
ಶಿವಮೊಗ್ಗ, 11 ಜನವರಿ (ಹಿ.ಸ.) :
ಆ್ಯಂಕರ್ : ಶಾಲಾ ಶಿಕ್ಷಣ ಸಚಿವರು ಹಾಗೂ ಶಿವಮೊಗ್ಗ ಜಿಲ್ಲಾ ಉಸ್ತುವಾರಿ ಸಚಿವರಾದ ಮಧು ಬಂಗಾರಪ್ಪ ಅವರು ಜನವರಿ 22, 23, 24 ಮತ್ತು 25 ರಂದು ಸಾಗರ ತಾಲ್ಲೂಕಿನ ತಾಳಗುಪ್ಪ ಹೋಬಳಿಯ ಗುಡ್ಡೆಮನೆ ಗ್ರಾಮದ ನಾಳಂದ ಪದವಿ ಪೂರ್ವ ಕಾಲೇಜು ಆವರಣದಲ್ಲಿ ನಡೆಯಲಿರುವ ರಾಜ್ಯಮಟ್ಟದ ತಾಲೂಕು ಲೀಗ್ ಮಾದರಿಯ ಲೈಟ್ ಟೆನ್ನಿಸ್ ಕ್ರಿಕೆಟ್ ಪಂದ್ಯಾವಳಿ ಸೀಸನ್–2 ಬಂಗಾರಪ್ಪ ಟ್ರೋಫಿಯ ಪೋಸ್ಟರ್ ಅನ್ನು ಬಿಡುಗಡೆ ಮಾಡಿ ಶುಭ ಹಾರೈಸಿದರು.
ಈ ಪಂದ್ಯಾವಳಿ ಯುವ ಪ್ರತಿಭೆಗಳಿಗೆ ವೇದಿಕೆ ಒದಗಿಸುವ ಉದ್ದೇಶದಿಂದ ಆಯೋಜಿಸಲಾಗಿದ್ದು, ರಾಜ್ಯದ ವಿವಿಧ ಭಾಗಗಳಿಂದ ತಂಡಗಳು ಭಾಗವಹಿಸುವ ನಿರೀಕ್ಷೆಯಿದೆ.
ಪೋಸ್ಟರ್ ಬಿಡುಗಡೆ ಕಾರ್ಯಕ್ರಮದಲ್ಲಿ ತಾಳಗುಪ್ಪ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಶಿವಮೂರ್ತಿ, ಯುವ ಮುಖಂಡರಾದ ರಾಜೇಶ್ ಸೈದೂರು, ಸಂತೋಷ್ ಗುಡ್ಡೆಮನೆ, ಪುನೀತ್, ರಜಿತ್, ಮಂಜು ಕಡೆಮನೆ ಹಾಗೂ ಅರುಣ್ ಈಡಿಗ ಸೇರಿದಂತೆ ಹಲವರು ಉಪಸ್ಥಿತರಿದ್ದರು.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa