ಬಳ್ಳಾರಿ ಗಲಾಟೆ ; ಸಿಬಿಐಗೆ ನೀಡಲಿ-ಶಾಸಕ ಯತ್ನಾಳ
ವಿಜಯಪುರ, 12 ಜನವರಿ (ಹಿ.ಸ.) : ಆ್ಯಂಕರ್ : ಸಿದ್ದರಾಮಯ್ಯ ಕಾಂಗ್ರೆಸ್ ಮುಖ್ಯಮಂತ್ರಿ ಅಲ್ಲ. ಅವರು ರಾಜ್ಯದ ಮುಖ್ಯಮಂತ್ರಿ. ಮುಖ್ಯಮಂತ್ರಿ ನಮ್ಮ ಕ್ಷೇತ್ರಕ್ಕೆ ಬಂದಾಗ ಗೌರವ ಸಲ್ಲಿಸಬೇಕು. ಹೀಗಾಗಿ ನಾನು ಗೌರವ ಸಲ್ಲಿಸಿದ್ದೇನೆ ಎಂದು ಶಾಸಕ ಬಸನಗೌಡ ಪಾಟೀಲ ಯತ್ನಾಳ ಹೇಳಿದರು. ವಿಜಯಪುರ ನಗರದಲ್ಲಿ ಮಾ
ಯತ್ನಾಳ


ವಿಜಯಪುರ, 12 ಜನವರಿ (ಹಿ.ಸ.) :

ಆ್ಯಂಕರ್ : ಸಿದ್ದರಾಮಯ್ಯ ಕಾಂಗ್ರೆಸ್ ಮುಖ್ಯಮಂತ್ರಿ ಅಲ್ಲ. ಅವರು ರಾಜ್ಯದ ಮುಖ್ಯಮಂತ್ರಿ. ಮುಖ್ಯಮಂತ್ರಿ ನಮ್ಮ ಕ್ಷೇತ್ರಕ್ಕೆ ಬಂದಾಗ ಗೌರವ ಸಲ್ಲಿಸಬೇಕು.

ಹೀಗಾಗಿ ನಾನು ಗೌರವ ಸಲ್ಲಿಸಿದ್ದೇನೆ ಎಂದು ಶಾಸಕ ಬಸನಗೌಡ ಪಾಟೀಲ ಯತ್ನಾಳ ಹೇಳಿದರು.

ವಿಜಯಪುರ ನಗರದಲ್ಲಿ ಮಾತನಾಡಿದ ಅವರು, ಇದಕ್ಕೆ ಕೆಲವರಿಗೆ ನೋವಾದ್ರೆ ನಾನೇನು ಮಾಡೋಕಾಗಲ್ಲ. ಜನರು ನನ್ನುನ್ನು ಬೆಂಬಲಿಸಿದ್ದಾರೆ. ಅದು ನನ್ನ ಮೇಲಿರುವ ಅಭಿಮಾನ. ನಾನು ಸಿದ್ದರಾಮಯ್ಯ ಅವರಿಗೆ ಗೌರವ ನೀಡಿದಂತೆ ಕಾಂಗ್ರೆಸ್ ನವರು ಸಹ ಪ್ರಧಾನಿಗೆ ಗೌರವ ನೀಡಿದಕ್ಕೆ ಜನರ ಪ್ರೀತಿ ವಿಶ್ವಾಸಕ್ಕೆ ನಾನು ಧನ್ಯವಾದ ಸಲ್ಲಿಸುತ್ತೇನೆ ಎಂದರು‌.

ಅಲ್ಲದೇ, ಕಾಂಗ್ರೆಸ್ ಜಿಲ್ಲಾ ನಾಯಕರಿಗೆ ಡಿಕೆಶಿ ಕ್ಲಾಸ್ ವಿಚಾರಕ್ಕೆ ಪ್ರತಿಕ್ರಿಯೆ ನೀಡಿದ ಅವರು, ಡಿಕೆಶಿ ಎದುರೇ ಜನ ನನ್ನ ಪರವಾಗಿ ಕೂಗೂ ಹಾಕಿದರೆ ಜಿಲ್ಲೆಯ ನಾಯಕರು ಏನ್ ಮಾಡಬೇಕು. ಮುಖ್ಯಮಂತ್ರಿ ಎದುರು ಜನ ನನ್ನ ಪರ ಕೂಗಿದ್ದು ಕಾಂಗ್ರೆಸ್ ಬಿಜೆಪಿಗೆ ಎಚ್ಚರಿಕೆ ಗಂಟೆಯಾಗಿದೆ. ನಮ್ಮನ್ನ, ಪ್ರತಾಪ್ ಸಿಂಹ ಬಿಟ್ಟರೆ ಹುಷಾರ್ ಎಂದು ಬಿಜೆಪಿಗೆ ಎಚ್ಚರಿಕೆ ನೀಡಿದರು.‌

ಬಿಜೆಪಿ ರಾಜಾಧ್ಯಕ್ಷ ವಿಳಂಬ ವಿಚಾರದಲ್ಲಿ

ಹೈಕಮಾಂಡ್ ನಾಯಕರಿಗೆ ಎಲ್ಲವೂ ಗೊತ್ತಿದೆ. ಯಾರಿಗೆ ಯಾವಾಗ ಏನು ಕೊಡಬೇಕು ಗೊತ್ತಿದೆ. ಎಲ್ಲವನ್ನೂ ಹೈಕಮಾಂಡ್ ನಿರ್ಧಾರ ಮಾಡುತ್ತದೆ. ಬಳ್ಳಾರಿ ಗಲಾಟೆ ವಿಚಾರವನ್ನು ಸಿಓಡಿ ಬದಲಿ ಸಿಬಿಐ ತನಿಖೆಗೆ ಮಾಡಬೇಕು. ಆಡಿಯೋ, ವಿಡಿಯೋ ಸಾಕ್ಷಿಯಾಗಿ ಪರಿಗಣಿಸೋದಿಲ್ಲ. ಎಐ ತಂತ್ರಜ್ಞಾನದ ಮೂಲಕ ನಕಲಿ ಮಾಡಬಹುದು. ರಾಜ್ಯದಲ್ಲಿ ನಡೆಯುತ್ತಿರುವ ತನಿಖೆಯಲ್ಲಿ ಕಾಂಗ್ರೆಸ್ ಕಾರ್ಯಕರ್ತರಿಗೆ ಕ್ಲೀನ್ ಅಪ್ ಚಿಟ್ ನೀಡಬಹುದು. ಹೀಗಾಗಿ ಬಳ್ಳಾರಿ ಗಲಾಟೆ ಬಗ್ಗೆ ಸಿಬಿಐ ತನಿಖೆ ಮಾಡುವಂತೆ ಆಗ್ರಹಿಸಿದರು.

ಹಿಂದೂಸ್ತಾನ್ ಸಮಾಚಾರ್ / jyothi deshpande


 rajesh pande