ಜಾನುವಾರು ಜಾತ್ರೆ ಡಿಸಿ ಡಾ.ಆನಂದ ಭೇಟಿ
ವಿಜಯಪುರ, 14 ಜನವರಿ (ಹಿ.ಸ.) : ಆ್ಯಂಕರ್ : ಜಾನುವಾರ ಜಾತ್ರೆಯ ಅಂಗವಗಿ ನಗರದ ತೊರವಿಯಲ್ಲಿ ನಡೆಯುತ್ತಿರುವ ಜಾನುವಾರ ಜಾತ್ರಾ ಸ್ಥಳಕ್ಕೆ ಬುಧವಾರ ಜಿಲ್ಲಾಧಿಕಾರಿ ಡಾ.ಆನಂದ.ಕೆ ಅವರು ಭೇಟಿ ನೀಡಿ, ಪರಿಶೀಲನೆ ನಡೆಸಿ ಜಾತ್ರೆಯ ಸುಸೂತ್ರ ನಿರ್ವಹಣೆಗಾಗಿ ಅಧಿಕಾರಿಗಳಿಗೆ ಅಗತ್ಯ ಸಲಹೆ ಸೂಚನೆ ನೀಡಿದರು.
ಜಾನುವಾರು ಜಾತ್ರೆ ಡಿಸಿ ಡಾ.ಆನಂದ ಭೇಟಿ


ವಿಜಯಪುರ, 14 ಜನವರಿ (ಹಿ.ಸ.) :

ಆ್ಯಂಕರ್ : ಜಾನುವಾರ ಜಾತ್ರೆಯ ಅಂಗವಗಿ ನಗರದ ತೊರವಿಯಲ್ಲಿ ನಡೆಯುತ್ತಿರುವ ಜಾನುವಾರ ಜಾತ್ರಾ ಸ್ಥಳಕ್ಕೆ ಬುಧವಾರ ಜಿಲ್ಲಾಧಿಕಾರಿ ಡಾ.ಆನಂದ.ಕೆ ಅವರು ಭೇಟಿ ನೀಡಿ, ಪರಿಶೀಲನೆ ನಡೆಸಿ ಜಾತ್ರೆಯ ಸುಸೂತ್ರ ನಿರ್ವಹಣೆಗಾಗಿ ಅಧಿಕಾರಿಗಳಿಗೆ ಅಗತ್ಯ ಸಲಹೆ ಸೂಚನೆ ನೀಡಿದರು.

ಸಂಕ್ರಮಣ ಜಾತ್ರೆಯ ಹಿನ್ನೆಲೆಯಲ್ಲಿ ಜಾನುವಾರ ಜಾತ್ರೆ ಆಯೋಜಿಸಲಾಗುತ್ತಿದ್ದು, ಇದೇ ಜ.10 ರಿಂದ ಆರಂಭಗೊ0ಡಿದ್ದು, ಈ ಸಂದರ್ಭ ಯಾವುದೇ ಸಮಸ್ಯೆಯುಂಟಾಗದ0ತೆ ಅಗತ್ಯ ಮೂಲಭೂತ ಸೌಕರ್ಯಗಳನ್ನು ಕಲ್ಪಿಸಿರುವುದನ್ನು ಹಾಗೂ ಜಾತ್ರೆಗೆ ಆಗಮಿಸಲು ಅನುಕೂಲವಾಗುವ ನಿಟ್ಟಿನಲ್ಲಿ ಸುಗಮ ರಸ್ತೆ ಹಾಗೂ ಸಾರಿಗೆ ವ್ಯವಸ್ಥೆ, ಜಾನುವಾರಗಳಿಗೆ ಕುಡಿಯುವ ನೀರು ಒದಗಿಸುವುದು ಪಶುವೈದ್ಯಾಧಿಕಾರಿಗಳು ಜಾತ್ರೆಯ ಸಂದರ್ಭದಲ್ಲಿ ಅಗತ್ಯ ಮುಂಜಾಗ್ರತೆ ತೆಗೆದುಕೊಂಡಿರುವ ಕುರಿತು ಮಾಹಿತಿ ಪಡೆದುಕೊಂಡರು.

ಆ0ಬುಲೆನ್ಸ್, ವೈದ್ಯಕೀಯ ಸೌಲಭ್ಯ ಸೇರಿದಂತೆ ಯಾವುದೇ ಕೊರತೆ ಉಂಟಾಗದ0ತೆ ಅಚ್ಚುಕಟ್ಟಾಗಿ ಜಾನುವಾರ ಜಾತ್ರೆ ವ್ಯವಸ್ಥಿತವಾಗಿ ನೋಡಿಕೊಳ್ಳಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದರು.ಇದೇ ಸಂದರ್ಭದಲ್ಲಿ ನಡೆದಿರುವ ಜಾನುವಾರುಗಳ ಬಹುಮಾನ ಆಯ್ಕೆ ಮಾನದಂಡಗಳ0ತೆ ಆಯ್ಕೆ ಪ್ರಕ್ರಿಯೆ ನಡೆಸುವಂತೆ ಸೂಚಿಸಿದರು.

ಈ ಬಾರಿ ಜಾತ್ರೆಗೆ ಸುಮಾರು ಐದು ಸಾವಿರ ಜಾನುವಾರಗಳು ಆಗಮಿಸಿದ್ದು, ಅವುಗಳ ಪೈಕಿ ಈವರೆಗೆ 1500 ಜಾನುವಾರುಗಳು ಮಾರಾಟವಾಗಿರುವ ಹಾಗೂ ಬಹುಮಾನ ವಿತರಣೆ ಕುರಿತ ಮಾಹಿತಿ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ ಕಾರ್ಯದರ್ಶಿ ಅಲ್ಲಾಭಕ್ಷ ಬಿಜಾಪುರ ಮಾಹಿತಿ ನೀಡಿದರು.

ಈ ಸಂದರ್ಭ ಪಶುಸಂಗೋಪನಾ ಇಲಾಖೆಯ ಉಪ ನಿರ್ದೇಶಕ ಅಶೋಕ ಗೋಣಸಗಿ ಸೇರಿದಂತೆ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.

ಹಿಂದೂಸ್ತಾನ್ ಸಮಾಚಾರ್ / jyothi deshpande


 rajesh pande