
ಮಂಡ್ಯ, 16 ಜನವರಿ (ಹಿ.ಸ.) :
ಆ್ಯಂಕರ್ : ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ವತಿಯಿಂದ ಮಂಡ್ಯದಲ್ಲಿ ಏರ್ಪಡಿಸಲಾಗಿದ್ದ ಎಸ್‌ಎಸ್‌ಎಲ್‌ಸಿ ವಾರ್ಷಿಕ ಪರೀಕ್ಷೆಗೆ ಹಾಜರಾಗುತ್ತಿರುವ ವಿದ್ಯಾರ್ಥಿಗಳಿಗೆ ಕಲಿಕಾ ಮಿತ್ರ ಪ್ರಶೋತ್ತರಕೋಟಿ ಹಾಗೂ ಉಚಿತ ನೋಟು ಪುಸ್ತಕಗಳ ವಿತರಣಾ ಕಾರ್ಯಕ್ರಮದಲ್ಲಿ ಸಚಿವ ಚಲುವರಾಯಸ್ವಾಮಿ ಭಾಗವಹಿಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ಅವರು, ವಿದ್ಯಾರ್ಥಿಗಳು ಆತ್ಮವಿಶ್ವಾಸದಿಂದ ಪರೀಕ್ಷೆ ಎದುರಿಸಿ ಉತ್ತಮ ಸಾಧನೆ ಮಾಡುವ ಮೂಲಕ ಉಜ್ವಲ ಭವಿಷ್ಯ ನಿರ್ಮಿಸಿಕೊಳ್ಳಲಿ ಎಂದು ಶುಭ ಹಾರೈಸಿದರು. ಶಿಕ್ಷಣವೇ ಬದುಕಿನ ದಿಕ್ಕು ನಿರ್ಧರಿಸುವ ಶಕ್ತಿಯಾಗಿದ್ದು, ಸರ್ಕಾರ ವಿದ್ಯಾರ್ಥಿಗಳ ಶೈಕ್ಷಣಿಕ ಪ್ರಗತಿಗೆ ಅಗತ್ಯವಿರುವ ಎಲ್ಲ ಸಹಕಾರವನ್ನು ನೀಡುತ್ತಿದೆ ಎಂದು ಅವರು ಹೇಳಿದರು.
ಕಾರ್ಯಕ್ರಮದಲ್ಲಿ ಶಾಸಕರಾದ ಪಿ. ರವಿಕುಮಾರ್, ಪಿ.ಎಂ. ನರೇಂದ್ರಸ್ವಾಮಿ, ಜಿಲ್ಲಾಧಿಕಾರಿ ಡಾ. ಕುಮಾರ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಶ್ರೀಮತಿ ಶೋಭಾರಾಣಿ ಸೇರಿದಂತೆ ಶಿಕ್ಷಣ ಇಲಾಖೆಯ ಅಧಿಕಾರಿಗಳು, ಶಿಕ್ಷಕರು ಹಾಗೂ ಸಾರ್ವಜನಿಕರು ಉಪಸ್ಥಿತರಿದ್ದರು.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa