ಬಳ್ಳಾರಿ : ನಾಳೆಯಿಂದ `ಭೌತಿಕ್ - 2025'
ಬಳ್ಳಾರಿ, 08 ಸೆಪ್ಟೆಂಬರ್ (ಹಿ.ಸ.) : ಆ್ಯಂಕರ್ : ಬಳ್ಳಾರಿ ಜಿಲ್ಲಾ ಪದವಿ ಪೂರ್ವ ಕಾಲೇಜು ಭೌತಶಾಸ್ತ್ರ ಉಪನ್ಯಾಸಕರ ವೇದಿಕೆ, ಶಾಲಾ ಶಿಕ್ಷಣ ಇಲಾಖೆ (ಪದವಿ ಪೂರ್ವ) ಹಾಗೂ ವಾಡ್ಲಾ ಸಂಯುಕ್ತ ಪದವಿ ಪೂರ್ವ ಕಾಲೇಜಿನ ಸಂಯುಕ್ತಾಶ್ರಯದಲ್ಲಿ ಸೆಪ್ಟಂಬರ್ 9 ಮತ್ತು 10 ರಂದು `ಭೌತಿಕ್ - 2025'' ಭೌತ ವಿಜ್
ಬಳ್ಳಾರಿ : ಸೆಪ್ಟಂಬರ್ 9 ಮತ್ತು 10 ರಂದು `ಭೌತಿಕ್ - 2025'


ಬಳ್ಳಾರಿ, 08 ಸೆಪ್ಟೆಂಬರ್ (ಹಿ.ಸ.) :

ಆ್ಯಂಕರ್ : ಬಳ್ಳಾರಿ ಜಿಲ್ಲಾ ಪದವಿ ಪೂರ್ವ ಕಾಲೇಜು ಭೌತಶಾಸ್ತ್ರ ಉಪನ್ಯಾಸಕರ ವೇದಿಕೆ, ಶಾಲಾ ಶಿಕ್ಷಣ ಇಲಾಖೆ (ಪದವಿ ಪೂರ್ವ) ಹಾಗೂ ವಾಡ್ಲಾ ಸಂಯುಕ್ತ ಪದವಿ ಪೂರ್ವ ಕಾಲೇಜಿನ ಸಂಯುಕ್ತಾಶ್ರಯದಲ್ಲಿ ಸೆಪ್ಟಂಬರ್ 9 ಮತ್ತು 10 ರಂದು `ಭೌತಿಕ್ - 2025' ಭೌತ ವಿಜ್ಞಾನ ವಸ್ತು ಪ್ರದರ್ಶನ ಮತ್ತು ಪ್ರತಿಭಾ ಪುರಸ್ಕಾರ ಸಮಾರಂಭ ನಡೆಯಲಿದೆ.

ಈ ಕುರಿತು ಬಳ್ಳಾರಿ ಜಿಲ್ಲಾ ಪದವಿ ಪೂರ್ವ ಕಾಲೇಜು ಭೌತಶಾಸ್ತ್ರ ಉಪನ್ಯಾಸಕರ ವೇದಿಕೆಯ ಅಧ್ಯಕ್ಷರಾದ ಕೆ.ಬಿ. ವೀರಭದ್ರಪ್ಪ ಪತ್ರಿಕಾ ಪ್ರಕಟಣೆ ನೀಡಿದ್ದಾರೆ.

`ಭೌತಿಕ್ - 2025' ಭೌತ ವಿಜ್ಞಾನ ವಸ್ತು ಪ್ರದರ್ಶನ ಮತ್ತು ಪ್ರತಿಭಾ ಪುರಸ್ಕಾರ ಸೆಪ್ಟಂಬರ್ 9ರ ಮಂಗಳವಾರ ಬೆಳಗ್ಗೆ 11 ಗಂಟೆಗೆ ವಾಡ್ಲಾ ಕಾಲೇಜಿನ ಆವರಣದಲ್ಲಿ ಇರುವ ಜಾನ್ ಹ್ಯಾಂಡ್ ಮೆಮೋರಿಯಲ್ ಹಾಲ್‍ನಲ್ಲಿ ಉದ್ಘಾಟನೆ ಆಗಲಿದೆ. ಸೆಪ್ಟಂಬರ್ 10ರ ಸಂಜೆ 3 ಗಂಟೆಗೆ ಸಮಾರೋಪಗೊಳ್ಳಲಿದೆ ಎಂದು ಅವರು ತಿಳಿಸಿದ್ದಾರೆ.

ಶಾಲಾ ಶಿಕ್ಷಣ ಇಲಾಖೆ (ಪದವಿ ಪೂರ್ವ)ಯ ಬಳ್ಳಾರಿ ಜಿಲ್ಲಾ ಉಪ ನಿರ್ದೇಶಕರಾದ ಕೆ.ಬಿ.ಎಂ. ನಾಗಲಿಂಗಸ್ವಾಮಿ ಅವರು ಉದ್ಘಾಟನೆ ಮಾಡುವರು. ವಾಡ್ಲಾ ಕಾಲೇಜಿನ ಪ್ರಾಂಶುಪಾಲರಾದ ಅಗಸ್ಟೀನ್ ಲೂಥರ್ ಕಿಂಗ್ ಅವರು ಅಧ್ಯಕ್ಷತೆವಹಿಸುವರು.

ಬಳ್ಳಾರಿ ಜಿಲ್ಲಾ ಪದವಿ ಪೂರ್ವ ಕಾಲೇಜು ಭೌತಶಾಸ್ತ್ರ ಉಪನ್ಯಾಸಕರ ವೇದಿಕೆಯ ಅಧ್ಯಕ್ಷರಾದ ಕೆ.ಬಿ. ವೀರಭದ್ರಪ್ಪ ಮತ್ತು ವಾಡ್ಲಾ ಕಾಲೇಜಿನ ಆಡಳಿತಾಧಿಕಾರಿ ವಿಕ್ಟರ್ ಇಮ್ಯಾನಯಲ್ ಅವರು ವೇದಿಕೆಯಲ್ಲಿ ಉಪಸ್ಥಿತರಿರಲಿದ್ದಾರೆ.

ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್


 rajesh pande