ವಾರಣಾಸಿ, 08 ಸೆಪ್ಟೆಂಬರ್ (ಹಿ.ಸ.) :
ಆ್ಯಂಕರ್ : ಪ್ರಧಾನಿ ನರೇಂದ್ರ ಮೋದಿ ಅವರು ಸೆಪ್ಟೆಂಬರ್ 11 ರಂದು ತಮ್ಮ ಸಂಸದೀಯ ಕ್ಷೇತ್ರವಾದ ವಾರಣಾಸಿಯಲ್ಲಿ ಮಾರಿಷಸ್ ಪ್ರಧಾನಿ ನವೀನಚಂದ್ರ ರಾಮಗೂಲಂ ಅವರೊಂದಿಗೆ ದ್ವಿಪಕ್ಷೀಯ ಮಾತುಕತೆ ನಡೆಸಲಿದ್ದಾರೆ.
ಮಾರಿಷಸ್ ಪ್ರಧಾನಿ ರಾಮಗೂಲಂ ಅವರು ಮೂರು ದಿನಗಳ ಭೇಟಿಗಾಗಿ ಸೆಪ್ಟೆಂಬರ್ 10 ರಂದು ಸಂಜೆ ಕಾಶಿಗೆ ಆಗಮಿಸಲಿದ್ದು, ಸೆಪ್ಟೆಂಬರ್ 11 ರಂದು ದ್ವಿಪಕ್ಷೀಯ ಮಾತುಕತೆಗಳಲ್ಲಿ ಪಾಲ್ಗೊಳ್ಳಲಿದ್ದಾರೆ.
ಅತಿಥಿ ಪ್ರಧಾನಿ ಅದೇ ದಿನ ಸಂಜೆ ಗಂಗಾ ಆರತಿಯನ್ನು ವೀಕ್ಷಿಸಲಿದ್ದಾರೆ. ಸೆಪ್ಟೆಂಬರ್ 12 ರಂದು ಬೆಳಿಗ್ಗೆ ಅವರು ಶ್ರೀ ಕಾಶಿ ವಿಶ್ವನಾಥ ದೇಗುಲಕ್ಕೆ ಭೇಟಿ ನೀಡಿ ದರ್ಶನ ಪಡೆಯಲಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa