
ಚಿತ್ರದುರ್ಗ, 16 ಜನವರಿ (ಹಿ.ಸ.) :
ಆ್ಯಂಕರ್ : ಕರ್ನಾಟಕ ರಾಜ್ಯ ಅನುಸೂಚಿತ ಜಾತಿಗಳು ಮತ್ತು ಅನುಸೂಚಿತ ಬುಡಕಟ್ಟುಗಳ ಆಯೋಗದ ಅಧ್ಯಕ್ಷರಾದ ಡಾ.ಎಲ್.ಮೂರ್ತಿ ಹಾಗೂ ನಾಮನಿರ್ದೇಶಿತ ಸದಸ್ಯರಾದ ಸುನೀಲ್ ಎಂ.ಉಕ್ಕಲಿ, ಎಂ.ಕುಂಬಯ್ಯ ಹಾಗೂ ಕಾರ್ಯದರ್ಶಿ ಡಾ.ಹೆಚ್.ಎನ್.ಶಿವರಾಮು ಅವರು ಇದೇ ಜನವರಿ 21 ರಂದು ಚಿತ್ರದುರ್ಗ ಜಿಲ್ಲಾ ಪ್ರವಾಸ ಕಾರ್ಯಕ್ರಮ ಹಮ್ಮಿಕೊಂಡಿದ್ದಾರೆ.
ಜ.21ರಂದು ಬೆಳಿಗ್ಗೆ 11 ರಿಂದ ಮಧ್ಯಾಹ್ನ 12.30 ರವರೆಗೆ ಮುಖಂಡರುಗಳ ಜೊತೆ ಕುಂದು ಕೊರತೆಗಳ ಸಭೆ, ಮಧ್ಯಾಹ್ನ 12.30 ರಿಂದ 2.15 ರವರೆಗೆ ಜಿಲ್ಲಾ ಮಟ್ಟದ ಅಧಿಕಾರಿಗಳೊಡನೆ ಪ್ರಗತಿ ಪರಿಶೀಲನಾ ಸಭೆ ಮತ್ತು ಮಧ್ಯಾಹ್ನ 2.15ಕ್ಕೆ ಪತ್ರಿಕಾಗೊಷ್ಠಿ ನಡೆಸುವರು.
ಸಮಾಜ ಕಲ್ಯಾಣ ಇಲಾಖಾ ವತಿಯಿಂದ ಇಲಾಖೆಯ ವಿವಿಧ ಯೋಜನೆಯಡಿ ಸರ್ಕಾರದ ಎಲ್ಲಾ ಇಲಾಖೆಗಳಿಗೆ ನೀಡಲಾಗಿರುವ ಅನುದಾನ ಸಮರ್ಪಕವಾಗಿ ವಿತರಣೆಯಾಗಿರುವ ಬಗ್ಗೆ ಮತ್ತು ವಿಳಂಬಗೊಂಡಿರುವ ಬಗ್ಗೆ ಹಾಗೂ ಇತರೆ ಕುಂದುಕೊರತೆಗಳ ಬಗ್ಗೆ ಪರಿಶೀಲನಾ ಸಭೆಯನ್ನು ನಗರದ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಆಯೋಜಿಸಿರುವುದರಿಂದ ಸಭೆಗೆ ಚುನಾಯಿತ ಜನಪ್ರತಿನಿಧಿಗಳು, ವಿವಿಧ ಸಂಘಟನೆ ಮುಖಂಡರು ಹಾಗೂ ಜಿಲ್ಲಾ ಮಟ್ಟದ ಅಧಿಕಾರಿಗಳು ಸಭೆಗೆ ಹಾಜರಾಗಬೇಕು ಎಂದು ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕ ಮಲ್ಲಿಕಾರ್ಜುನ್ ಕೋರಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa