ಸ್ಟಾರ್ಟ್ಅಪ್ ಇಂಡಿಯಾ ಭಾರತದ ನವಯುಗದ ನಾವೀನ್ಯತೆಗೆ ಸಾಕ್ಷಿ : ಎಚ್.ಡಿ.ಕುಮಾರಸ್ವಾಮಿ
ನವದೆಹಲಿ, 16 ಜನವರಿ (ಹಿ.ಸ.) : ಆ್ಯಂಕರ್ : ಕಳೆದ ಹತ್ತು ವರ್ಷಗಳಲ್ಲಿ ‘ಸ್ಟಾರ್ಟ್ಅಪ್ ಇಂಡಿಯಾ’ ಯೋಜನೆಯು ಭಾರತದಲ್ಲಿ ನವಯುಗದ ನಾವೀನ್ಯತೆ, ಉದ್ಯಮಶೀಲತೆ ಹಾಗೂ ಆರ್ಥಿಕ ಪರಿವರ್ತನೆಗೆ ದೃಢವಾದ ನಾಂದಿ ಹಾಡಿದೆ. ವಿಜ್ಞಾನ, ತಂತ್ರಜ್ಞಾನ ಮತ್ತು ಆವಿಷ್ಕಾರಗಳಿಗೆ ಈ ಯೋಜನೆಯು ಅಗ್ರ ಆದ್ಯತೆ ನೀಡುತ್ತಿದೆ ಎ
Hdk


ನವದೆಹಲಿ, 16 ಜನವರಿ (ಹಿ.ಸ.) :

ಆ್ಯಂಕರ್ : ಕಳೆದ ಹತ್ತು ವರ್ಷಗಳಲ್ಲಿ ‘ಸ್ಟಾರ್ಟ್ಅಪ್ ಇಂಡಿಯಾ’ ಯೋಜನೆಯು ಭಾರತದಲ್ಲಿ ನವಯುಗದ ನಾವೀನ್ಯತೆ, ಉದ್ಯಮಶೀಲತೆ ಹಾಗೂ ಆರ್ಥಿಕ ಪರಿವರ್ತನೆಗೆ ದೃಢವಾದ ನಾಂದಿ ಹಾಡಿದೆ. ವಿಜ್ಞಾನ, ತಂತ್ರಜ್ಞಾನ ಮತ್ತು ಆವಿಷ್ಕಾರಗಳಿಗೆ ಈ ಯೋಜನೆಯು ಅಗ್ರ ಆದ್ಯತೆ ನೀಡುತ್ತಿದೆ ಎಂದು ಕೇಂದ್ರ ಉಕ್ಕು ಮತ್ತು ಬೃಹತ್ ಕೈಗಾರಿಕೆಗಳ ಸಚಿವ ಎಚ್.ಡಿ.ಕುಮಾರಸ್ವಾಮಿ ಹೇಳಿದ್ದಾರೆ.

ಈ ಕುರಿತು ಸಾಮಾಜಿಕ ಮಾಧ್ಯಮ ಎಕ್ಸಖಾತೆಯಲ್ಲಿ ಮಾಹಿತಿ ಹಂಚಿಕೊಂಡಿರುವ ಅವರು, ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರ ದೂರದೃಷ್ಟಿಯ ನಾಯಕತ್ವದಲ್ಲಿ ಭಾರತವು 2 ಲಕ್ಷಕ್ಕೂ ಅಧಿಕ DPIIT ಮಾನ್ಯತೆ ಪಡೆದ ಸ್ಟಾರ್ಟ್ಅಪ್‌ಗಳ ಉದಯಕ್ಕೆ ಸಾಕ್ಷಿಯಾಗಿದೆ. ಈ ಪೈಕಿ ಸುಮಾರು ಅರ್ಧದಷ್ಟು ಸ್ಟಾರ್ಟ್ಅಪ್‌ಗಳು 2ನೇ ಹಾಗೂ 3ನೇ ಹಂತದ ನಗರಗಳಿಂದ ಹೊರಹೊಮ್ಮಿರುವುದು, ನಾವೀನ್ಯತೆ ಮಹಾನಗರಗಳಿಗೆ ಮಾತ್ರ ಸೀಮಿತ ಎಂಬ ಪುರಾತನ ಸಂಕಲ್ಪನೆಯನ್ನು ಸಂಪೂರ್ಣವಾಗಿ ತೊಡೆದುಹಾಕಿದೆ ಎಂದು ಅವರು ಹೇಳಿದ್ದಾರೆ.

ಇಲ್ಲಿಯವರೆಗೆ ₹15 ಲಕ್ಷ ಕೋಟಿ ರೂಪಾಯಿಗೂ ಹೆಚ್ಚು ಖಾಸಗಿ ಹೂಡಿಕೆಯನ್ನು ಆಕರ್ಷಿಸಲಾಗಿದ್ದು, 21 ಲಕ್ಷಕ್ಕೂ ಅಧಿಕ ನೇರ ಉದ್ಯೋಗಗಳು ಸೃಷ್ಟಿಯಾಗಿವೆ. ಜೊತೆಗೆ 63 ಪ್ರಮುಖ ನಿಯಂತ್ರಣಾತ್ಮಕ ಸುಧಾರಣೆಗಳನ್ನು ಜಾರಿಗೆ ತರಲಾಗಿದ್ದು, ಜಾಗತಿಕ ಮಟ್ಟದಲ್ಲಿ ಭಾರತವು 3ನೇ ಅತಿದೊಡ್ಡ ಸ್ಟಾರ್ಟ್ಅಪ್ ಪೂರಕ ಪರಿಸರ ವ್ಯವಸ್ಥೆಯಾಗಿ ಹೊರಹೊಮ್ಮಿದೆ ಎಂದು ಸಚಿವರು ವಿವರಿಸಿದ್ದಾರೆ.

ಇದು ಕೇವಲ ಒಂದು ನೀತಿಯ ಯಶಸ್ಸಲ್ಲ ಇದು ಭಾರತವನ್ನು ಸಶಕ್ತ ಮತ್ತು ಆತ್ಮನಿರ್ಭರ ರಾಷ್ಟ್ರವಾಗಿ ರೂಪಿಸುವ ಪರಿವರ್ತನಾತ್ಮಕ ಹೆಜ್ಜೆಯಾಗಿದೆ. ಆತ್ಮವಿಶ್ವಾಸದಿಂದ ತುಂಬಿರುವ ಹೊಸ ಪೀಳಿಗೆಯು ನಾವೀನ್ಯತೆಯ ಮೂಲಕ ಆತ್ಮನಿರ್ಭರ ಭಾರತ ನಿರ್ಮಾಣಕ್ಕೆ ಮಹತ್ವದ ಕೊಡುಗೆ ನೀಡುತ್ತಿರುವುದು ಅತ್ಯಂತ ಸ್ವಾಗತಾರ್ಹವಾಗಿದೆ ಎಂದು ಅವರು ಅಭಿಪ್ರಾಯಪಟ್ಟರು.

ಕೇಂದ್ರದ ಉಕ್ಕು ಮತ್ತು ಬೃಹತ್ ಕೈಗಾರಿಕೆಗಳ ಸಚಿವನಾಗಿ, ನಮ್ಮ ಪ್ರಮುಖ ಕೈಗಾರಿಕಾ ವಲಯಗಳನ್ನು ಪುನರುಜ್ಜೀವನಗೊಳಿಸುತ್ತಿರುವ ಈ ಉದ್ಯಮಶೀಲತಾ ಮನೋಭಾವವನ್ನು ಹೃದಯಪೂರ್ವಕವಾಗಿ ಪ್ರಶಂಸಿಸುತ್ತೇನೆ ಎಂದು ಕುಮಾರಸ್ವಾಮಿ ತಿಳಿಸಿದ್ದಾರೆ.

ದೇಶದ ಎಲ್ಲಾ ನವೋದ್ಯಮಿಗಳಿಗೆ ಅಭಿನಂದನೆಗಳನ್ನು ಸಲ್ಲಿಸಿದ ಅವರು, ಈ ಪರಿವರ್ತನಾತ್ಮಕ ವ್ಯವಸ್ಥೆಗೆ ಪ್ರೇರಕ ಶಕ್ತಿಯಾಗಿರುವ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರಿಗೆ ಕೃತಜ್ಞತೆಗಳನ್ನು ಅರ್ಪಿಸಿದರು. ಮುಂದಿನ ದಶಕವು ಭಾರತೀಯ ನಾವೀನ್ಯತೆಯ ಯುಗವಾಗಲಿದೆ ಎಂಬುದರಲ್ಲಿ ಯಾವುದೇ ಸಂದೇಹವಿಲ್ಲ ಎಂದು ಅವರು ಹೇಳಿದ್ದಾರೆ.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande