
ಕಲಬುರಗಿ, 12 ಜನವರಿ (ಹಿ.ಸ.) :
ಆ್ಯಂಕರ್ : ಅತಿವೃಷ್ಟಿಯಿಂದ ಉಂಟಾದ ಬೆಳೆ ಹಾನಿಗೆ ರೈತರಿಗೆ ತ್ವರಿತ ಪರಿಹಾರ ನೀಡಲು ಸರ್ಕಾರ ಬದ್ಧವಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.
ಕಲಬುರಗಿಯಲ್ಲಿ ಮಾತನಾಡಿದ ಅವರು, ವೈಮಾನಿಕ ಸಮೀಕ್ಷೆ ನಡೆಸಿ, ಎಸ್‌ಡಿಆರ್‌ಎಫ್‌ನಿಂದ ₹1218 ಕೋಟಿ ಹಾಗೂ ರಾಜ್ಯ ಸರ್ಕಾರದಿಂದ ಹೆಚ್ಚುವರಿಯಾಗಿ ₹1031 ಕೋಟಿ ಅನುದಾನ ಒದಗಿಸಲಾಗಿದೆ.
ರಾಜ್ಯದಲ್ಲಿ 14.21 ಲಕ್ಷ ರೈತರಿಗೆ ಬೆಳೆ ಹಾನಿ ಸಂಭವಿಸಿದ್ದು, ಕಲ್ಯಾಣ ಕರ್ನಾಟಕ ಭಾಗದಲ್ಲೇ 7.21 ಲಕ್ಷ ರೈತರಿಗೆ ₹1072 ಕೋಟಿ ಪರಿಹಾರ ವಿತರಿಸಲಾಗಿದೆ.
ಕಲಬುರಗಿ ಜಿಲ್ಲೆಯಲ್ಲಿ ಮಾತ್ರವೇ 3.23 ಲಕ್ಷ ರೈತರಿಗೆ ₹498 ಕೋಟಿ ಪರಿಹಾರ ನೀಡಲಾಗಿದೆ. ನೆಟ್ಟೆ ರೋಗದಿಂದ ಹಾನಿಗೊಳಗಾದ ತೊಗರಿ ಬೆಳೆಗೆ ₹233 ಕೋಟಿ, ಕಬ್ಬು ಬೆಲೆ ಕುಸಿತದ ವೇಳೆ ಕಬ್ಬು ಬೆಳೆಗಾರರಿಗೆ ₹300 ಕೋಟಿ ನೆರವು ನೀಡಲಾಗಿದೆ ಎಂದು ತಿಳಿಸಿದರು.
ರೈತರ ಖಾತೆಗಳಿಗೆ ನೇರವಾಗಿ ಅನುದಾನ ತಲುಪಿಸುವ ವ್ಯವಸ್ಥೆ ಮಾಡಲಾಗಿದೆ. ರೈತರ ಹಿತ ರಕ್ಷಣೆ ಸರ್ಕಾರದ ಮೊದಲ ಆದ್ಯತೆ ಎಂದು ಮುಖ್ಯಮಂತ್ರಿ ಹೇಳಿದರು.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa