು ಎಂದರು.

ನವನಗರದಲ್ಲಿ ನಿರ್ಮಿಸಲು ಉದ್ದೇಶಿಸಲಾದ ಗುರುಭವನಕ್ಕೆ ಅನುದಾನ ನೀಡುವ ಭರವಸೆ ನೀಡಿದರು.

ಜಿಲ್ಲಾಧಿಕಾರಿ ಸಂಗಪ್ಪ ಮಾತನಾಡಿ ಶಿಕ್ಷಕರನ್ನು ದೇವರ ಸಮಾನರಾಗಿ ಕಾಣಲಾಗುತ್ತಿದ್ದು, ಅದರಿಂದಲೇ ಗುರುಬ್ರಹ್ಮ ಗುರುವಿಷ್ಣು ಗುರುದೇವೋ ಮಹೇಶ್ವರ, ಗುರುಸಾಕ್ಷಾತ್ ಪರಬ್ರಹ್ಮ ಎಂಬ ನುಡಿ ಅನಾದಿಕಾಲದಿಂದಲೂ ಬಂದಿದೆ. ಶಿಕ್ಷಕರಾದವರು ಮಕ್ಕಳ ಜೊತೆ ಪ್ರೀತಿಯಿಂದ ನಡೆದುಕೊಳ್ಳಬೇಕು. ಅಂದಾಗ ಮಾತ್ರ ಮಗುವಿನಲ್ಲಿರುವ ಮನಸ್ಸನ್ನು ಗೆಲ್ಲಲು ಸಾಧ್ಯವಾಗುತ್ತದೆ. ಇದರಿಂದ ವಿದ್ಯಾರ್ಥಿಗಳಲ್ಲಿ ಕಾಣಬಹುದಾದ ಮನೋಕಾಯಿಲೆಯಿಂದ ಮುಕ್ತಗೊಳಿಸಲು ಸಾಧ್ಯವಾಗುತ್ತದೆ ಎಂದರು.

ಪ್ರಾರಂಭದಲ್ಲಿ ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಶಶಿಧರ ಕುರೇರ ಪ್ರಾಸ್ತಾವಿಕವಾಗಿ ಮಾತನಾಡಿದರು.

ನವನಗರದ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಸಹ ಪ್ರಾದ್ಯಾಪಕ ಜಿ.ಜಿ.ಹಿರೇಮಠ ಶಿಕ್ಷಕ ದಿನಾಚರಣೆ ಕುರಿತು ಉಪನ್ಯಾಸ ನೀಡಿದರು.

ಕಾರ್ಯಕ್ರಮದಲ್ಲಿ ನಗರಸಭೆ ಅಧ್ಯಕ್ಷೆ ಸವಿತಾ ಲೆಂಕನ್ನವರ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸಿದ್ದಾರ್ಥ ಗೋಯಲ್, ಉಪ ವಿಭಾಗಾಧಿಕಾರಿ ಸಂತೋಷ ಜಗಲಾಸರ, ಶಾಲಾ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಎ.ಸಿ.ಮನ್ನಿಕೇರಿ, ತಾ.ಪಂ ಕಾರ್ಯನಿರ್ವಾಹಕ ಅಧಿಕಾರಿ ಸುಭಾಸ ಸಂಪಗಾವಿ, ಕ್ಷೇತ್ರ ಶಿಕ್ಷಣಾಧಿಕಾರಿ ಎಂ.ಎಸ್.ಬಡದಾನಿ ಸೇರಿದಂತೆ ವಿವಿಧ ಶಿಕ್ಷಕರ ಸಂಘದ ಪದಾಧಿಕಾರಿಗಳು ಉಪಸ್ಥಿತರಿದ್ದರು.

ಹಿಂದೂಸ್ತಾನ್ ಸಮಾಚಾರ್ / jyothi deshpande


 rajesh pande