
ಮುಂಬಯಿ, 12 ಜನವರಿ (ಹಿ.ಸ.) :
ಆ್ಯಂಕರ್ : ಕರ್ನಾಟಕ ವಿಧಾನ ಪರಿಷತ್‌ನ ಸರ್ಕಾರಿ ಮುಖ್ಯ ಸಚೇತಕರಾದ ಸಲೀಂ ಅಹ್ಮದ್ ಅವರು, ಮಹಾನಗರ ಪಾಲಿಕೆ ಚುನಾವಣೆ ಹಿನ್ನೆಲೆ ಇಂದು ಮಹಾರಾಷ್ಟ್ರದ ಮುಂಬಾದೇವಿ ವಿಧಾನ ಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳ ಪರವಾಗಿ ಮತಪ್ರಚಾರ ನಡೆಸಿದರು.
ಪ್ರಚಾರದ ವೇಳೆ ಕಾಂಗ್ರೆಸ್ ಪಕ್ಷದ ನೀತಿಗಳು, ನಗರಾಭಿವೃದ್ಧಿ ಹಾಗೂ ನಾಗರಿಕ ಸೌಲಭ್ಯಗಳ ಬಲಪಡಿಸುವ ಭರವಸೆಗಳ ಕುರಿತು ಅವರು ಮಾತನಾಡಿದರು. ಜನಸಾಮಾನ್ಯರ ಸಮಸ್ಯೆಗಳಿಗೆ ಸ್ಪಂದಿಸುವ ಆಡಳಿತ ನೀಡುವುದೇ ಕಾಂಗ್ರೆಸ್‌ನ ಉದ್ದೇಶವೆಂದು ತಿಳಿಸಿದರು.
ಈ ಕಾರ್ಯಕ್ರಮದಲ್ಲಿ ಮುಂಬಾದೇವಿ ಕ್ಷೇತ್ರದ ಶಾಸಕರಾದ ಅಮಿನ್ ಪಟೇಲ್ ಸೇರಿದಂತೆ ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa