
ಚಿತ್ರದುರ್ಗ, 15 ಜನವರಿ (ಹಿ.ಸ.) :
ಆ್ಯಂಕರ್ : ಚಿತ್ರದುರ್ಗ ಜಿಲ್ಲೆಯ ಹೊಳಲ್ಕೆರೆ ಪಟ್ಟಣದಲ್ಲಿ ನೂತನವಾಗಿ ಸ್ಥಾಪಿಸಲಾದ ಪ್ರಾಥಮಿಕ ಕೃಷಿ ಮತ್ತು ಗ್ರಾಮೀಣಾಭಿವೃದ್ಧಿ ಬ್ಯಾಂಕ್ ನಿಯಮಿತ ಕಚೇರಿಯನ್ನು ಸಚಿವ ಎಂ.ಬಿ. ಪಾಟೀಲ ಅವರು ಇಂದು ಉದ್ಘಾಟಿಸಿದರು.
ಈ ಸಂದರ್ಭ ಮಾತನಾಡಿದ ಸಚಿವ ಎಂ.ಬಿ. ಪಾಟೀಲ ಅವರು, ಗ್ರಾಮೀಣ ಆರ್ಥಿಕತೆಯ ಬೆನ್ನೆಲುಬಾಗಿರುವ ಕೃಷಿ ಮತ್ತು ಗ್ರಾಮೀಣಾಭಿವೃದ್ಧಿ ಬ್ಯಾಂಕುಗಳು ರೈತರು ಹಾಗೂ ಗ್ರಾಮೀಣ ಜನತೆಗೆ ಆರ್ಥಿಕ ಬಲ ನೀಡುವಲ್ಲಿ ಮಹತ್ವದ ಪಾತ್ರ ವಹಿಸುತ್ತಿವೆ. ಈ ನೂತನ ಬ್ಯಾಂಕ್ ಕಚೇರಿ ಹೊಳಲ್ಕೆರೆ ತಾಲ್ಲೂಕಿನ ರೈತರು ಮತ್ತು ಸಾರ್ವಜನಿಕರಿಗೆ ಹೆಚ್ಚಿನ ಅನುಕೂಲ ಕಲ್ಪಿಸಲಿದೆ ಎಂದು ತಿಳಿಸಿದರು.
ಬ್ಯಾಂಕಿನ ಅಧ್ಯಕ್ಷರು, ಉಪಾಧ್ಯಕ್ಷರು ಹಾಗೂ ನಿರ್ದೇಶಕ ಮಂಡಳಿ ಸದಸ್ಯರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದು, ನೂತನ ಕಚೇರಿ ಯಶಸ್ವಿಯಾಗಿ ಕಾರ್ಯನಿರ್ವಹಿಸಲಿ ಎಂದು ಶುಭ ಹಾರೈಸಿದರು.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa