ಹಾಸನ ಬೈಪಾಸ್ ರಸ್ತೆ ಕಾಮಗಾರಿ ಪರಿಶೀಲಿಸಿದ ಸಚಿವ ಕೃಷ್ಣ ಭೈರೆಗೌಡ
ಹಾಸನ, 16 ಜನವರಿ (ಹಿ.ಸ.) : ಆ್ಯಂಕರ್ : ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳು ಹಾಸನ ಬೈಪಾಸ್ ರಸ್ತೆ ಹಾಗೂ ಸಕಲೇಶಪುರ ರಸ್ತೆಯ ಸಿಸಿ ರಸ್ತೆ ಕಾಮಗಾರಿಯನ್ನು ನಿಧಾನ ಗತಿಯಲ್ಲಿ ನಡೆಸುತ್ತಿರುವುದರಿಂದ ಸಾರ್ವಜನಿಕರಲ್ಲಿ ಅಸಮಾಧಾನ ವ್ಯಕ್ತವಾಗಿದೆ. ಈ ಹಿನ್ನೆಲೆಯಲ್ಲಿ ಜಿಲ್ಲಾ ಉಸ್ತುವಾರಿ ಸಚಿ
Visit


ಹಾಸನ, 16 ಜನವರಿ (ಹಿ.ಸ.) :

ಆ್ಯಂಕರ್ : ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳು ಹಾಸನ ಬೈಪಾಸ್ ರಸ್ತೆ ಹಾಗೂ ಸಕಲೇಶಪುರ ರಸ್ತೆಯ ಸಿಸಿ ರಸ್ತೆ ಕಾಮಗಾರಿಯನ್ನು ನಿಧಾನ ಗತಿಯಲ್ಲಿ ನಡೆಸುತ್ತಿರುವುದರಿಂದ ಸಾರ್ವಜನಿಕರಲ್ಲಿ ಅಸಮಾಧಾನ ವ್ಯಕ್ತವಾಗಿದೆ.

ಈ ಹಿನ್ನೆಲೆಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಕೃಷ್ಣ ಭೈರೆಗೌಡ ಅವರು ಇಂದು ಸ್ಥಳಕ್ಕೆ ಭೇಟಿ ನೀಡಿ ಕಾಮಗಾರಿಯ ಪ್ರಗತಿಯನ್ನು ಪರಿಶೀಲಿಸಿದರು.

ಕಾಮಗಾರಿಯಲ್ಲಿ ಆಗುತ್ತಿರುವ ವಿಳಂಬದ ಕುರಿತು ಅಧಿಕಾರಿಗಳಿಂದ ಮಾಹಿತಿ ಪಡೆದ ಸಚಿವರು, ನಿಗದಿತ ಅವಧಿಯೊಳಗೆ ಗುಣಮಟ್ಟದೊಂದಿಗೆ ಕಾಮಗಾರಿ ಪೂರ್ಣಗೊಳಿಸುವಂತೆ ಕಟ್ಟುನಿಟ್ಟಿನ ಸೂಚನೆಗಳನ್ನು ನೀಡಿದರು.

ಕಾಮಗಾರಿ ವಿಳಂಬದಿಂದ ಜನಸಾಮಾನ್ಯರಿಗೆ ಉಂಟಾಗುತ್ತಿರುವ ತೊಂದರೆಯನ್ನು ಗಂಭೀರವಾಗಿ ಪರಿಗಣಿಸಬೇಕು ಎಂದು ಸಚಿವರು ಅಧಿಕಾರಿಗಳಿಗೆ ಎಚ್ಚರಿಕೆ ನೀಡಿದರು.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande