
ಬೆಂಗಳೂರು, 16 ಜನವರಿ (ಹಿ.ಸ.) :
ಆ್ಯಂಕರ್ : ಆರೋಗ್ಯ ಇಲಾಖೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಸುಮಾರು 30,000 ಒಳಗುತ್ತಿಗೆ ಮತ್ತು ಹೊರಗುತ್ತಿಗೆ ನೌಕರರಿಗೆ ಕಳೆದ ಮೂರು ತಿಂಗಳಿಂದ ಸಂಬಳವೇ ನೀಡಲಾಗಿಲ್ಲ, ಇದರಿಂದಲೇ ರಾಜ್ಯ ಸರ್ಕಾರದ ಆರ್ಥಿಕ ಸ್ಥಿತಿಯ ವಾಸ್ತವ ಚಿತ್ರಣ ಬಹಿರಂಗವಾಗಿದೆ ಎಂದು ವಿಧಾನ ಸಭೆಯ ಪ್ರತಿ ಪಕ್ಷದ ನಾಯಕ ಆರ್. ಅಶೋಕ ಅವರು ಆರೋಪಿಸಿದ್ದಾರೆ.
ನರ್ಸ್‌ಗಳಿಗೆ ವೇತನ ಪಾವತಿಸಲು ಸಹ ಸರ್ಕಾರದ ಬಳಿ ಹಣವಿಲ್ಲದ ಸ್ಥಿತಿ ನಿರ್ಮಾಣವಾಗಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೇ ಹೇಳಿಕೊಳ್ಳುವ “ತುಂಬಿ ತುಳುಕುತ್ತಿರುವ ಬೊಕ್ಕಸ”ದ ಅಸಲಿ ಹಣೆಬರಹ ಇದೇ ಎಂದು ಅಶೋಕ ವ್ಯಂಗ್ಯವಾಡಿದರು.
ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು, ಕರ್ನಾಟಕ ದಿವಾಳಿಯಾಗಿಲ್ಲ ಎಂದು ಜನರಿಗೆ ಸುಳ್ಳು ಹೇಳುವುದನ್ನು ತಕ್ಷಣ ನಿಲ್ಲಿಸಬೇಕು. ರಾಜ್ಯದ ನಿಜವಾದ ಆರ್ಥಿಕ ಸ್ಥಿತಿಗತಿಯನ್ನು ಜನರ ಮುಂದೆ ಇಡಲು ಶ್ವೇತಪತ್ರ ಬಿಡುಗಡೆ ಮಾಡಬೇಕು” ಎಂದು ಆಗ್ರಹಿಸಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa