
ಮಂಡ್ಯ, 11 ಜನವರಿ (ಹಿ.ಸ.) :
ಆ್ಯಂಕರ್ : ರಾಷ್ಟ್ರೀಯ ರಸ್ತೆ ಸುರಕ್ಷತಾ ಮಾಸಾಚರಣೆಯ ಅಂಗವಾಗಿ ಇಂದು ಮಂಡ್ಯ ಸಂಚಾರ ಪೊಲೀಸ್ ಠಾಣೆಯ ವತಿಯಿಂದ ಮಂಡ್ಯ ನಗರದ ಸ್ಮಾರ್ಟ್ ಬಜಾರ್ ಮುಂಭಾಗ ಸಾರ್ವಜನಿಕರಿಗೆ ಹಾಗೂ ಸ್ಮಾರ್ಟ್ ಬಜಾರ್ ಸಿಬ್ಬಂದಿಗೆ ರಸ್ತೆ ಸುರಕ್ಷತಾ ನಿಯಮಗಳ ಕುರಿತು ಅರಿವು ಮೂಡಿಸಲಾಯಿತು.
ಈ ಸಂದರ್ಭದಲ್ಲಿ ಹೆಲ್ಮೆಟ್ ಧರಿಸುವ ಅಗತ್ಯ, ಸೀಟ್ ಬೆಲ್ಟ್ ಬಳಕೆ, ವೇಗ ನಿಯಂತ್ರಣ, ಪಾದಚಾರಿಗಳಿಗೆ ಆದ್ಯತೆ ನೀಡುವಿಕೆ ಸೇರಿದಂತೆ ರಸ್ತೆ ಸುರಕ್ಷತಾ ಕ್ರಮಗಳ ಬಗ್ಗೆ ವಿವರವಾಗಿ ತಿಳಿಸಲಾಯಿತು. ಸಾರ್ವಜನಿಕರು ರಸ್ತೆ ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸುವಂತೆ ಸಂಚಾರ ಪೊಲೀಸರು ಮನವಿ ಮಾಡಿದರು.
ಕಾರ್ಯಕ್ರಮದಲ್ಲಿ ಸಂಚಾರ ಪೊಲೀಸ್ ಅಧಿಕಾರಿಗಳು ಹಾಗೂ ಸಿಬ್ಬಂದಿ ಭಾಗವಹಿಸಿದ್ದರು.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa