ವೃಕ್ಷಥಾನ್ ಹೆರಿಟೇಜ್ ರನ್- 2025 ಸಸಿ ನೆಡುವ ಮೂಲಕ ಸಂಭ್ರಮ
ವಿಜಯಪುರ, 05 ಸೆಪ್ಟೆಂಬರ್ (ಹಿ.ಸ.) : ಆ್ಯಂಕರ್ : ಬಸವನಾಡಿನಲ್ಲಿ ಪ್ರಾರಂಭವಾದ ಕೋಟಿ ವೃಕ್ಷ ಅಭಿಯಾನದ ಯಶೋಗಾಥೆ ವಿಶ್ವಾದ್ಯಂತ ಸದ್ದು ಮಾಡಿದ್ದು, ಅಮೇರಿಕದ ಪ್ರತಿಷ್ಠಿತ ನ್ಯೂಯಾರ್ಕ್ ಟೈಮ್ಸ್ ಪತ್ರಿಕೆ ಈ ಕುರಿತು ವಿಶೇಷ ವರದಿ ಪ್ರಕಟಿಸಿದೆ. ಈ ಸಂತಸವನ್ನು ವೃಕ್ಷಥಾನ್ ಹೆರಿಟೇಜ್ ರನ್- 2025 ಕೋರ್ ಕಮಿ
ಸಸಿ


ವಿಜಯಪುರ, 05 ಸೆಪ್ಟೆಂಬರ್ (ಹಿ.ಸ.) :

ಆ್ಯಂಕರ್ : ಬಸವನಾಡಿನಲ್ಲಿ ಪ್ರಾರಂಭವಾದ ಕೋಟಿ ವೃಕ್ಷ ಅಭಿಯಾನದ ಯಶೋಗಾಥೆ ವಿಶ್ವಾದ್ಯಂತ ಸದ್ದು ಮಾಡಿದ್ದು, ಅಮೇರಿಕದ ಪ್ರತಿಷ್ಠಿತ ನ್ಯೂಯಾರ್ಕ್ ಟೈಮ್ಸ್ ಪತ್ರಿಕೆ ಈ ಕುರಿತು ವಿಶೇಷ ವರದಿ ಪ್ರಕಟಿಸಿದೆ. ಈ ಸಂತಸವನ್ನು ವೃಕ್ಷಥಾನ್ ಹೆರಿಟೇಜ್ ರನ್- 2025 ಕೋರ್ ಕಮಿಟಿ ಸದಸ್ಯರು ಸಸಿ ನೆಡುವ ಮೂಲಕ ಸಂಭ್ರಮಿಸಿದರು.

ಇಂದು ಶುಕ್ರವಾರ ಬಿ.ಎಲ್.ಡಿ.ಇ‌ ಸಂಸ್ಥೆಯ ಆವರಣದಲ್ಲಿರುವ ವೃಕ್ಷಥಾನ್ ಹೆರಿಟೇಜ್ ರನ್ ಕಚೇರಿಯ ಬಳಿ ನಡೆದ ಕಾರ್ಯಕ್ರಮದಲ್ಲಿ ಇಂಗ್ಲೆಂಡ್ ನಲ್ಲಿ ನೆಲೆಸಿರುವ ವಿಜಯಪುರ ಮೂಲದ ಸಾಫ್ಟವೇರ್ ಎಂಜಿನಿಯರ್ ಸದಾನಂದ ಬಿರಾದಾರ ಅವರು ಸಸಿ ನೆಟ್ಟರು.

ಈ ಸಂದರ್ಭದಲ್ಲಿ ಮಾತನಾಡಿದ ಅವರು, ಆಧುನಿಕ‌ ಭಗೀರಥ ಎಂ. ಬಿ. ಪಾಟೀಲ‌ ಅವರ ಕನಸಿನ ಕೂಸಾದ ಕೋಟಿ ವೃಕ್ಷ ಅಭಿಯಾನ ಇಂದು ಯಶಸ್ವಿಯಾಗಿ ಇಡೀ ಪ್ರಪಂಚವನ್ನು ತಲುಪಿದೆ. ಅದೇ ರೀತಿ ಜಲ, ನೀರು, ಶಿಕ್ಷಣ ಹಾಗೂ ಆರೋಗ್ಯ ಧ್ಯೇಯವನ್ನೊಳಗೊಂಡಿರುವ ವೃಕ್ಷಥಾನ್ ಹೆರಿಟೇಜ್ ರನ್ ಕೂಡ ಶೀಘ್ರದಲ್ಲಿ ಜಗತ್ತಿನಾದ್ಯಂತ ಖ್ಯಾತಿ ಪಡೆಯಲಿದೆ ಎಂದು ವಿಶ್ವಾಸ ವ್ಯಕ್ಯಪಡಿಸಿದರು.

ಬಳಿಕ ನಡೆದ ಕೋರ್ ಕಮಿಟಿ ಸಭೆಯಲ್ಲಿ ಡಾ. ಮಹಾಂತೇಶ ಬಿರಾದಾರ ಅವರು ಡಿಸೆಂಬರ್ 7ರಂದು ನಡೆಯಲಿರುವ ಹೆರಿಟೇಜ್ ರನ್- 2025ರ ಪೂರ್ವ ಸಿದ್ಧತೆಗಳ ಸಭೆ ನಡೆಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಅವರು, ಈ ಬಾರಿ ರಾಜ್ಯ, ದೇಶ ಮತ್ತು ವಿದೇಶಗಳಿಂದ ಸುಮಾರು‌15 ಸಾವಿರ ಓಟಗಾರರು ಪಾಲ್ಗೊಳ್ಳುವ ನಿರೀಕ್ಷೆಯಿದೆ. ಹೆಸರಾಂತ ಓಟಗಾರರು, ಗಣ್ಯರು ಕೂಡ ಇದರಲ್ಲಿ ಪಾಲ್ಗೊಳ್ಳಲಿದ್ದಾರೆ. ಈಗಿನಿಂದಲೇ ಎಲ್ಲ ಸಮಿತಿ ಸದಸ್ಯರು ಯೋಜನಾಬದ್ಧವಾಗಿ ಕಾರ್ಯೋನ್ಮುಖರಾಗಬೇಕು ಎಂದು ಹೇಳಿದರು.

ಈ ಸಂದರ್ಭದಲ್ಲಿ ವೃಕ್ಷಥಾನ್ ಹೆರಿಟೇಜ್ ರನ್ ಸಂಚಾಲಕ ಮುರುಗೇಶ ಪಟ್ಟಣಶೆಟ್ಡಿ, ಶಂಭು ಕರ್ಪೂರಮಠ, ವೀರೇಂದ್ರ ಗುಚ್ಚೆಟ್ಟಿ, ಡಾ. ರಾಜು ಯಲಗೊಂಡ, ಸಂತೋಷ ಔರಸಂಗ, ಶಿವನಗೌಡ ಪಾಟೀಲ, ಸೋಮಶೇಖರ ಸ್ವಾಮಿ, ಸೋಮು ಮಠ, ಸಂಕೇತ ಬಗಲಿ, ಅಪ್ಪು ಭೈರಗೊಂಡ, ಡಾ. ಪ್ರವೀಣ ಚೌರ, ಎಂ. ಎನ್. ಕುಪ್ಪಿ, ವಿಜಯಕುಮಾರ ಕೋರಿ, ಕನಕರಡ್ಡಿ, ಉಪಾಸೆ, ಸಮೀರ ಬಳಿಗಾರ, ಡಾ. ಅಮೀತ, ಉಮೇಶ ಮೆಟಗಾರ, ದಿನೇಶ ಹಳ್ಳಿ, ಅಶ್ಪಾಕ್ ಮನಗೂಳಿ, ಅಮಿತ ಬಿರಾದಾರ, ಜಗದೀಶ ಪಾಟೀಲ, ಮಹೇಶ ವಿ. ಶಟಗಾರ, ಶ್ರೀಕಾಂತ ಹಡಲಗೇರಿ, ನವೀದ ನಾಗಠಾಣ, ವೀಣಾ ದೇಶಪಾಂಡೆ, ನಾಗೇಂದ್ರ ಹಳೆಪ್ಪಗೋಳ ಮುಂತಾದವರು ಉಪಸ್ಥಿತರಿದ್ದರು.

ಹಿಂದೂಸ್ತಾನ್ ಸಮಾಚಾರ್ / jyothi deshpande


 rajesh pande