ಬೆಂಗಳೂರು, 08 ಸೆಪ್ಟೆಂಬರ್ (ಹಿ.ಸ.) :
ಆ್ಯಂಕರ್ : ಮಂಡ್ಯದ ಮದ್ದೂರಿನಲ್ಲಿ ನಡೆದ ಗಲಾಟೆ ಪ್ರಕರಣದಲ್ಲಿ ಆರೋಪಿಗಳನ್ನು ಬಂಧಿಸಲಾಗಿದೆ ಎಂದು ಗೃಹ ಸಚಿವ ಜಿ.ಪರಮೇಶ್ವರ್ ತಿಳಿಸಿದ್ದಾರೆ.
ಗಣೇಶೋತ್ಸವ ವೇಳೆ ಮದ್ದೂರು ಸೇರಿದಂತೆ ಕೆಲವು ಕಡೆ ಕಲ್ಲು ತೂರಾಟ ಹಾಗೂ ಅಲ್ಪ ಪ್ರಮಾಣದ ಗಲಾಟೆಗಳು ನಡೆದಿರುವ ಹಿನ್ನೆಲೆಯಲ್ಲಿ ಬೆಂಗಳೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು
ಒಂದೆರಡು ಕಡೆ ಸಣ್ಣಪುಟ್ಟ ಘಟನೆಗಳು ನಡೆದಿವೆ. ಆದರೆ ಎಲ್ಲವೂ ಈಗ ನಿಯಂತ್ರಣದಲ್ಲಿದೆ. ಪೊಲೀಸ್ ಭದ್ರತೆ ಮಾಡಲಾಗಿದೆ ಎಂದರು.
ಪದೇ ಪದೇ ಇಂತಹ ಘಟನೆಗಳು ನಡೆಯದಂತೆ ಜನರೂ ಸಹ ಸ್ಪಂದಿಸಬೇಕೆಂದು ಎಂದ ಅವರು ಕಾನೂನು ಪ್ರಕಾರ ಕ್ರಮ ಕೈಗೊಂಡಿದ್ದೇವೆ. ಈ ಬಾರಿ ಗಣೇಶೋತ್ಸವದ ವೇಳೆ ಎಲ್ಲ ರೀತಿಯ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಂಡಿದ್ದೇವೆ. ಸೂಕ್ಷ್ಮ ಪ್ರದೇಶಗಳಿಗೆ ಹಿರಿಯ ಅಧಿಕಾರಿಗಳನ್ನೂ ಕಳುಹಿಸಲಾಗಿದೆ. ಆದರೂ ಒಂದೆರಡು ಕಡೆ ಸಣ್ಣ ಘಟನೆಗಳು ನಡೆದಿದ್ದರೂ ಕ್ರಮ ಕೈಗೊಳ್ಳಲಾಗಿದೆ ಎಂದರು.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa