
ನವದೆಹಲಿ, 14 ಜನವರಿ (ಹಿ.ಸ.) :
ಆ್ಯಂಕರ್ : ಬಿಜೆಪಿ ಹಿರಿಯ ನಾಯಕ, ಸಂಸದ ಹಾಗೂ ಮಾಜಿ ಕೇಂದ್ರ ಸಚಿವ ರವಿಶಂಕರ್ ಪ್ರಸಾದ್ ಅವರ ಅಧಿಕೃತ ನಿವಾಸದಲ್ಲಿ ಬುಧವಾರ ಬೆಳಿಗ್ಗೆ ಬೆಂಕಿ ಅವಘಡ ಸಂಭವಿಸಿದೆ. ಮದರ್ ತೆರೇಸಾ ಕ್ರೆಸೆಂಟ್ ರಸ್ತೆಯಲ್ಲಿರುವ ಮನೆ ಸಂಖ್ಯೆ 21ರಲ್ಲಿ ಬೆಳಿಗ್ಗೆ ಸುಮಾರು 8:05ಕ್ಕೆ ಬೆಂಕಿ ಕಾಣಿಸಿಕೊಂಡಿದೆ ಎಂದು ಅಗ್ನಿಶಾಮಕ ಇಲಾಖೆ ತಿಳಿಸಿದೆ.
ಮನೆಯ ಒಂದು ಕೋಣೆಯ ಹಾಸಿಗೆಯಲ್ಲಿ ಬೆಂಕಿ ಹೊತ್ತಿಕೊಂಡಿದ್ದು, ಕೋಣೆಯಾದ್ಯಂತ ದಟ್ಟ ಹೊಗೆ ಆವರಿಸಿತ್ತು. ಮಾಹಿತಿ ಪಡೆದ ತಕ್ಷಣ ಮೂರು ಅಗ್ನಿಶಾಮಕ ವಾಹನಗಳು ಸ್ಥಳಕ್ಕೆ ಧಾವಿಸಿ, ಸುಮಾರು ಅರ್ಧ ಗಂಟೆ ಕಾರ್ಯಾಚರಣೆ ನಡೆಸಿ ಬೆಳಿಗ್ಗೆ 8:30ರ ಹೊತ್ತಿಗೆ ಬೆಂಕಿಯನ್ನು ಸಂಪೂರ್ಣವಾಗಿ ನಿಯಂತ್ರಣಕ್ಕೆ ತಂದವು. ದೆಹಲಿ ಪೊಲೀಸರು ಹಾಗೂ ಸ್ಥಳೀಯ ಆಡಳಿತಕ್ಕೂ ಮಾಹಿತಿ ನೀಡಲಾಗಿತ್ತು.
ಈ ಅವಘಡದಲ್ಲಿ ಯಾವುದೇ ಗಾಯಗಳ ವರದಿ ಇಲ್ಲ. ಪ್ರಾಥಮಿಕವಾಗಿ ಶಾರ್ಟ್ ಸರ್ಕ್ಯೂಟ್‌ನಿಂದ ಬೆಂಕಿ ಉಂಟಾಗಿರಬಹುದೆಂದು ಶಂಕಿಸಲಾಗಿದ್ದು, ನಿಖರ ಕಾರಣ ಪತ್ತೆಗೆ ತನಿಖೆ ಮುಂದುವರಿದಿದೆ.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa