ಅಂಬಿಗರ ಚೌಡಯ್ಯ ಜಯಂತಿ : ಪೂರ್ವಸಿದ್ಧತಾ ಸಭೆ
ಗದಗ, 13 ಜನವರಿ (ಹಿ.ಸ.) ಆ್ಯಂಕರ್: ನಿಜಶರಣ ಅಂಬಿಗರ ಚೌಡಯ್ಯ ಜಯಂತಿಯನ್ನು ಜನೆವರಿ 21 ರಂದು ಗದಗ ಜಿಲ್ಲಾಡಳಿತ ಭವನದ ಆಡಿಟೋರಿಯಂ ಹಾಲ್‌ದಲ್ಲಿ ವ್ಯವಸ್ಥಿತವಾಗಿ ಹಾಗೂ ಅಚ್ಚುಕಟ್ಟಾಗಿ ಆಚರಿಸಲು ಕ್ರಮ ವಹಿಸಬೇಕೆಂದು ಅಪರ ಜಿಲ್ಲಾಧಿಕಾರಿ ಡಾ.ದುರಗೇಶ್ ಕೆ.ಆರ್. ತಿಳಿಸಿದರು. ನಗರದ ಜಿಲ್ಲಾಧಿಕಾರಿಗಳ ಕಚ
ಫೋಟೋ


ಗದಗ, 13 ಜನವರಿ (ಹಿ.ಸ.)

ಆ್ಯಂಕರ್:

ನಿಜಶರಣ ಅಂಬಿಗರ ಚೌಡಯ್ಯ ಜಯಂತಿಯನ್ನು ಜನೆವರಿ 21 ರಂದು ಗದಗ ಜಿಲ್ಲಾಡಳಿತ ಭವನದ ಆಡಿಟೋರಿಯಂ ಹಾಲ್‌ದಲ್ಲಿ ವ್ಯವಸ್ಥಿತವಾಗಿ ಹಾಗೂ ಅಚ್ಚುಕಟ್ಟಾಗಿ ಆಚರಿಸಲು ಕ್ರಮ ವಹಿಸಬೇಕೆಂದು ಅಪರ ಜಿಲ್ಲಾಧಿಕಾರಿ ಡಾ.ದುರಗೇಶ್ ಕೆ.ಆರ್. ತಿಳಿಸಿದರು.

ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ನಿಜಶರಣ ಅಂಬಿಗರ ಚೌಡಯ್ಯ ಜಯಂತಿ ಕುರಿತು ಜರುಗಿದ ಪೂರ್ವಸಿದ್ಧತಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ತಾಲೂಕು ಮಟ್ಟದಲ್ಲಿಯೂ ನಿಜಶರಣ ಅಂಬಿಗರ ಚೌಡಯ್ಯ ಜಯಂತಿಯನ್ನು ವ್ಯವಸ್ಥಿತವಾಗಿ ಆಚರಿಸಲು ಕ್ರಮ ವಹಿಸಬೇಕು. ಶಿಷ್ಟಾಚಾರದನ್ವಯ ಆಮಂತ್ರಣ ಪತ್ರಿಕೆ ಮುದ್ರಣಕ್ಕೆ ಕ್ರಮ ವಹಿಸಬೇಕು. ಕಾರ್ಯಕ್ರಮದಲ್ಲಿ ಯಾವುದೇ ಲೋಪದೋಷಗಳಾಗದಂತೆ ಅರ್ಥಪೂರ್ಣ ಆಚರಣೆಗೆ ಕ್ರಮ ಕೈಗೊಳ್ಳಬೇಕು. ಎಸ್.ಎಸ್ ಎಲ್ ಸಿ, ಪಿಯುಸಿಯಲ್ಲಿ ಅತೀ ಹೆಚ್ಚು ಅಂಕ ಗಳಿಸಿದ ಸಮಾಜದ ವಿದ್ಯಾರ್ಥಿಗಳಿಗೆ ಹಾಗೂ ವಿವಿಧ ಕ್ಷೇತ್ರಗಳಲ್ಲಿ ಸಮಾಜದ ಸಾಧಕರನ್ನು ಸನ್ಮಾನಿಸುವ ಕಾರ್ಯಕ್ರಮ ಜರುಗಲಿದೆ ಎಂದು ಅಪರ ಜಿಲ್ಲಾಧಿಕಾರಿಗಳು ತಿಳಿಸಿದರು.

ಸಭೆಯಲ್ಲಿ ವೇದಿಕೆ ವ್ಯವಸ್ಥೆ, ಉಪನ್ಯಾಸಕರ ನೇಮಕ, ಬ್ಯಾನರ್ ಅಳವಡಿಕೆ ಕುರಿತು ಚರ್ಚಿಸಲಾಯಿತು.

ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಡಾ.ಬಸವರಾಜ ಬಳ್ಳಾರಿ ಸರ್ವರನ್ನು ಸ್ವಾಗತಿಸಿದರು.

ಸಭೆಯಲ್ಲಿ ಶಾಲಾ ಶಿಕ್ಷಣ ಇಲಾಖೆ ಉಪನಿರ್ದೇಶಕ ಆರ್.ಎಸ್.ಬುರುಡಿ, ಹಿಂದುಳಿದ ವರ್ಗಗಳ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಸಹಾಯಕ ನಿರ್ದೇಶಕ ವಸಂತ ಮಡ್ಲೂರ ಸೇರಿದಂತೆ ಸಮಾಜದ ಅಧ್ಯಕ್ಷರು, ಉಪಾಧ್ಯಕ್ಷರು, ಪದಾದಿಕಾರಿಗಳು ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು ಹಾಜರಿದ್ದರು.

---------------

ಹಿಂದೂಸ್ತಾನ್ ಸಮಾಚಾರ್ / lalita MP


 rajesh pande