ರಾಜ್ಯ ರಾಜಕೀಯಕ್ಕೆ ಮರಳುವುದು ಖಚಿತ : ಎಚ್.ಡಿ.ಕುಮಾರಸ್ವಾಮಿ
ಬೆಂಗಳೂರು, 15 ಜನವರಿ (ಹಿ.ಸ.) : ಆ್ಯಂಕರ್ : ರಾಜ್ಯ ರಾಜಕೀಯದಿಂದ ನಾನು ದೂರ ಸರಿಯುವುದಿಲ್ಲ ಎಂದು ಕೇಂದ್ರ ಸಚಿವ ಹಾಗೂ ಜೆಡಿಎಸ್‌ ನಾಯಕ ಎಚ್.ಡಿ.ಕುಮಾರಸ್ವಾಮಿ ಹೇಳಿದ್ದಾರೆ. ಬೆಂಗಳೂರಿನಲ್ಲಿ ಮಾಧ್ಯಮಗಳಿಗೆ ಮಾತನಾಡಿದ ಅವರು, ರಾಜ್ಯ ರಾಜಕೀಯಕ್ಕೆ ನಾನು ಮರಳುವುದು ಖಚಿತವಾಗಿದ್ದು, ನಾನು ಯಾವ ಸ್ಥಾನ
Hdk


ಬೆಂಗಳೂರು, 15 ಜನವರಿ (ಹಿ.ಸ.) :

ಆ್ಯಂಕರ್ : ರಾಜ್ಯ ರಾಜಕೀಯದಿಂದ ನಾನು ದೂರ ಸರಿಯುವುದಿಲ್ಲ ಎಂದು ಕೇಂದ್ರ ಸಚಿವ ಹಾಗೂ ಜೆಡಿಎಸ್‌ ನಾಯಕ ಎಚ್.ಡಿ.ಕುಮಾರಸ್ವಾಮಿ ಹೇಳಿದ್ದಾರೆ.

ಬೆಂಗಳೂರಿನಲ್ಲಿ ಮಾಧ್ಯಮಗಳಿಗೆ ಮಾತನಾಡಿದ ಅವರು, ರಾಜ್ಯ ರಾಜಕೀಯಕ್ಕೆ ನಾನು ಮರಳುವುದು ಖಚಿತವಾಗಿದ್ದು, ನಾನು ಯಾವ ಸ್ಥಾನದಲ್ಲಿ ಇರಬೇಕು ಎಂಬುದನ್ನು ನಾಡಿನ ಜನತೆ ತೀರ್ಮಾನಿಸುತ್ತಾರೆ ಎಂದು ಹೇಳಿದರು.

ನಾನು ರಾಜ್ಯ ರಾಜಕೀಯದಿಂದ ದೂರ ಸರಿಯುತ್ತೇನೆ ಎಂದು ಯಾರಾದರೂ ಭಾವಿಸಿದ್ದರೆ, ಅದು ತಪ್ಪು. ನಾನು ದೂರ ಸರಿಯಲ್ಲ. ರಾಜ್ಯ ರಾಜಕೀಯಕ್ಕೆ ಬರಲೇಬೇಕಾಗುತ್ತದೆ ಎಂದು ಕುಮಾರಸ್ವಾಮಿ ಸ್ಪಷ್ಟಪಡಿಸಿದ್ದಾರೆ.

ಬಿಜೆಪಿ ಜೊತೆಗಿನ ಮೈತ್ರಿ ಕುರಿತು ಮಾತನಾಡಿದ ಅವರು, “ನಾವು ಮೈತ್ರಿಯ ಒಪ್ಪಂದ ಮಾಡಿಕೊಂಡಿದ್ದೇವೆ. ಈ ಮೈತ್ರಿಯಲ್ಲಿ ಯಾವುದೇ ಗೊಂದಲಕ್ಕೆ ಅವಕಾಶ ಕೊಡಬಾರದು. ನಮ್ಮ ಉದ್ದೇಶ ರಾಜ್ಯದಲ್ಲಿ ಒಳ್ಳೆಯ, ಸ್ಥಿರ ಸರ್ಕಾರವನ್ನು ತರುವುದು” ಎಂದರು. ರಾಜ್ಯದಲ್ಲಿ ಆಡಳಿತ ಹೇಗೆ ನಡೆಯುತ್ತಿದೆ ಎಂಬುದನ್ನು ಗಮನಿಸುತ್ತಿದ್ದು, ಜನತೆ ನೆಮ್ಮದಿಯಿಂದ ಬದುಕುವಂತೆ ಉತ್ತಮ ಆಡಳಿತ ವ್ಯವಸ್ಥೆ ರೂಪಿಸಬೇಕಾಗಿದೆ ಎಂಬುದು ತಮ್ಮ ಗುರಿ ಎಂದು ಹೇಳಿದರು.

ಕೇಂದ್ರ ಸಚಿವ ಸ್ಥಾನ ಕುರಿತು ಪ್ರತಿಕ್ರಿಯಿಸಿದ ಅವರು, “ಪ್ರಧಾನ ಮಂತ್ರಿಗಳು ನನಗೆ ಹುದ್ದೆ ನೀಡಿದ್ದಾರೆ. ಆ ಎರಡು ಇಲಾಖೆಗಳಲ್ಲೂ ಪ್ರಾಮಾಣಿಕವಾಗಿ ಉತ್ತಮ ಕೆಲಸ ಮಾಡಲು ಈಗಾಗಲೇ ಭದ್ರ ಅಡಿಪಾಯ ಹಾಕಿದ್ದೇನೆ. ಆದರೆ ರಾಜ್ಯ ರಾಜಕೀಯಕ್ಕೆ ಯಾವ ಸಮಯದಲ್ಲಿ ಬರಬೇಕು ಎಂಬುದನ್ನು ನಾನು ತೀರ್ಮಾನ ಮಾಡುತ್ತೇನೆ” ಎಂದು ತಿಳಿಸಿದರು.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande