ವಿಕಲಚೇತನರ ಜೊತೆ ಸಂಕ್ರಾಂತಿ ಆಚರಿಸಿದ ಕೇಂದ್ರ ಸಚಿವ ಕುಮಾರಸ್ವಾಮಿ
ರಾಮನಗರ, 15 ಜನವರಿ (ಹಿ.ಸ.) : ಆ್ಯಂಕರ್ : ಬೆಸ್ಕಾಂ ಸೇರಿದಂತೆ ಕೆಪಿಟಿಸಿಎಲ್‌ನ ವಿವಿಧ ವಿಭಾಗಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ 600ಕ್ಕೂ ಹೆಚ್ಚು ವಿಕಲಚೇತನ ಉದ್ಯೋಗಿಗಳು ಕುಟುಂಬಗಳ ಸಮೇತ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಅವರ ಬಿಡದಿ ತೋಟದ ಮನೆಗೆ ಆಗಮಿಸಿ ಸಂಕ್ರಾಂತಿ ಹಬ್ಬವನ್ನು ಸಂಭ್ರಮದ
Hdk


ರಾಮನಗರ, 15 ಜನವರಿ (ಹಿ.ಸ.) :

ಆ್ಯಂಕರ್ : ಬೆಸ್ಕಾಂ ಸೇರಿದಂತೆ ಕೆಪಿಟಿಸಿಎಲ್‌ನ ವಿವಿಧ ವಿಭಾಗಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ 600ಕ್ಕೂ ಹೆಚ್ಚು ವಿಕಲಚೇತನ ಉದ್ಯೋಗಿಗಳು ಕುಟುಂಬಗಳ ಸಮೇತ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಅವರ ಬಿಡದಿ ತೋಟದ ಮನೆಗೆ ಆಗಮಿಸಿ ಸಂಕ್ರಾಂತಿ ಹಬ್ಬವನ್ನು ಸಂಭ್ರಮದಿಂದ ಆಚರಿಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಅವರು, “ಇಷ್ಟು ದೊಡ್ಡ ಸಂಖ್ಯೆಯಲ್ಲಿ ವಿಕಲಚೇತನ ಉದ್ಯೋಗಿಗಳು ಹಾಗೂ ಅವರ ಕುಟುಂಬಗಳಿಗೆ ನೆರವಾಗುವ ಅವಕಾಶ ನನಗೆ ಲಭಿಸಿರುವುದು ನನ್ನ ಧನ್ಯತೆಯಾಗಿದೆ. ಭಗವಂತ ಕೊಟ್ಟ ಸಣ್ಣ ಅವಕಾಶದಲ್ಲೇ ಇವರ ಸೇವೆ ಮಾಡಲು ಸಾಧ್ಯವಾದುದು ಸಂತೋಷದ ವಿಷಯ. ನಾನು ಇದನ್ನು ಈಶ ಸೇವೆಯೆಂದೇ ನಂಬಿದ್ದೇನೆ,” ಎಂದು ಭಾವಪೂರ್ಣವಾಗಿ ಹೇಳಿದರು.

ಸತತ ಏಳನೇ ವರ್ಷವೂ ವಿಕಲಚೇತನ ಉದ್ಯೋಗಿಗಳು ತಮ್ಮೊಂದಿಗೆ ಸುಗ್ಗಿ ಹಬ್ಬ ಆಚರಿಸುತ್ತಿರುವುದನ್ನು ಸ್ಮರಿಸಿದ ಅವರು, “ಸುಖ, ಸಂತೋಷ, ನೆಮ್ಮದಿ ಮತ್ತು ಸಮೃದ್ಧಿಯ ಪ್ರತೀಕವಾದ ಸಂಕ್ರಾಂತಿಯ ಎಳ್ಳುಬೆಲ್ಲದಂತೆ, ಪಥ ಬದಲಿಸುತ್ತಿರುವ ಸೂರ್ಯದೇವನ ಕೃಪೆಯಿಂದ ಇವರೆಲ್ಲರೂ ಸಮಾಜದಲ್ಲಿ ಇನ್ನಷ್ಟು ಉನ್ನತ ಸಾಧನೆಗಳನ್ನು ಮಾಡಲಿ,” ಎಂದು ಹಾರೈಸಿದರು.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande