
ಬೆಂಗಳೂರು, 16 ಜನವರಿ (ಹಿ.ಸ.) :
ಆ್ಯಂಕರ್ : ಗಾಂಧಿನಗರ ವಿಧಾನ ಸಭಾ ಕ್ಷೇತ್ರದ ಪ್ರತಿ ವಾರ್ಡ್‌ನಲ್ಲಿಯೂ ಮೂಲಭೂತ ಸೌಕರ್ಯಗಳನ್ನು ಬಲಪಡಿಸುವ ನಿಟ್ಟಿನಲ್ಲಿ ಅಭಿವೃದ್ಧಿ ಕೆಲಸಗಳಿಗೆ ಸಚಿವ ದಿನೇಶ್ ಗುಂಡೂರಾವ್ ಚಾಲನೆ ನೀಡಿದರು.
ಕಾಟನ್‌ಪೇಟೆ ವಾರ್ಡ್ (120) ವ್ಯಾಪ್ತಿಯ ಕೆ.ಪಿ. ಅಗ್ರಹಾರದ ನೇತಾಜಿನಗರ 8 ಮತ್ತು 9ನೇ ಕ್ರಾಸ್‌ನಲ್ಲಿ ನೂತನ 300 ಎಂ.ಎಂ ಆರ್.ಸಿ.ಸಿ ಸಿಮೆಂಟ್ ಕಾಂಕ್ರೀಟ್ ಪೈಪ್‌ಗಳನ್ನು ಅಳವಡಿಸುವ ಕಾಮಗಾರಿಗೆ ಚಾಲನೆ ನೀಡಿ ಮಾತನಾಡಿದ ಅವರು, ಈ ಭಾಗದ ನಿವಾಸಿಗಳ ದೀರ್ಘಕಾಲದ ಬೇಡಿಕೆಯಾಗಿದ್ದ ಒಳಚರಂಡಿ ನೀರಿನ ವ್ಯವಸ್ಥೆಯನ್ನು ಸುಗಮಗೊಳಿಸಲು ಈ ಯೋಜನೆಯು ಸಹಕಾರಿಯಾಗಲಿದೆ.
ಈ ವೇಳೆ, ಇನ್ನುಳಿದ ಕಾಮಗಾರಿಯನ್ನು ಗುಣಮಟ್ಟ ಕಾಯ್ದುಕೊಂಡು, ನಿಗದಿತ ಸಮಯದೊಳಗೆ ಪೂರ್ಣಗೊಳಿಸಿ ಸಾರ್ವಜನಿಕರ ಬಳಕೆಗೆ ಮುಕ್ತಗೊಳಿಸುವಂತೆ ಅಧಿಕಾರಿಗಳಿಗೆ ಸೂಚಿಸಿದರು.
ಈ ಸಂದರ್ಭದಲ್ಲಿ ಬ್ಲಾಕ್ ಅಧ್ಯಕ್ಷರಾದ ಪಿ.ಎಸ್. ಶ್ರೀನಿವಾಸಮೂರ್ತಿ ಸೇರಿದಂತೆ ಸ್ಥಳೀಯ ಮುಖಂಡರು ಹಾಗೂ ವಾರ್ಡ್‌ನ ನಿವಾಸಿಗಳು ಉಪಸ್ಥಿತರಿದ್ದರು.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa