
ವಿಜಯಪುರ, 17 ಜನವರಿ (ಹಿ.ಸ.) :
ಆ್ಯಂಕರ್ : ಜನವರಿ 2026 ಜಿಲ್ಲಾಮಟ್ಟದ ಗಣರಾಜ್ಯೋತ್ಸವ ಆಚರಣೆ ಹಿನ್ನೆಲೆಯಲ್ಲಿ ಕ್ರೀಡಾಪಟುಗಳ ಸನ್ಮಾನಕ್ಕಾಗಿ ಅರ್ಜಿ ಆಹ್ವಾನಿಸಲಾಗಿದೆ.
2025-26ನೇ ಸಾಲಿನಲ್ಲಿ ವೈಯಕ್ತಿಕ ಹಾಗೂ ಗುಂಪು ಕ್ರೀಡಾಕೂಟಗಳಲ್ಲಿ ರಾಜ್ಯ, ರಾಷ್ಟ್ರ ಹಾಗೂ ಅಂತರರಾಷ್ಟ್ರೀಯ ಮಟ್ಟದಲ್ಲಿ ಪ್ರಥಮ ಸ್ಥಾನ ಪಡೆದ ಕ್ರೀಡಾಪಟು ಹಾಗೂ ಗುಂಪು ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಪಡೆದ ತಂಡದ ಮುಖ್ಯಸ್ಥರು ಅರ್ಜಿ ಸಲ್ಲಿಸಬಹುದಾಗಿದೆ.
ಅರ್ಜಿಯನ್ನು ದಿನಾಂಕ: 22-01-2026 ರೊಳಗಾಗಿ ಸಹಾಯಕ ನಿರ್ದೇಶಕರು, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಡಾ.ಬಿ.ಆರ್. ಅಂಬೇಡ್ಕರ ಕ್ರೀಡಾಂಗಣ ಇವರ ಕಚೇರಿಗೆ ಸಲ್ಲಿಸಬಹುದಾಗಿದೆ.
ಈ ಕುರಿತ ಹೆಚ್ಚಿನ ಮಾಹಿತಿಗಾಗಿ ಕ್ರೀಡಾ ಇಲಾಖೆಯ ದೂರವಾಣಿ ಸಂಖ್ಯೆ: 08352-251085 ಹಾಗೂ ಮೊ: 9535501872 ಸಂಪರ್ಕಿಸಬಹುದಾಗಿದೆ ಎಂದು ಯುವಜನ ಸೇವಾ ಹಾಗೂ ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕರಾದ ರಾಜಶೇಖರ ಧೈವಾಡಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / jyothi deshpande