
ವಿಜಯಪುರ, 16 ಜನವರಿ (ಹಿ.ಸ.) :
ಆ್ಯಂಕರ್ : ಸರ್ಕಾರಿ ಅಧಿಕಾರಿ ಮೇಲೆ ಕಾಂಗ್ರೆಸ್ ಮುಖಂಡನ ಅಶ್ಲೀಲ ಪದ ಬಳಕೆ ಖಂಡಿಸಿ ವಿಜಯಪುರ ನಗರದ ಜಿಲ್ಲಾಧಿಕಾರಿ ಕಚೇರಿಯ ಎದುರು ರಾಜ್ಯ ಪೌರ ನೌಕರರ ಸಂಘದವರು ಪ್ರತಿಭಟನೆ ನಡೆಸಿದರು.
ಶಿಡ್ಲಘಟ್ಲ ನಗರಸಭೆ ಪೌರಾಯುಕ್ತ ಅಮೃತಾ.ಜಿ ಮೇಲೆ ಕಾಂಗ್ರೆಸ್ ಮುಖಂಡ ರಾಜೀವಗೌಡ ಅಶ್ಲೀಲ ಪದ ಬಳಿಸಿ ಅಧಿಕಾರಿಗೆ ನೋವುಂಟು ಮಾಡಿದ್ದಾರೆ. ಅಲ್ಲದೇ,ಕೇವಲ ಬ್ಯಾನರ್ ವಿಚಾರಕ್ಕೆ ಧಮ್ಕಿ ಹಾಕಲಾಗಿದೆ ಎಂದು ಆರೋಪಿಸಿದರು.
ಅದಕ್ಕಾಗಿ ಕಾಂಗ್ರೆಸ್ ಮುಖಂಡ ರಾಜೀವಗೌಡನ ಮೇಲೆ ಸೂಕ್ತ ಕಾನೂನು ಕ್ರಮಕೈಗೊಳ್ಳಬೇಕು ಎಂದು ಒತ್ತಾಯಿಸಿ ಜಿಲ್ಲಾಧಿಕಾರಿ ಆನಂದ ಅವರಿಗೆ ಪ್ರತಿಭಟನಾಕಾರರು ಮನವಿ ಸಲ್ಲಿಸಿದರು.
ಹಿಂದೂಸ್ತಾನ್ ಸಮಾಚಾರ್ / jyothi deshpande