ವಿಕಸಿತ ಭಾರತ – ಗ್ಯಾರಂಟಿ ಫಾರ್ ರೋಜ್‌ಗಾರ್ ಗ್ರಾಮೀಣ ಆದಾಯಕ್ಕೆ ಭರವಸೆ : ಬಿ.ವೈ. ವಿಜಯೇಂದ್ರ
ಬೆಂಗಳೂರು, 10 ಜನವರಿ (ಹಿ.ಸ.) : ಆ್ಯಂಕರ್ : ವಿಕಸಿತ ಭಾರತ – ಗ್ಯಾರಂಟಿ ಫಾರ್ ರೋಜ್‌ಗಾರ್ ಮತ್ತು ಅಜೀವಿಕಾ ಮಿಷನ್ (ಗ್ರಾಮೀಣ) ಕಾಯ್ದೆ ಗ್ರಾಮೀಣ ಭಾಗದ ಜನರ ಆದಾಯದ ಮೂಲವನ್ನು ಖಾತ್ರಿ ಪಡಿಸುವುದರ ಜೊತೆಗೆ, ಗ್ರಾಮಾಭಿವೃದ್ಧಿಯ ಸದಾಶಯವನ್ನು ಸಾಕಾರಗೊಳಿಸಿ ಜನರ ಬದುಕಿಗೆ ಭರವಸೆಯ ಬೆಳಕು ನೀಡುವ ಮಹತ್ವದ
Byv


ಬೆಂಗಳೂರು, 10 ಜನವರಿ (ಹಿ.ಸ.) :

ಆ್ಯಂಕರ್ : ವಿಕಸಿತ ಭಾರತ – ಗ್ಯಾರಂಟಿ ಫಾರ್ ರೋಜ್‌ಗಾರ್ ಮತ್ತು ಅಜೀವಿಕಾ ಮಿಷನ್ (ಗ್ರಾಮೀಣ) ಕಾಯ್ದೆ ಗ್ರಾಮೀಣ ಭಾಗದ ಜನರ ಆದಾಯದ ಮೂಲವನ್ನು ಖಾತ್ರಿ ಪಡಿಸುವುದರ ಜೊತೆಗೆ, ಗ್ರಾಮಾಭಿವೃದ್ಧಿಯ ಸದಾಶಯವನ್ನು ಸಾಕಾರಗೊಳಿಸಿ ಜನರ ಬದುಕಿಗೆ ಭರವಸೆಯ ಬೆಳಕು ನೀಡುವ ಮಹತ್ವದ ಯೋಜನೆಯಾಗಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಹೇಳಿದರು.

ಬೆಂಗಳೂರಿನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ಪರಿಕಲ್ಪನೆಯಂತೆ ಅನ್ನದಾತ ಕೃಷಿಕರ ಪರಿಶ್ರಮಕ್ಕೆ ಹೆಚ್ಚಿನ ಶಕ್ತಿ ತುಂಬಿ, ಆಮೂಲಕ ವಿಕಸಿತ ಭಾರತದ ಸಂಕಲ್ಪವನ್ನು ಸಾಕಾರಗೊಳಿಸುವ ದಿಟ್ಟಿನಲ್ಲಿ ಈ ಯೋಜನೆ ಪ್ರಮುಖ ಮೈಲಿಗಲ್ಲಾಗಿದೆ ಎಂದರು.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande