ಚಾಮುಂಡಿ ಮಹಿಳಾ ಸುರಕ್ಷಾ ಪಡೆ ವಿಶೇಷ ಜಾಗೃತಿ ಅಭಿಯಾನ
ಮೈಸೂರು, 12 ಜನವರಿ (ಹಿ.ಸ.) : ಆ್ಯಂಕರ್ : ಮೈಸೂರು ನಗರದ ಸಾರ್ವಜನಿಕರ, ವಿಶೇಷವಾಗಿ ಮಹಿಳೆಯರ ಸುರಕ್ಷತೆಯನ್ನು ಬಲಪಡಿಸುವ ಉದ್ದೇಶದಿಂದ ‘ಚಾಮುಂಡಿ ಮಹಿಳಾ ಸುರಕ್ಷಾ ಪಡೆ’ ವತಿಯಿಂದ ವಿಶೇಷ ಜಾಗೃತಿ ಅಭಿಯಾನ ನಡೆಯಿತು. ನಗರದ ಪ್ರಮುಖ ಸಾರ್ವಜನಿಕ ಸ್ಥಳಗಳು, ಬಸ್ ನಿಲ್ದಾಣಗಳು, ಮಾರುಕಟ್ಟೆಗಳು ಹಾಗೂ ಜನ
Awareness


ಮೈಸೂರು, 12 ಜನವರಿ (ಹಿ.ಸ.) :

ಆ್ಯಂಕರ್ : ಮೈಸೂರು ನಗರದ ಸಾರ್ವಜನಿಕರ, ವಿಶೇಷವಾಗಿ ಮಹಿಳೆಯರ ಸುರಕ್ಷತೆಯನ್ನು ಬಲಪಡಿಸುವ ಉದ್ದೇಶದಿಂದ ‘ಚಾಮುಂಡಿ ಮಹಿಳಾ ಸುರಕ್ಷಾ ಪಡೆ’ ವತಿಯಿಂದ ವಿಶೇಷ ಜಾಗೃತಿ ಅಭಿಯಾನ ನಡೆಯಿತು.

ನಗರದ ಪ್ರಮುಖ ಸಾರ್ವಜನಿಕ ಸ್ಥಳಗಳು, ಬಸ್ ನಿಲ್ದಾಣಗಳು, ಮಾರುಕಟ್ಟೆಗಳು ಹಾಗೂ ಜನಸಂಚಾರ ಹೆಚ್ಚಿರುವ ಪ್ರದೇಶಗಳಿಗೆ ಭೇಟಿ ನೀಡಿದ ಮಹಿಳಾ ಪೊಲೀಸ್ ಅಧಿಕಾರಿಗಳು ಸಾರ್ವಜನಿಕರಿಗೆ ಅಗತ್ಯ ಮಾಹಿತಿ ಮತ್ತು ಮುನ್ನೆಚ್ಚರಿಕೆ ಸಲಹೆಗಳನ್ನು ನೀಡಿದರು.

ಅಭಿಯಾನದ ಅಂಗವಾಗಿ ಸೈಬರ್ ಅಪರಾಧಗಳಿಂದ ರಕ್ಷಿಸಿಕೊಳ್ಳುವ ವಿಧಾನಗಳು, ಆನ್‌ಲೈನ್ ವಂಚನೆಗೆ ಒಳಗಾದರೆ ಕೈಗೊಳ್ಳಬೇಕಾದ ಕ್ರಮಗಳು, ಸರಗಳ್ಳತನ ತಪ್ಪಿಸಲು ಅಗತ್ಯ ಜಾಗ್ರತೆಗಳು ಹಾಗೂ ಸಂಚಾರ ನಿಯಮಗಳನ್ನು ಪಾಲಿಸುವ ಮಹತ್ವವನ್ನು ವಿವರವಾಗಿ ತಿಳಿಸಲಾಯಿತು.

ಜೊತೆಗೆ ತುರ್ತು ಸಂದರ್ಭಗಳಲ್ಲಿ ತಕ್ಷಣ ಸಹಾಯ ಪಡೆಯಲು ಸೈಬರ್ ಅಪರಾಧ ಸಹಾಯವಾಣಿ ಸಂಖ್ಯೆ 1930 ಹಾಗೂ ತುರ್ತು ಪ್ರತಿಕ್ರಿಯೆ ಸಹಾಯ ವ್ಯವಸ್ಥೆ (ERSS) 112 ಅನ್ನು ಹೇಗೆ ಬಳಸಬೇಕು ಎಂಬುದರ ಕುರಿತು ಪ್ರಾಯೋಗಿಕ ಜಾಗೃತಿಯನ್ನೂ ಮೂಡಿಸಲಾಯಿತು.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande