ಶ್ರೀನಗರ, 08 ಸೆಪ್ಟೆಂಬರ್ (ಹಿ.ಸ.) :
ಆ್ಯಂಕರ್ : ಜಮ್ಮು-ಕಾಶ್ಮೀರದ ಕುಲ್ಗಾಮ್ ಜಿಲ್ಲೆಯ ಗುಡ್ಡಾರ್ ಅರಣ್ಯ ಪ್ರದೇಶದಲ್ಲಿ ನಡೆದ ಗುಂಡಿನ ಚಕಮಕಿಯಲ್ಲಿ ಒಬ್ಬ ಭಯೋತ್ಪಾದಕ ಹತ್ಯೆಯಾಗಿದ್ದು, ಸೇನೆಯ ಓರ್ವ ಜೂನಿಯರ್ ಕಮಿಷನ್ಡ್ ಅಧಿಕಾರಿ ಗಾಯಗೊಂಡಿದ್ದಾರೆ.
ಪೊಲೀಸರ ಗುಪ್ತಚರ ಮಾಹಿತಿಯ ಆಧಾರದ ಮೇಲೆ ಸೇನೆ ಹಾಗೂ ಪೊಲೀಸರು ಜಂಟಿ ಶೋಧ ಕಾರ್ಯಾಚರಣೆ ವೇಳೆ ಭದ್ರತಾ ಪಡೆಗಳಯ ಹಾಗೂ ಭಯೋತ್ಪಾದಕರ ನಡುವೆ ತೀವ್ರ ಗುಂಡಿನ ಚಕಮಕಿ ನಡೆದಿದ್ದು ಈ ವೇಳೆ ಓರ್ವ ಭಯೋತ್ಪಾದಕ ಹತನಾಗಿದ್ದಾನೆ
ಘಟನೆ ಕುರಿತು ಸೇನೆ ಪ್ರಕಟಣೆ ಬಿಡುಗಡೆ ಮಾಡಿದ್ದು, ಓರ್ವ ಭಯೋತ್ಪಾದಕ ಹತ್ಯೆಯಾಗಿದ್ದು, ಸೇನಾ ಅಧಿಕಾರಿ ಗಾಯಗೊಂಡಿದ್ದಾರೆ. ಗಾಯಾಳುವನ್ನು ಸಮೀಪದ ಸೇನಾ ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ಕಾರ್ಯಾಚರಣೆ ಮುಂದುವರಿದಿದೆ ಎಂದು ತಿಳಿಸಿದೆ.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa