
ನವದೆಹಲಿ, 14 ಜನವರಿ (ಹಿ.ಸ.) :
ಆ್ಯಂಕರ್ : ಪ್ರಧಾನಿ ನರೇಂದ್ರ ಮೋದಿ ಅವರು ನಾಳೆ ಕಾಮನ್‌ವೆಲ್ತ್ ರಾಷ್ಟ್ರಗಳ ಲೋಕಸಭಾ ಸ್ಪೀಕರ್‌ಗಳು ಹಾಗೂ ಸಭಾಧ್ಯಕ್ಷರ 28ನೇ ಸಮ್ಮೇಳನವನ್ನು ಉದ್ಘಾಟಿಸಲಿದ್ದಾರೆ. ಸಂಸತ್ ಭವನ ಸಂಕೀರ್ಣದಲ್ಲಿರುವ ಸಂವಿಧಾನ ಭವನದ ಕೇಂದ್ರ ಸಭಾಂಗಣದಲ್ಲಿ ಈ ಅಂತಾರಾಷ್ಟ್ರೀಯ ಸಮ್ಮೇಳನ ನಡೆಯಲಿದೆ. ಈ ಸಂದರ್ಭದಲ್ಲಿ ಪ್ರಧಾನಿ ಮೋದಿ ಅವರು ಪ್ರಮುಖ ಭಾಷಣ ಮಾಡಲಿದ್ದಾರೆ.
ಪ್ರಧಾನಮಂತ್ರಿ ಕಚೇರಿಯ ಮಾಹಿತಿಯಂತೆ, ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಅವರು ಸಮ್ಮೇಳನದ ಅಧ್ಯಕ್ಷತೆಯನ್ನು ವಹಿಸಲಿದ್ದಾರೆ. 42 ಕಾಮನ್‌ವೆಲ್ತ್ ರಾಷ್ಟ್ರಗಳು ಮತ್ತು ನಾಲ್ಕು ಅರೆ-ಸ್ವಾಯತ್ತ ಸಂಸತ್ತುಗಳಿಂದ ಒಟ್ಟು 61 ಸ್ಪೀಕರ್‌ಗಳು ಹಾಗೂ ಸಭಾಧ್ಯಕ್ಷರು ಈ ಸಮ್ಮೇಳನದಲ್ಲಿ ಭಾಗವಹಿಸಲಿದ್ದಾರೆ.
ಸಮ್ಮೇಳನದಲ್ಲಿ ಬಲಿಷ್ಠ ಪ್ರಜಾಪ್ರಭುತ್ವ ಸಂಸ್ಥೆಗಳ ನಿರ್ಮಾಣದಲ್ಲಿ ಸ್ಪೀಕರ್‌ಗಳ ಪಾತ್ರ, ಸಂಸದೀಯ ಕಾರ್ಯಚಟುವಟಿಕೆಯಲ್ಲಿ ಕೃತಕ ಬುದ್ಧಿಮತ್ತೆಯ ಬಳಕೆ, ಸಂಸದರ ಮೇಲೆ ಸಾಮಾಜಿಕ ಮಾಧ್ಯಮದ ಪ್ರಭಾವ, ಸಂಸತ್ತಿನ ಕುರಿತು ಸಾರ್ವಜನಿಕ ಜಾಗೃತಿಯನ್ನು ಹೆಚ್ಚಿಸುವ ನವೀನ ಪ್ರಯತ್ನಗಳು ಹಾಗೂ ಮತದಾನವನ್ನು ಮೀರಿ ನಾಗರಿಕರ ಸಕ್ರಿಯ ಭಾಗವಹಿಸುವಿಕೆಯನ್ನು ಉತ್ತೇಜಿಸುವ ತಂತ್ರಗಳ ಕುರಿತು ವ್ಯಾಪಕ ಚರ್ಚೆಗಳು ನಡೆಯಲಿವೆ.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa