
ಬೆಳಗಾವಿ, 14 ಜನವರಿ (ಹಿ.ಸ.) :
ಆ್ಯಂಕರ್ : ಬೆಳಗಾವಿ ಗೃಹ ಕಚೇರಿಯಲ್ಲಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಬೆಳಗಾವಿ ಗ್ರಾಮೀಣ ಕ್ಷೇತ್ರದ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರಿಗೆ ನೇಮಕಾತಿ ಆದೇಶ ಪ್ರತಿಗಳನ್ನು ವಿತರಿಸಿದರು.
ಒಟ್ಟು 2 ಕಾರ್ಯಕರ್ತೆಯರ ಹಾಗೂ 20 ಸಹಾಯಕಿಯರ ಹುದ್ದೆಗಳಿಗೆ ಈ ಸಂದರ್ಭದಲ್ಲಿ ನೇಮಕಾತಿ ಆದೇಶ ಪ್ರತಿಗಳನ್ನು ಹಸ್ತಾಂತರಿಸಲಾಯಿತು.
ಈ ವೇಳೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಜಿಲ್ಲಾ ಉಪ ನಿರ್ದೇಶಕರಾದ ಚೇತನಕುಮಾರ್, ಬೆಳಗಾವಿ ಗ್ರಾಮೀಣ ಶಿಶು ಅಭಿವೃದ್ಧಿ ಯೋಜನಾಧಿಕಾರಿ ಶ್ರೀಮತಿ ಸುಮಿತ್ರಾ, ತಾಲೂಕಾ ಪಂಚಾಯತ್ ನ ಮಾಜಿ ಅಧ್ಯಕ್ಷರಾದ ಶಂಕರಗೌಡ ಪಾಟೀಲ ಉಪಸ್ಥಿತರಿದ್ದರು.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa