ಠಾಣೆಗಳಿಗೆ ಮೈಸೂರು ಅಧೀಕ್ಷಕರ ಭೇಟಿ
ಮೈಸೂರು, 15 ಜನವರಿ (ಹಿ.ಸ.) : ಆ್ಯಂಕರ್ : ಮೈಸೂರು ಜಿಲ್ಲಾ ಪೊಲೀಸ್ ಅಧೀಕ್ಷಕರಾದ ಮಲ್ಲಿಕಾರ್ಜುನ ಬಾಲದಂಡಿ ಅವರು ಇಂದು ಹುಲ್ಲಹಳ್ಳಿ ಹಾಗೂ ಕೆ.ಆರ್. ನಗರ ಪೊಲೀಸ್ ಠಾಣೆಗಳಿಗೆ ಭೇಟಿ ನೀಡಿ ಪರಿವೀಕ್ಷಣೆ ನಡೆಸಿದರು. ಈ ವೇಳೆ ಅವರು ಠಾಣೆಗಳಲ್ಲಿನ ಕಡತಗಳ ವಿಲೇವಾರಿ ಸ್ಥಿತಿ, ಕಚೇರಿ ಹಾಗೂ ಠಾಣೆಯ ಸ್ವಚ್ಛ
Visit


ಮೈಸೂರು, 15 ಜನವರಿ (ಹಿ.ಸ.) :

ಆ್ಯಂಕರ್ : ಮೈಸೂರು ಜಿಲ್ಲಾ ಪೊಲೀಸ್ ಅಧೀಕ್ಷಕರಾದ ಮಲ್ಲಿಕಾರ್ಜುನ ಬಾಲದಂಡಿ ಅವರು ಇಂದು ಹುಲ್ಲಹಳ್ಳಿ ಹಾಗೂ ಕೆ.ಆರ್. ನಗರ ಪೊಲೀಸ್ ಠಾಣೆಗಳಿಗೆ ಭೇಟಿ ನೀಡಿ ಪರಿವೀಕ್ಷಣೆ ನಡೆಸಿದರು.

ಈ ವೇಳೆ ಅವರು ಠಾಣೆಗಳಲ್ಲಿನ ಕಡತಗಳ ವಿಲೇವಾರಿ ಸ್ಥಿತಿ, ಕಚೇರಿ ಹಾಗೂ ಠಾಣೆಯ ಸ್ವಚ್ಛತೆ, ಅಪರಾಧಗಳ ದಾಖಲಾತಿ, ತನಿಖೆಯ ಪ್ರಗತಿ ಮತ್ತು ಕಾನೂನು ಸುವ್ಯವಸ್ಥೆಯ ಒಟ್ಟಾರೆ ಸ್ಥಿತಿಯನ್ನು ಸಮಗ್ರವಾಗಿ ಪರಿಶೀಲಿಸಿದರು.

ಸಾರ್ವಜನಿಕರಿಗೆ ಉತ್ತಮ ಸೇವೆ ನೀಡುವ ನಿಟ್ಟಿನಲ್ಲಿ ದಾಖಲೆ ನಿರ್ವಹಣೆ ಹಾಗೂ ಕಾರ್ಯನಿರ್ವಹಣೆಯಲ್ಲಿ ಪಾರದರ್ಶಕತೆ ಕಾಪಾಡಬೇಕೆಂದು ಅವರು ಸೂಚಿಸಿದರು.

ಪರಿವೀಕ್ಷಣೆ ಸಂದರ್ಭದಲ್ಲಿ ಪೊಲೀಸ್ ಅಧಿಕಾರಿಗಳು ಹಾಗೂ ಸಿಬ್ಬಂದಿಗಳ ಕುಂದುಕೊರತೆಗಳನ್ನು ಆಲಿಸಿದ ಜಿಲ್ಲಾ ಪೊಲೀಸ್ ಅಧೀಕ್ಷಕರು, ಸಮಸ್ಯೆಗಳಿಗೆ ಸ್ಪಂದಿಸುವ ಭರವಸೆ ನೀಡಿದ ಜೊತೆಗೆ ಕರ್ತವ್ಯ ನಿರ್ವಹಣೆಯಲ್ಲಿ ಶಿಸ್ತು, ಸಮಯಪಾಲನೆ ಮತ್ತು ವೃತ್ತಿಪರತೆ ಕಡ್ಡಾಯವಾಗಿರಬೇಕೆಂದು ಸೂಕ್ತ ನಿರ್ದೇಶನಗಳನ್ನು ನೀಡಿದರು.

ಅಪರಾಧ ನಿಯಂತ್ರಣ ಹಾಗೂ ಕಾನೂನು ಸುವ್ಯವಸ್ಥೆ ಕಾಪಾಡುವಲ್ಲಿ ಪ್ರಾಮಾಣಿಕ ಮತ್ತು ಸಮರ್ಪಿತ ಕಾರ್ಯಾಚರಣೆ ನಡೆಸುವಂತೆ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು. ಈ ಸಂದರ್ಭದಲ್ಲಿ ಠಾಣಾ ಅಧಿಕಾರಿಗಳು ಹಾಗೂ ಸಿಬ್ಬಂದಿ ಉಪಸ್ಥಿತರಿದ್ದರು.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande