ರಸ್ತೆ ಅಪಘಾತಗಳು ; ಪೊಲೀಸ್ ಇಲಾಖೆಯಿಂದ ಜಾಗೃತಿ
ವಿಜಯಪುರ, 14 ಜನವರಿ (ಹಿ.ಸ.) : ಆ್ಯಂಕರ್ : ರಸ್ತೆ ಅಪಘಾತಗಳು ಹೆಚ್ಚಾಗ್ತಿರೋ ಹಿನ್ನಲೆ ವಿಜಯಪುರ ಜಿಲ್ಲೆಯ ಬಸವನ ಬಾಗೇವಾಡಿ ಉಪ ವಿಭಾಗ ವ್ಯಾಪ್ತಿಯಲ್ಲಿ ಪೊಲೀಸ್ ಇಲಾಖೆಯಿಂದ ಜಾಗೃತಿ ಅಭಿವೃದ್ಧಿ ನಡೆಸಲಾಯಿತು. ಬಸವನ ಬಾಗೇವಾಡಿ ಪಟ್ಟಣದ ಅಂಬೇಡ್ಕರ್ ವೃತ್ತದಿಂದ ಬೈಕ್ ರ್ಯಾಲಿ ನಡೆಯಸಲಾಯಿತು. ಸಿದ್ದಲ
ರಸ್ತೆ ಅಪಘಾತಗಳು ; ಪೊಲೀಸ್ ಇಲಾಖೆಯಿಂದ ಜಾಗೃತಿ


ವಿಜಯಪುರ, 14 ಜನವರಿ (ಹಿ.ಸ.) :

ಆ್ಯಂಕರ್ : ರಸ್ತೆ ಅಪಘಾತಗಳು ಹೆಚ್ಚಾಗ್ತಿರೋ ಹಿನ್ನಲೆ ವಿಜಯಪುರ ಜಿಲ್ಲೆಯ ಬಸವನ ಬಾಗೇವಾಡಿ ಉಪ ವಿಭಾಗ ವ್ಯಾಪ್ತಿಯಲ್ಲಿ ಪೊಲೀಸ್ ಇಲಾಖೆಯಿಂದ ಜಾಗೃತಿ ಅಭಿವೃದ್ಧಿ ನಡೆಸಲಾಯಿತು.

ಬಸವನ ಬಾಗೇವಾಡಿ ಪಟ್ಟಣದ ಅಂಬೇಡ್ಕರ್ ವೃತ್ತದಿಂದ ಬೈಕ್ ರ್ಯಾಲಿ ನಡೆಯಸಲಾಯಿತು. ಸಿದ್ದಲಿಂಗ ಮಹಾಸ್ವಾಮೀಗಳು ಹಸಿರು ನಿಶಾನೆ ತೋರಿಸುವ ಮೂಲಕ ಜಾಗೃತಿ ಬೈಕ್ ಜಾತಾಗೆ ಚಾಲನೆ ನೀಡಿದರು.

ಈ ವೇಳೆ ಬಸವನ ಬಾಗೇವಾಡಿ ಡಿವೈಎಸ್ಪಿ ಬಲ್ಲಪ್ಪ ನಂದಗಾವಿ ರಸ್ತೆ ಸುರಕ್ಷತಾ ಕ್ರಮಗಳ ಬಗ್ಗೆ ಜಾಗೃತಿ ಮೂಡಿಸಿದರು. ಕಡ್ಡಾಯವಾಗಿ ಹೆಲ್ಮೆಟ್ ಧರಿಸಿ ಬೈಕ್ ಚಲಾಯಿಸಬೇಕು. ರಸ್ತೆ ನಿಯಮಗಳನ್ನ ತಪ್ಪದೆ ಪಾಲಿಸಬೇಕು ಎಂದು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಿದರು.

ಹಿಂದೂಸ್ತಾನ್ ಸಮಾಚಾರ್ / jyothi deshpande


 rajesh pande