
ಬೆಂಗಳೂರು, 10 ಜನವರಿ (ಹಿ.ಸ.) :
ಆ್ಯಂಕರ್ : ದೇಶದಲ್ಲೇ ಪ್ರಥಮ ಬಾರಿಗೆ ರಾಜ್ಯದ ಯುವಜನತೆಗೆ ಉದ್ಯೋಗ ಕೌಶಲ್ಯ ನೀಡುವ ನಿಟ್ಟಿನಲ್ಲಿ, ಆಹಾರ ಸುರಕ್ಷತೆ ಮತ್ತು ಔಷಧ ನಿಯಂತ್ರಣ ಇಲಾಖೆಯ ವತಿಯಿಂದ ಫಾರ್ಮಾಸಿಸ್ಟ್ ಅಪ್ರೆಂಟಿಸ್‌ಶಿಪ್ ತರಬೇತಿಗೆ ಅರ್ಜಿ ಆಹ್ವಾನಿಸಲಾಗಿದೆ.
ಕಳೆದ ಎರಡು ವರ್ಷಗಳಲ್ಲಿ (2022-23 ಮತ್ತು 2023-24) ಡಿ.ಫಾರ್ಮ ಉತ್ತೀರ್ಣ ಅಭ್ಯರ್ಥಿಗಳು ಈ ಅವಕಾಶವನ್ನು ಬಳಸಿಕೊಂಡು, ರಾಜ್ಯದ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಪ್ರಾಯೋಗಿಕ ಅನುಭವ ಪಡೆಯಬಹುದಾಗಿದೆ.
11 ತಿಂಗಳ ತರಬೇತಿ ಅವಧಿಯಲ್ಲಿ ಪ್ರತಿ ತಿಂಗಳು ₹8,000 ಪ್ರೋತ್ಸಾಹಧನ ನೀಡಲಾಗುತ್ತದೆ.
-ಮೆರಿಟ್ ಆಧಾರದ ಮೇಲೆ ಪಾರದರ್ಶಕ ಆಯ್ಕೆ
-13.01.2026 ರಿಂದ ಅರ್ಜಿ ಸಲ್ಲಿಸಲು ಅವಕಾಶವಿದ್ದು ಕೊನೆಯ ದಿನಾಂಕ 27.01.2026 ಆಗಿದೆ
ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ವೆಬ್‌ಸೈಟ್ http://kea.kar.nic.in ಮೂಲಕ ಆನ್‌ಲೈನ್‌ನಲ್ಲಿ ₹600 ಶುಲ್ಕದೊಂದಿಗೆ ಅರ್ಜಿ ಹಾಕಬಹುದು.
ಸಶಕ್ತ ಯುವಜನತೆ, ಸಮೃದ್ಧ ಕರ್ನಾಟಕ ನಮ್ಮ ಸರ್ಕಾರದ ಗುರಿ. ನಮ್ಮ ರಾಜ್ಯದ ವಿದ್ಯಾರ್ಥಿಗಳು ಈ ತರಬೇತಿಯ ಅತಿಹೆಚ್ಚಿನ ಲಾಭ ಪಡೆದುಕೊಳ್ಳಬೇಕೆಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಸಾಮಾಜಿಕ ಮಾಧ್ಯಮದಲ್ಲಿ ಮನವಿ ಮಾಡಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa