
ಬೆಂಗಳೂರು, 15 ಜನವರಿ (ಹಿ.ಸ.) :
ಆ್ಯಂಕರ್ : ಬೆಂಗಳೂರಿನ ಐತಿಹಾಸಿಕ ಗವಿ ಗಂಗಾಧರೇಶ್ವರ ದೇವಾಲಯದಲ್ಲಿ ಮಕರ ಸಂಕ್ರಾಂತಿ ಹಬ್ಬದ ಪ್ರಯುಕ್ತ ಇಂದು ವಿಶೇಷ ಪೂಜೆಗಳು ನಡೆಯುತ್ತಿವೆ. ಸೂರ್ಯನು ದಕ್ಷಿಣಾಯಣದಿಂದ ಉತ್ತರಾಯಣಕ್ಕೆ ಪಥ ಬದಲಿಸುವ ಈ ದಿನವನ್ನು ಹಿಂದು ಧರ್ಮದಲ್ಲಿ ಅತ್ಯಂತ ಪವಿತ್ರವೆಂದು ಪರಿಗಣಿಸಲಾಗುತ್ತದೆ.
ಈ ಅಪರೂಪದ ಸಂದರ್ಭದಲ್ಲಿ, ಸಂಜೆ ನಿಖರವಾಗಿ 5 ಗಂಟೆ 2 ನಿಮಿಷಕ್ಕೆ ಸೂರ್ಯದೇವನ ಕಿರಣಗಳು ದೇಗುಲದ ಒಳಗಿರುವ ಶಿವಲಿಂಗವನ್ನು ಸ್ಪರ್ಶಿಸಲಿದೆ ಎಂದು ದೇವಾಲಯದ ಅರ್ಚಕರು ತಿಳಿಸಿದ್ದಾರೆ. ವರ್ಷಕ್ಕೆ ಒಂದೇ ಬಾರಿ ಸಂಭವಿಸುವ ಈ ವಿಶಿಷ್ಟ ಖಗೋಳ–ಧಾರ್ಮಿಕ ಘಟನೆಗೆ ಸಾಕ್ಷಿಯಾಗಲು ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ದೇವಾಲಯದ ಆವರಣದಲ್ಲಿ ಸೇರಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa