
ಬೆಂಗಳೂರು, 16 ಜನವರಿ (ಹಿ.ಸ.) :
ಆ್ಯಂಕರ್ : ವಿಬಿ-ಜಿ ರಾಮ್ ಜಿ ಯೋಜನೆಯ ಕುರಿತು ಸುಳ್ಳು ಅಪಪ್ರಚಾರ ಮಾಡಿ ಬಡವರ ಬದುಕಿನೊಂದಿಗೆ ಆಟವಾಡುವುದನ್ನು ಕಾಂಗ್ರೆಸ್ ಮೊದಲು ನಿಲ್ಲಿಸಬೇಕು ಎಂದು ರೈಲ್ವೆ ಖಾತೆ ರಾಜ್ಯ ಸಚಿವರಾದ ವಿ. ಸೋಮಣ್ಣ ಆಗ್ರಹಿಸಿದ್ದಾರೆ.
ನರೇಗಾ ಯೋಜನೆಯಲ್ಲಿ ಇದ್ದ ಲೋಪದೋಷಗಳನ್ನು ಸರಿಪಡಿಸಿ, ಕೂಲಿಯನ್ನು ₹370ಕ್ಕೆ ಏರಿಸುವುದು, ಹಾಗೂ 125 ದಿನಗಳ ಉದ್ಯೋಗವನ್ನು ಖಾತರಿಪಡಿಸಿರುವುದು ಕೇಂದ್ರ ಸರ್ಕಾರದ ಜನಪರ ನಿರ್ಧಾರವಾಗಿದ್ದು, ಇದಕ್ಕೆ ಕಾಂಗ್ರೆಸ್ ಅನಗತ್ಯ ಅಡ್ಡಿಪಡಿಸುತ್ತಿದೆ ಎಂದು ಅವರು ಆರೋಪಿಸಿದರು.
ಕೇಂದ್ರ ಸರ್ಕಾರ ಬಡವರು, ಕಾರ್ಮಿಕರು ಮತ್ತು ಗ್ರಾಮೀಣ ಜನರ ಬದುಕು ಸುಧಾರಿಸುವ ಉದ್ದೇಶದಿಂದ ಕೈಗೊಂಡಿರುವ ಈ ಮಹತ್ವದ ಕ್ರಮಗಳನ್ನು ರಾಜ್ಯ ಕಾಂಗ್ರೆಸ್ ಸರ್ಕಾರ ವಿರೋಧಿಸುವುದು ಅರ್ಥಹೀನ ಮತ್ತು ಜನವಿರೋಧಿ ನಡೆ ಎಂದು ಸೋಮಣ್ಣ ಟೀಕಿಸಿದ್ದಾರೆ.
ರಾಜಕೀಯ ಲಾಭಕ್ಕಾಗಿ ರಾಜ್ಯದ ಬಡಜನರ ಹಿತವನ್ನು ಬಲಿ ಕೊಡಬೇಡಿ. ಬಡವರ ಪರವಾಗಿ ಜಾರಿಯಾಗುತ್ತಿರುವ ಕೇಂದ್ರದ ಯೋಜನೆಗಳಿಗೆ ಅಡ್ಡಗಾಲು ಹಾಕುವುದನ್ನು ತಕ್ಷಣವೇ ನಿಲ್ಲಿಸಿ” ಎಂದು ರಾಜ್ಯ ಕಾಂಗ್ರೆಸ್ ಸರ್ಕಾರಕ್ಕೆ ಎಚ್ಚರಿಕೆ ನೀಡಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa