ಉತ್ತರ ಕರ್ನಾಟಕದ ಪರಂಪರೆಯ ಅಡುಗೆ ರುಚಿ ಸ್ಪರ್ಧೆ ಸಮಾರೋಪ ಸಮಾರಂಭ
ಧಾರವಾಡ, 11 ಜನವರಿ (ಹಿ.ಸ.) : ಆ್ಯಂಕರ್ : ನಮ್ಮ ಸಂಸ್ಕೃತಿ ಸೇವಾ ಸಂಸ್ಥೆಯ ವತಿಯಿಂದ ಧಾರವಾಡದಲ್ಲಿ ಆಯೋಜಿಸಲಾಗಿದ್ದ ಉತ್ತರ ಕರ್ನಾಟಕದ ಪರಂಪರೆಯ ಅಡುಗೆ ರುಚಿ ಸ್ಪರ್ಧೆಯ ಸಮಾರೋಪ ಸಮಾರಂಭವು ಭವ್ಯವಾಗಿ ನಡೆಯಿತು. ಕಾರ್ಯಕ್ರಮದಲ್ಲಿ ಸಂಸ್ಥೆಯ ವತಿಯಿಂದ ದಿವ್ಯ ಸಾನಿಧ್ಯ ವಹಿಸಿದ್ದ ಡಾ. ಮಾತೆ ಬಸವಾಂಜಲಿ
Honour


ಧಾರವಾಡ, 11 ಜನವರಿ (ಹಿ.ಸ.) :

ಆ್ಯಂಕರ್ : ನಮ್ಮ ಸಂಸ್ಕೃತಿ ಸೇವಾ ಸಂಸ್ಥೆಯ ವತಿಯಿಂದ ಧಾರವಾಡದಲ್ಲಿ ಆಯೋಜಿಸಲಾಗಿದ್ದ ಉತ್ತರ ಕರ್ನಾಟಕದ ಪರಂಪರೆಯ ಅಡುಗೆ ರುಚಿ ಸ್ಪರ್ಧೆಯ ಸಮಾರೋಪ ಸಮಾರಂಭವು ಭವ್ಯವಾಗಿ ನಡೆಯಿತು.

ಕಾರ್ಯಕ್ರಮದಲ್ಲಿ ಸಂಸ್ಥೆಯ ವತಿಯಿಂದ ದಿವ್ಯ ಸಾನಿಧ್ಯ ವಹಿಸಿದ್ದ ಡಾ. ಮಾತೆ ಬಸವಾಂಜಲಿದೇವಿಯವರು ಹಾಗೂ ಉದ್ಘಾಟಕರಾಗಿ ಕೃಷಿ ವಿಶ್ವವಿದ್ಯಾಲಯದ ಆಹಾರ ವಿಜ್ಞಾನ ವಿಭಾಗದ ಮುಖ್ಯಸ್ಥರಾದ ಶ್ರೀಮತಿ ಲತಾ ಪೂಜಾರ್ ಉಪಸ್ಥಿತರಿದ್ದರು. ಸ್ಪರ್ಧೆಯ ನಿರ್ಣಾಯಕರಾಗಿ ಕೃಷಿ ವಿಶ್ವವಿದ್ಯಾಲಯದ ಆಹಾರ ವಿಜ್ಞಾನ ವಿಭಾಗದ ಪ್ರಾಧ್ಯಾಪಕರಾದ ಶ್ರೀಮತಿ ಕಾಶಿಬಾಯಿ ಕ್ಯಾದಗಿ ಕಾರ್ಯನಿರ್ವಹಿಸಿದರು.

ಮುಖ್ಯ ಅತಿಥಿಗಳಾಗಿ ಸೌಂದರ್ಯವರ್ಧಕ ತಜ್ಞೆ ಶ್ರೀಮತಿ ಮಂಗಳಾ ಬನ್ಸುಡೆ ಹಾಗೂ ಜಾನಪದ ಕಲಾವಿದ ಇಮಾಮಸಾಬ ವಲ್ಲೆಪ್ಪನವರ್ ಭಾಗವಹಿಸಿದ್ದರು. ವಿಶೇಷ ಅತಿಥಿಗಳಾಗಿ ಅಖಿಲ ಭಾರತ ಮಾನವ ಹಕ್ಕುಗಳ ಸಂಸ್ಥೆಯ ರಾಜ್ಯ ಪ್ರಧಾನ ಕಾರ್ಯದರ್ಶಿ ಸದಾನಂದ ಪಾಟೀಲ್ ಉಪಸ್ಥಿತರಿದ್ದರು.

ಕಾರ್ಯಕ್ರಮವನ್ನು ಸಂಸ್ಥೆಯ ಸಂಸ್ಥಾಪಕ ಅಧ್ಯಕ್ಷರಾದ ರವಿ ಸಂಗನಾಳ ಅವರ ನೇತೃತ್ವದಲ್ಲಿ ಆಯೋಜಿಸಲಾಗಿತ್ತು. ಈ ಸಂದರ್ಭದಲ್ಲಿ ಧಾರವಾಡದ ಸಾಯಿ ಸಲಹಾ ಕೇಂದ್ರದ ಮುಖ್ಯಸ್ಥರು ಹಾಗೂ ಭ್ರಷ್ಟಾಚಾರ ನಿರ್ಮೂಲನೆ ಮತ್ತು ಮಾನವ ಹಕ್ಕುಗಳ ವಿಂಗ್ (ರಿ), ಧಾರವಾಡದ ರಾಜ್ಯಾಧ್ಯಕ್ಷರಾದ ಶ್ರೀಮತಿ ವಿಜಯಲಕ್ಷ್ಮಿ ಧಾರವಾಡಕರ್ ಅವರನ್ನು ಸಂಸ್ಥೆಯ ವತಿಯಿಂದ ಗೌರವಿಸಿ ಸನ್ಮಾನಿಸಲಾಯಿತು.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande