ಐ.ಎ.ಎಸ್ ಮತ್ತು ಕೆ.ಎಎಸ್ ಪರೀಕ್ಷೆಗಳಿಗೆ ತರಬೇತಿ
ಬೆಂಗಳೂರು, 14 ಜನವರಿ (ಹಿ.ಸ.) : ಆ್ಯಂಕರ್ : ವವಾರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ ಕೇಂದ್ರದ ವತಿಯಿಂದ ಕೇಂದ್ರ ಲೋಕ ಸೇವಾ ಆಯೋಗದವರು ನಡೆಸಲಿರುವ ಐಎಎಸ್ ಹಾಗೂ ಕರ್ನಾಟಕ ಲೋಕ ಸೇವಾ ಆಯೋಗದವರು ನಡೆಸಲಿರುವ ಕೆಎಎಸ್ ಮತ್ತಿತರ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ 50 ದ
ಐ.ಎ.ಎಸ್ ಮತ್ತು ಕೆ.ಎಎಸ್ ಪರೀಕ್ಷೆಗಳಿಗೆ ತರಬೇತಿ


ಬೆಂಗಳೂರು, 14 ಜನವರಿ (ಹಿ.ಸ.) :

ಆ್ಯಂಕರ್ : ವವಾರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ ಕೇಂದ್ರದ ವತಿಯಿಂದ ಕೇಂದ್ರ ಲೋಕ ಸೇವಾ ಆಯೋಗದವರು ನಡೆಸಲಿರುವ ಐಎಎಸ್ ಹಾಗೂ ಕರ್ನಾಟಕ ಲೋಕ ಸೇವಾ ಆಯೋಗದವರು ನಡೆಸಲಿರುವ ಕೆಎಎಸ್ ಮತ್ತಿತರ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ 50 ದಿನಗಳ ತರಬೇತಿಯನ್ನು ಮೈಸೂರಿನ ಕೇಂದ್ರ ಕಛೇರಿಯಲ್ಲಿ ನಡೆಯಲಿದೆ.

ಆಸಕ್ತರು ಜನವರಿ 17, 2026ರೊಳಗಾಗಿ ಬೆಳಿಗ್ಗೆ 10.00 ಗಂಟೆಯಿಂದ ಸಂಜೆ 4.30 ಗಂಟೆಯವರೆಗೆ ದೂರವಾಣಿ ಸಂಖ್ಯೆ 0821-2515944 ಮೂಲಕ ತಮ್ಮ ಹೆಸರನ್ನು ನೊಂದಾಯಿಸಿಕೊಳ್ಳಬಹುದು ಎಂದು ಕರಾಮುವಿ ಕುಲಸಚಿವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande