ಬಹು ಅಂಗಾಂಗ ಕಸಿ ಆಸ್ಪತ್ರೆಗೆ 4,000 ಕೋಟಿ ವೆಚ್ಚದ ಗುರಿ : ಸಿದ್ದರಾಮಯ್ಯ
ಬೆಂಗಳೂರು, 17 ಜನವರಿ (ಹಿ.ಸ.) : ಆ್ಯಂಕರ್ : ಸಾವಿರ ಹಾಸಿಗೆಗಳ ಚಾರಿಟಬಲ್ ಸೂಪರ್ ಸ್ಪೆಷಾಲಿಟಿ ಹಾಗೂ ಮಾನವ ಬಹು ಅಂಗಾಂಗ ಕಸಿ ಆಸ್ಪತ್ರೆಗೆ ಅಜೀಂ ಪ್ರೇಮ್ ಜಿ ಪ್ರತಿಷ್ಠಾನವು ಐದು ವರ್ಷಗಳಲ್ಲಿ 4,000 ಕೋಟಿ ವೆಚ್ಚ ಮಾಡುವ ಗುರಿ ಹೊಂದಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ವ
Cm


ಬೆಂಗಳೂರು, 17 ಜನವರಿ (ಹಿ.ಸ.) :

ಆ್ಯಂಕರ್ : ಸಾವಿರ ಹಾಸಿಗೆಗಳ ಚಾರಿಟಬಲ್ ಸೂಪರ್ ಸ್ಪೆಷಾಲಿಟಿ ಹಾಗೂ ಮಾನವ ಬಹು ಅಂಗಾಂಗ ಕಸಿ ಆಸ್ಪತ್ರೆಗೆ ಅಜೀಂ ಪ್ರೇಮ್ ಜಿ ಪ್ರತಿಷ್ಠಾನವು ಐದು ವರ್ಷಗಳಲ್ಲಿ 4,000 ಕೋಟಿ ವೆಚ್ಚ ಮಾಡುವ ಗುರಿ ಹೊಂದಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಅವರು ಇಂದು ವಿಧಾನ ಸೌಧದ ಬ್ಯಾಂಕ್ವೆಟ್ ಹಾಲ್ ನಲ್ಲಿ ಸಾವಿರ ಹಾಸಿಗೆಗಳ ಚಾರಿಟಬಲ್ ಸೂಪರ್ ಸ್ಪೆಷಾಲಿಟಿ ಹಾಗೂ ಮಾನವ ಬಹು ಅಂಗಾಂಗ ಕಸಿ ಆಸ್ಪತ್ರೆ ನಿರ್ಮಾಣ ಮತ್ತು ನಿರ್ವಹಣೆ ಕುರಿತು ವೈದ್ಯಕೀಯ ಶಿಕ್ಷಣ ಇಲಾಖೆ ಹಾಗೂ ಅಜೀಂ ಪ್ರೇಮ್ ಜಿ ಪ್ರತಿಷ್ಠಾನ ನಡುವೆ ಒಡಂಬಡಿಕೆಗೆ ಸಹಿ ಹಾಕಿದ ನಂತರ ಮಾತನಾಡಿದರು.

ಅಜೀಂ ಪ್ರೇಮ್ ಜಿ ಪ್ರತಿಷ್ಠಾನದ ವತಿಯಿಂದ ಸಾವಿರ ಆಸ್ಪತ್ರೆಗಳ ಚಾರಿಟಬಲ್ ಸೂಪರ್ ಸ್ಪೆಷಾಲಿಟಿ ಹಾಗೂ ಮಾನವ ಬಹು ಅಂಗಾಂಗ ಕಸಿ ಆಸ್ಪತ್ರೆ ನಿರ್ಮಾಣಕ್ಕೆ ಸಾವಿರಾರು ಕೋಟಿ ರೂ ಗಳ ಆರೋಗ್ಯ ಸಂಬಂಧಿಸಿದಂತೆ ಒಡಂಬಡಿಕೆಗೆ ಸಹಿ ಮಾಡಲಾಗಿದೆ. ಇದಕ್ಕಾಗಿ ರಾಜೀವ್ ಗಾಂಧಿ ಎದೆ ರೋಗಗಳ ಆಸ್ಪತ್ರೆ ಆವರಣದಲ್ಲಿ ಸರ್ಕಾರ 10 ಎಕರೆ ಸ್ಥಳವನ್ನು 99 ವರ್ಷಗಳ ಅವಧಿಗೆ ಗುತ್ತಿಗೆ ಆಧಾರದ ಮೇಲೆ ನೀಡಲು ಒಪ್ಪಂದವಾಗಿದೆ ಎಂದರು.

ಅಜೀಂ ಪ್ರೇಮ್ ಜಿ ಅವರ ಈ ಮಹತ್ಕಾರ್ಯಕ್ಕೆ ಸರ್ಕಾರ ಆಭಾರಿಯಾಗಿದೆ. ಅದರಲ್ಲಿಯೂ ಉಚಿತವಾಗಿ ಈ ಕಾರ್ಯವನ್ನು ನೆರವೇರಿಸಲು ಮುಂದಾಗಿರುವುದು ಶ್ರೇಷ್ಠ ಕಾರ್ಯ ಎಂದರು .

ಇದೇ ವೇಳೆ ಮಾತನಾಡಿದ ಅಜೀಂ ಪ್ರೇಮ್ ಜಿ ಪ್ರತಿಷ್ಠಾನದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಅನುರಾಗ್ ಬೆಹರ್ , ಸಾರ್ವಜನಿಕ ವ್ಯವಸ್ಥೆಗಳಲ್ಲಿ ನಂಬಿಕೆಯಿಟ್ಟಿರುವ ಸಂಸ್ಥೆಯಾಗಿದ್ದು, ಸಾರ್ವಜನಿಕ ವ್ಯವಸ್ಥೆಗಳು ಬಲಗೊಳ್ಳಬೇಕು ಎಂದರು.

ಆರೋಗ್ಯ ಶುರುವಾಗುವುದು ಆಶಾ ಕಾರ್ಯಕರ್ತರು, ಪ್ರಾಥಮಿಕ ಆರೋಗ್ಯ ಕೇಂದ್ರಗಳಿಂದ. ನಮ್ಮ ಜನತೆ ಖಾಯಿಲೆ ಬೀಳದಿರುವಂತೆ ತಡೆಯುವುದು ನಮ್ಮ ಮುಖ್ಯ ಗುರಿಯಾಗಬೇಕು. ಕರ್ನಾಟಕ ಅತ್ಯಂತ ಕ್ರಿಯಾಶೀಲ ರಾಜ್ಯವಾಗಿದ್ದು, ಆರೋಗ್ಯ ವ್ಯವಸ್ಥೆಯನ್ನು ಬಲಬಡಿಸುವಲ್ಲಿ ಅಧಿಕಾರಿಗಳು, ಆಡಳಿತ ಒಟ್ಟಾಗಿ ಕೆಲಸ ಮಾಡುತ್ತಿರುವ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande