
ಚಿತ್ರದುರ್ಗ, 11 ಜನವರಿ (ಹಿ.ಸ.) :
ಆ್ಯಂಕರ್ : ಚಿತ್ರದುರ್ಗ ತಾಲೂಕಿನ ತಮಟಕಲ್ಲು ಗ್ರಾಮದ ಸಮೀಪ ಲಾರಿ ಹಾಗೂ ಇನ್ನೋವಾ ಕಾರಿನ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಕಾರಿನಲ್ಲಿದ್ದ ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದು, ಮೂವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ತಡ ರಾತ್ರಿ ನಡೆದಿದೆ.
ಮೃತರನ್ನು ಮಹಾರಾಷ್ಟ್ರದ ಕೊಲ್ಹಾಪುರದಲ್ಲಿ ಉಪ ಪೋಲಿಸ್ ವರಿಷ್ಠಾಧಿಕಾರಿಯಾಗಿರು ವೈಷ್ಣವಿ ಅವರ ತಾಯಿ ಕಮಲ (65) ಹಾಗೂ ಕಾರು ಚಾಲಕ ರಾಕೇಶ್ (40) ಎಂದು ಗುರುತಿಸಲಾಗಿದೆ. ಅಪಘಾತದಲ್ಲಿ ಡಿಎಸ್ ಪಿ ವೈಷ್ಣವಿ ಸೇರಿ ಇನ್ನಿಬ್ಬರು ಗಂಭೀರವಾಗಿ ಗಾಯಗೊಂಡಿದ್ದು, ಅವರನ್ನು ಚಿತ್ರದುರ್ಗದ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ಪ್ರಾಥಮಿಕ ಮಾಹಿತಿಯಂತೆ, ವೈಷ್ಣವಿ ಅವರು ತಾಯಿ ಜೊತೆ ತಮಿಳುನಾಡು ಪ್ರವಾಸ ಮುಗಿಸಿ ಕೊಲ್ಹಾಪುರಕ್ಕೆ ಮರಳುತ್ತಿದ್ದ ವೇಳೆ ಈ ಅಪಘಾತ ಸಂಭವಿಸಿದೆ. ವೇಗವಾಗಿ ಬಂದ ಲಾರಿ ಎದುರಿನಿಂದ ಡಿಕ್ಕಿ ಹೊಡೆದ ಪರಿಣಾಮ ಇನ್ನೋವಾ ಕಾರು ಸಂಪೂರ್ಣ ಜಖಂಗೊಂಡಿದೆ.
ಘಟನೆಯ ಮಾಹಿತಿ ಪಡೆದ ಸಿಪಿಐ ಬಾಲಚಂದ್ರ ನಾಯ್ಕ್ ಅವರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣವನ್ನು ಚಿತ್ರದುರ್ಗ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ದಾಖಲಿಸಲಾಗಿದೆ. ಅಪಘಾತದ ನಿಖರ ಕಾರಣ ಪತ್ತೆ ಹಚ್ಚಲು ಪೊಲೀಸರು ತನಿಖೆ ಮುಂದುವರಿಸಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa