
ಬೆಂಗಳೂರು, 10 ಜನವರಿ (ಹಿ.ಸ.) :
ಆ್ಯಂಕರ್ : ಕೆಎಸ್‌ಆರ್ ಬೆಂಗಳೂರು ರೈಲು ನಿಲ್ದಾಣದಲ್ಲಿ ನಡೆಯುತ್ತಿರುವ ಪಿಟ್ ಲೈನ್ ಪುನರ್ನಿರ್ಮಾಣ ಕಾಮಗಾರಿ ಹಿನ್ನೆಲೆಯಲ್ಲಿ, ದಕ್ಷಿಣ ಪಶ್ಚಿಮ ರೈಲ್ವೆ ವ್ಯಾಪ್ತಿಯಲ್ಲಿ ಸಂಚರಿಸುವ ಕೆಲವು ಎಕ್ಸ್‌ಪ್ರೆಸ್ ರೈಲುಗಳ ಟರ್ಮಿನಲ್ ನಿಲ್ದಾಣಗಳನ್ನು ತಾತ್ಕಾಲಿಕವಾಗಿ ಬದಲಾಯಿಸಲಾಗಿದ್ದು, ಕೆಲವು ರೈಲುಗಳನ್ನು ಭಾಗಶಃ ರದ್ದುಗೊಳಿಸಲಾಗಿದೆ ಎಂದು ನೈಋತ್ಯ ರೇಲ್ವೆ ಬೆಂಗಳೂರು ವಿಭಾಗದ ಸಾರ್ವಜನಿಕ ಸಂಪರ್ಕ ಅಧಿಕಾರಿ ಪ್ರಾಣೇಶ ಕೆ.ಎನ್. ತಿಳಿಸಿದ್ದಾರೆ.
ಕಾಮಗಾರಿ ಅವಧಿಯಲ್ಲಿ ಕೈಗೊಳ್ಳಲಾಗಿರುವ ಬದಲಾವಣೆಗಳ ವಿವರ ಹೀಗಿದೆ:
1. ರೈಲು ಸಂಖ್ಯೆ 12678 (ಎರ್ನಾಕುಲಂ ಜಂಕ್ಷನ್ – ಕೆಎಸ್‌ಆರ್ ಬೆಂಗಳೂರು ಎಕ್ಸ್‌ಪ್ರೆಸ್):
ದಿನಾಂಕ 16.01.2026 ರಿಂದ 10.03.2026 ರವರೆಗೆ ಈ ರೈಲು ಬೆಂಗಳೂರು ಕಂಟೋನ್ಮೆಂಟ್ ಮತ್ತು ಕೆಎಸ್‌ಆರ್ ಬೆಂಗಳೂರು ನಡುವೆ ಭಾಗಶಃ ರದ್ದುಗೊಳ್ಳಲಿದೆ. ಈ ಅವಧಿಯಲ್ಲಿ ರೈಲು ಕೆಎಸ್‌ಆರ್ ಬೆಂಗಳೂರು ಬದಲು ಬೆಂಗಳೂರು ಕಂಟೋನ್ಮೆಂಟ್ ನಿಲ್ದಾಣದವರೆಗೆ ಮಾತ್ರ ಸಂಚರಿಸಲಿದೆ.
2. ರೈಲು ಸಂಖ್ಯೆ 12677 (ಕೆಎಸ್‌ಆರ್ ಬೆಂಗಳೂರು – ಎರ್ನಾಕುಲಂ ಜಂಕ್ಷನ್ ಎಕ್ಸ್‌ಪ್ರೆಸ್):
ದಿನಾಂಕ 17.01.2026 ರಿಂದ 11.03.2026 ರವರೆಗೆ ಈ ರೈಲು ಕೆಎಸ್‌ಆರ್ ಬೆಂಗಳೂರು ಮತ್ತು ಬೆಂಗಳೂರು ಕಂಟೋನ್ಮೆಂಟ್ ನಡುವೆ ಭಾಗಶಃ ರದ್ದುಗೊಳ್ಳಲಿದೆ. ಈ ರೈಲು ಬೆಂಗಳೂರು ಕಂಟೋನ್ಮೆಂಟ್ ನಿಲ್ದಾಣದಿಂದ ಬೆಳಿಗ್ಗೆ 06:20ಕ್ಕೆ ಹೊರಡಲಿದೆ.
3. ರೈಲು ಸಂಖ್ಯೆ 16594 (ಹಜೂರ್ ಸಾಹಿಬ್ ನಾಂದೇಡ್ – ಕೆಎಸ್‌ಆರ್ ಬೆಂಗಳೂರು ಎಕ್ಸ್‌ಪ್ರೆಸ್):
ದಿನಾಂಕ 16.01.2026 ರಿಂದ 10.03.2026 ರವರೆಗೆ ಈ ರೈಲು ಕೆಎಸ್‌ಆರ್ ಬೆಂಗಳೂರು ಬದಲು ಯಶವಂತಪುರ ನಿಲ್ದಾಣದಲ್ಲಿ ಸಂಚಾರ ಕೊನೆಗೊಳಿಸಲಿದೆ. ಈ ಅವಧಿಯಲ್ಲಿ ರೈಲು ಯಲಹಂಕ – ಲೊಟ್ಟೆಗೊಲ್ಲಹಳ್ಳಿ – ಯಶವಂತಪುರ ಮಾರ್ಗವಾಗಿ ಸಂಚರಿಸಲಿದೆ. ಬೆಂಗಳೂರು ಕಂಟೋನ್ಮೆಂಟ್ ಮತ್ತು ಕೆಎಸ್‌ಆರ್ ಬೆಂಗಳೂರು ನಿಲುಗಡೆಗಳು ಇರುವುದಿಲ್ಲ.
4. ರೈಲು ಸಂಖ್ಯೆ 16593 (ಕೆಎಸ್‌ಆರ್ ಬೆಂಗಳೂರು – ಹಜೂರ್ ಸಾಹಿಬ್ ನಾಂದೇಡ್ ಎಕ್ಸ್‌ಪ್ರೆಸ್):
ದಿನಾಂಕ 17.01.2026 ರಿಂದ 11.03.2026 ರವರೆಗೆ ಈ ರೈಲು ಯಶವಂತಪುರ ನಿಲ್ದಾಣದಿಂದ ರಾತ್ರಿ 11:55ಕ್ಕೆ ಹೊರಡಲಿದೆ. ಈ ರೈಲು ಯಶವಂತಪುರ – ಲೊಟ್ಟೆಗೊಲ್ಲಹಳ್ಳಿ – ಯಲಹಂಕ ಮಾರ್ಗವಾಗಿ ಸಂಚರಿಸಲಿದೆ. ಕೆಎಸ್‌ಆರ್ ಬೆಂಗಳೂರು ಮತ್ತು ಬೆಂಗಳೂರು ಕಂಟೋನ್ಮೆಂಟ್ ನಿಲುಗಡೆಗಳು ಇರುವುದಿಲ್ಲ.
5. ರೈಲು ಸಂಖ್ಯೆ 16512 (ಕಣ್ಣೂರು – ಕೆಎಸ್‌ಆರ್ ಬೆಂಗಳೂರು ಎಕ್ಸ್‌ಪ್ರೆಸ್):
ದಿನಾಂಕ 16.01.2026 ರಿಂದ 10.03.2026 ರವರೆಗೆ ಈ ರೈಲು ಕೆಎಸ್‌ಆರ್ ಬೆಂಗಳೂರು ಬದಲು ಎಸ್‌ಎಂವಿಟಿ ಬೆಂಗಳೂರು ನಿಲ್ದಾಣದಲ್ಲಿ ಸಂಚಾರ ಕೊನೆಗೊಳಿಸಲಿದೆ. ರೈಲು ಯಶವಂತಪುರ – ಹೆಬ್ಬಾಳ – ಬಾಣಸವಾಡಿ – ಎಸ್‌ಎಂವಿಟಿ ಬೆಂಗಳೂರು ಮಾರ್ಗವಾಗಿ ಸಂಚರಿಸಲಿದೆ.
6. ರೈಲು ಸಂಖ್ಯೆ 16511 (ಕೆಎಸ್‌ಆರ್ ಬೆಂಗಳೂರು – ಕಣ್ಣೂರು ಎಕ್ಸ್‌ಪ್ರೆಸ್):
ದಿನಾಂಕ 17.01.2026 ರಿಂದ 11.03.2026 ರವರೆಗೆ ಈ ರೈಲು ಎಸ್‌ಎಂವಿಟಿ ಬೆಂಗಳೂರು ನಿಲ್ದಾಣದಿಂದ ರಾತ್ರಿ 8:00 ಗಂಟೆಗೆ ಹೊರಡಲಿದೆ. ಈ ರೈಲು ಎಸ್‌ಎಂವಿಟಿ ಬೆಂಗಳೂರು – ಬಾಣಸವಾಡಿ – ಹೆಬ್ಬಾಳ – ಯಶವಂತಪುರ ಮಾರ್ಗವಾಗಿ ಸಂಚರಿಸಲಿದೆ.
ಪ್ರಯಾಣಿಕರು ತಮ್ಮ ಪ್ರಯಾಣಕ್ಕೆ ಸಂಬಂಧಿಸಿದ ಹೆಚ್ಚಿನ ಮಾಹಿತಿಗಾಗಿ 139 ಸಹಾಯವಾಣಿ, NTES ಮೊಬೈಲ್ ಅಪ್ಲಿಕೇಶನ್ ಅಥವಾ ಭಾರತೀಯ ರೈಲ್ವೆಯ ಅಧಿಕೃತ ವೆಬ್‌ಸೈಟ್ ಅನ್ನು ಪರಿಶೀಲಿಸುವಂತೆ ರೈಲ್ವೆ ಇಲಾಖೆ ಮನವಿ ಮಾಡಿದೆ.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa