ಮತಗಳ್ಳತನ ವಿರುದ್ದ ಜಿಲ್ಲಾ ಯುವ ಕಾಂಗ್ರೆಸ್ ನಿಂದ ಪಂಜಿನ ಮೆರವಣಿಗೆ
ಮತಗಳ್ಳತನ ವಿರುದ್ದ ಜಿಲ್ಲಾ ಯುವ ಕಾಂಗ್ರೆಸ್ ನಿಂದ ಇಂದು ಸಂಜೆ ಪಂಜಿನ ಮೆರವಣಿಗೆ
ಮತಗಳ್ಳತನ ವಿರುದ್ದ ಜಿಲ್ಲಾ ಯುವ ಕಾಂಗ್ರೆಸ್ ನಿಂದ ಪಂಜಿನ ಮೆರವಣಿಗೆ


ಕೋಲಾರ, 0೬ ಸೆಪ್ಟೆಂಬರ್ (ಹಿ.ಸ) :

ಆ್ಯಂಕರ್ : ದೇಶದಲ್ಲಿ ನಡೆಯುತ್ತಿರುವ ಮತಗಳ್ಳತನ ವಿರುದ್ಧ ಜನಜಾಗೃತಿ ಮೂಡಿಸುತ್ತಿರುವ ಲೋಕ ಸಭೆಯ ವ

ಪ್ರತಿಪಕ್ಷ ನಾಯಕ ರಾಹುಲ್ ಗಾಂಧಿಯವರಿಗೆ ಬೆಂಬಲವಾಗಿ ಕೋಲಾರ ಜಿಲ್ಲಾ ಯುವ ಕಾಂಗ್ರೆಸ್ ಘಟಕದ ನೇತೃತ್ವದಲ್ಲಿ ಸೆ.೭ ರಂದು ಭಾನುವಾರ ಸಂಜೆ ನಗರದಲ್ಲಿ ೬ ಗಂಟೆಗೆ ಪಂಜಿನ ಮೆರವಣಿಗೆ ನಡೆಯಲಿದೆ ಎಂದು ಯುವ ಕಾಂಗ್ರೆಸ್ ಜಿಲ್ಲಾ ಅಧ್ಯಕ್ಷ ಸೈಯದ್ ಆಫ್ರಿದ್ ತಿಳಿಸಿದರು.

ನಗರದ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ನಡೆದ ಸಭೆಯಲ್ಲಿ ಮಾತನಾಡಿದ ಅವರು ಮತಗಳ್ಳತನದ ಮೂಲಕ ಕೇಂದ್ರದಲ್ಲಿ ಅಧಿಕಾರದ ಚುಕ್ಕಾಣಿ ಹಿಡಿರುವ ಎನ್‌ಡಿಎ ಸರ್ಕಾರಕ್ಕೆ ಅಧಿಕಾರದಲ್ಲಿ ಮುಂದುವರಿಯುವ ಯಾವುದೇ ನೈತಿಕ ಹಕ್ಕಿಲ್ಲ. ಈ ಹಿನ್ನೆಲೆಯಲ್ಲಿ ಕೂಡಲೇ ಕೇಂದ್ರ ಸರ್ಕಾರವನ್ನು ವಿಸರ್ಜನೆ ಮಾಡಬೇಕು ಎಂದು ಒತ್ತಾಯಿಸಿ ಅವರು ಇದರ ವಿರುದ್ದವಾಗಿ ನಗರದ ಇಟಿಸಿಎಂ ವೃತ್ತದಲ್ಲಿ ಸಂಜೆ ೬ ಗಂಟೆಗೆ ಪಂಜಿನ ಮೆರವಣಿಗೆ ಪ್ರಾರಂಭವಾಗಿ ಕಾಲೇಜು ವೃತ್ತದಲ್ಲಿ ಸಭೆ ನಡೆಸುವ ಮೂಲಕ ರಾಹುಲ್ ಗಾಂಧಿಯವರ ಹೋರಾಟಕ್ಕೆ ಬೆಂಬಲಿಸಲಾಗುತ್ತದೆ ಎಂದು ತಿಳಿಸಿದರು.

ಪಂಜಿನ ಮೆರವಣಿಗೆಯನ್ನು ಯುವ ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ಉದಯ್ ಬಾನು ಚೀಫ್ ಉದ್ಘಾಟಿಸಲಿದ್ದು, ರಾಜ್ಯ ಅಧ್ಯಕ್ಷ ಮಂಜುನಾಥ್ ಗೌಡ ಜಿಲ್ಲಾ ಉಸ್ತುವಾರಿಗಳಾದ ಶಶಾಂಕ್, ಸುನಿಲ್ ಗೌಡ, ಭರತ್, ಬಾಲಪ್ರದೀಪ್ ಸೇರಿದಂತೆ ರಾಜ್ಯ ಮತ್ತು ಜಿಲ್ಲಾ ಮುಖಂಡರು ಭಾಗವಹಿಸಲಿದ್ದು ಜಿಲ್ಲೆಯ ಯುವ ಕಾಂಗ್ರೆಸ್ ಪದಾಧಿಕಾರಿಗಳು ಕಾರ್ಯಕರ್ತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಮನವಿ ಮಾಡಿದರು.

ಈ ಸಭೆಯಲ್ಲಿ ಜಿಲ್ಲೆಯ ಆರು ವಿಧಾನ ಸಭಾ ಕ್ಷೇತ್ರದ ಯುವ ಕಾಂಗ್ರೆಸ್ ಅಧ್ಯಕ್ಷರು ಪದಾಧಿಕಾರಿಗಳು ಭಾಗವಹಿಸಿದ್ದರು.

ಹಿಂದೂಸ್ತಾನ್ ಸಮಾಚಾರ್ / ಎಸ್.ಚಂದ್ರಶೇಖರ್


 rajesh pande