ಬಸ್ ನಿಲ್ದಾಣಗಳಲ್ಲಿ ಸ್ವಚ್ಚತೆ ಕಾಪಾಡಿ : ಕುರುಬರ
ವಿಜಯಪುರ, 14 ಜನವರಿ (ಹಿ.ಸ.) : ಆ್ಯಂಕರ್ : ವಿಜಯಪುರ ಜಿಲ್ಲಾ ಕೇಂದ್ರ ಬಸ್ ನಿಲ್ದಾಣ ಹಾಗೂ ಸ್ಯಾಟಲೈಟ್ ಬಸ್ ನಿಲ್ದಾಣ ಸೇರಿದಂತೆ ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮದ ವಿಜಯಪುರ ವಿಭಾಗದ ವ್ಯಾಪ್ತಿಗೆ ಒಟ್ಟು 26 ಬಸ್ ನಿಲ್ದಾಣಗಳು ಒಳಪಡುತ್ತಿವೆ. ವಿಭಾಗದ ಬಸ್ ನಿಲ್ದಾಣಗಳ ಸ್ವಚ್ಚತೆ ಹಾಗೂ ನಿಲ್ದಾಣ
ಬಸ್ ನಿಲ್ದಾಣಗಳಲ್ಲಿ ಸ್ವಚ್ಚತೆ ಕಾಪಾಡಿ : ಕುರುಬರ


ವಿಜಯಪುರ, 14 ಜನವರಿ (ಹಿ.ಸ.) :

ಆ್ಯಂಕರ್ : ವಿಜಯಪುರ ಜಿಲ್ಲಾ ಕೇಂದ್ರ ಬಸ್ ನಿಲ್ದಾಣ ಹಾಗೂ ಸ್ಯಾಟಲೈಟ್ ಬಸ್ ನಿಲ್ದಾಣ ಸೇರಿದಂತೆ ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮದ ವಿಜಯಪುರ ವಿಭಾಗದ ವ್ಯಾಪ್ತಿಗೆ ಒಟ್ಟು 26 ಬಸ್ ನಿಲ್ದಾಣಗಳು ಒಳಪಡುತ್ತಿವೆ. ವಿಭಾಗದ ಬಸ್ ನಿಲ್ದಾಣಗಳ ಸ್ವಚ್ಚತೆ ಹಾಗೂ ನಿಲ್ದಾಣದಲ್ಲಿ ಕುಡಿಯುವ ನೀರು, ಶೌಚಾಲಯಗಳ ಸಮರ್ಪಕ ನಿರ್ವಹಣೆಗೆ ಕ್ರಮ ತೆಗದುಕೊಳ್ಳಲಾಗಿದ್ದು, ಪ್ರಯಾಣಿಕರು ಬಸ್ ನಿಲ್ದಾಣಗಳಲ್ಲಿ ಸ್ವಚ್ಛತೆ ಕಾಪಾಡುವಂತೆ ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮದ ವಿಭಾಗೀಯ ನಿಯಂತ್ರಣಾಧಿಕಾರಿ ನಾರಾಯಣಪ್ಪ ಕುರುಬರ ಅವರು ಮನವಿ ಮಾಡಿದ್ದಾರೆ.

ಈ ಕುರಿತು ಪ್ರಕಟಣೆ ನೀಡಿರುವ ಅವರು,ಎಲ್ಲ ಬಸ್ ನಿಲ್ದಾಣಗಳ ಸ್ವಚ್ಛತೆ ಹಾಗೂ ಪ್ರಯಾಣಿಕ ಸ್ನೇಹಿ ಶೌಚಾಲಯ ನಿರ್ವಹಣೆಗಾಗಿ ಕಾರ್ಮಿಕ ಇಲಾಖೆಯಡಿ ನೋಂದಾಯಿತ ಗುತ್ತಿಗೆದಾರರಿಗೆ ಇ-ಟೆಂಡರ್ ಮೂಲಕ ಆಯ್ಕೆಮಾಡಿ ಪರವಾನಿಗೆ ನೀಡಲಾಗಿದೆ. ಪರವಾನಿಗೆದಾರರು ಪ್ರತಿನಿತ್ಯ ಬಸ್ ನಿಲ್ದಾಣ ಸ್ವಚ್ಚಗೊಳಿಸಿರುವುದನ್ನು ಪರಿಶೀಲಿಸಲು ಬಸ್ ನಿಲ್ದಾಣಗಳ ಸ್ವಚ್ಚತೆ ವಿಜಯಪುರ ವಿಭಾಗ ಎಂಬ ವಾಟ್ಸ್-ಅಪ್ ಗ್ರೂಪ್ ರಚಿಸಿಕೊಂಡು ಅಲ್ಲಿ ಪ್ರತಿ ದಿನ ಮೂರು ಬಾರಿ ಬಸ್ ನಿಲ್ದಾಣ ಸ್ವಚ್ಚಗೊಳಿಸಿರುವ ಕುರಿತಾಗಿ ಜಿ.ಪಿ.ಎಸ್ ಫೋಟೊ ಅಪ್ಲೋಡ್ ಮಾಡಲು ಸಿಬ್ಬಂದಿಗೆ ಸೂಚಿಸಲಾಗಿದೆ. ಸೂಚನೆಯಂತೆ ಸಂಸ್ಥೆಯ ಸಿಬ್ಬಂದಿಗಳು ಹಾಗೂ ಸ್ವಚ್ಚತಾ ಕಾರ್ಮಿಕ ಸಿಬ್ಬಂದಿ ಪ್ರತಿದಿನ ಅಪ್‌ಲೋಡ್ ಮಾಡಿದ ಫೋಟೊಗಳನ್ನು ಪರಿಶೀಲಿಸಿ ಬಸ್ ನಿಲ್ದಾಣಗಳನ್ನು ಸ್ವಚ್ಚವಾಗಿಡಲು ಕ್ರಮ ವಹಿಸಲಾಗುತ್ತಿದೆ.

ಅದರಂತೆ, ಕೇ0ದ್ರ ಬಸ್ ನಿಲ್ದಾಣವನ್ನು ಸ್ವಚ್ಚವಾಗಿರಿಸುವಲ್ಲಿ ಬಹಳಷ್ಟು ಕ್ರಮ ತೆಗೆದುಕೊಳ್ಳಲಾಗುತ್ತಿದೆ. ಕೇಂದ್ರ ಬಸ್ ನಿಲ್ದಾಣವು ಜಿಲ್ಲಾ ಬಸ್ ನಿಲ್ದಾಣವಾಗಿದ್ದು, ನಗರ ಸಾರಿಗೆ, ಜಿಲ್ಲೆಯ ಗ್ರಾಮ,ತಾಲೂಕು ಸೇರಿದಂತೆ ರಾಜ್ಯದ ವಿವಿಧ ಭಾಗಗಳಿಗೆ ಇಲ್ಲಿಂದ ಬಸ್ ಸಾರಿಗೆ ಸಂಚಾರವಿರುವುದರಿ0ದ ಅತಿ ಹೆಚ್ಚು ಪ್ರಯಾಣಿಕರಿಂದ ಕೂಡಿರುತ್ತದೆ. ಪ್ರಯಾಣಿಕರು ಬಸ್ ನಿಲ್ದಾಣವನ್ನು ಸ್ವಚ್ಛವಾಗಿಡುವ ನಿಟ್ಟಿನಲ್ಲಿ ಈಗಾಗಲೇ ಸಾಕಷ್ಟು ಪ್ರಚಾರ ಹಾಗೂ ಜಾಗೃತಿ ಮೂಡಿಸಲಾಗುತ್ತಿದೆ. ಬಸ್ ನಿಲ್ದಾಣದ ಸ್ವಚ್ಚತೆ ಕಾಪಾಡುವುದು ಪ್ರಯಾಣಿಕರ ಬಹು ದೊಡ್ಡ ಜವಾಬ್ದಾರಿಯೂ ಆಗಿದೆ. ಈಗಾಗಲೇ ತ್ಯಾಜ್ಯ ವಿಲೇವಾರಿಗಾಗಿ ನಿಲ್ದಾಣದ ವಿವಿಧೆಡೆ ಕಸದ ಡಬ್ಬಿಗಳನ್ನು ಇರಿಸಲಾಗಿದ್ದು, ಪ್ರಯಾಣಿಕರು ಎಲ್ಲೆಂದರಲ್ಲಿ ಕಸ ಎಸೆಯದೇ ನಿಗದಿಪಡಿಸದ ಕಸದ ಡಬ್ಬಿಯಲ್ಲಿಯೇ ಕಸ ಹಾಕುವ ಮೂಲಕ ನಿಲ್ದಾಣದ ಸ್ವಚ್ಛತೆಗೆ ಸಹಕರಿಸಬೇಕು. ಪ್ರಯಾಣಿಕರು ನಿಲ್ದಾಣದಲ್ಲಿರುವ ಶೌಚಾಲಯ ಬಳಸಬೇಕು. ಬಯಲು ಬಹಿರ್ದೆಸೆ ನಿಷೇಧವಿದ್ದು, ಕಂಡು ಬ0ದರೆ ದಂಡ ವಿಧಿಸುವ ಅವಕಾಶವೂ ಇದೆ. ಬಸ್ ನಿಲ್ದಾಣವನ್ನು ಸ್ವಚ್ಛ ಹಾಗೂ ಸುಂದರವಾಗಿಡುವ ನಿಟ್ಟಿನಲ್ಲಿ ಪ್ರಯಾಣಿಕರು ನಿಗಮದೊಂದಿಗೆ ಕೈಜೋಡಿಸುವಂತೆ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಹಿಂದೂಸ್ತಾನ್ ಸಮಾಚಾರ್ / jyothi deshpande


 rajesh pande