
ವಿಜಯಪುರ, 17 ಜನವರಿ (ಹಿ.ಸ.) :
ಆ್ಯಂಕರ್ : ವಿಜಯಪುರ ಜಿಲ್ಲೆಯಲ್ಲಿ ದೇಹದಾನದ ಮಹತ್ವದ ಕುರಿತು ಜನರಲ್ಲಿ ಜಾಗೃತಿ ಹೆಚ್ಚಾಗುತ್ತಿದ್ದು, ನಗರದ ಆಶ್ರಮ ಬಳಿಯ, ವಿಶ್ವೇಶ್ವರಯ್ಯನಗರ ನಿವಾಸಿಯಾದ ಗುಂಡಪ್ಪಾ ರಾಮಪ್ಪ ಕುಂಬಾರ(89) ಅವರು ನಿಧನರಾದ ಹಿನ್ನೆಲೆಯಲ್ಲಿ ಮೃತರ ಇಚ್ಚೆಯಂತೆ ಅವರ ಮೃತದೇಹವನ್ನು ಕುಟುಂಬಸ್ಥರು ಬಿ.ಎಲ್.ಡಿ.ಇ ಆಸ್ಪತ್ರೆಗೆ ದಾನ ಮಾಡಿದ್ದಾರೆ.
ಶುಕ್ರವಾರ ಗುಂಡಪ್ಪಾ ರಾಮಪ್ಪ ಕುಂಬಾರ ಅವರು ನಿಧರಾಗಿದ್ದರು. ಮೃತರ ಇಚ್ಛೆಯಂತೆ ಅವರ ಮೃತದೇಹವನ್ನು ಬಿ.ಎಲ್.ಡಿ.ಇ ಆಸ್ಪತ್ರೆಗೆ ದಾನ ಮಾಡಿದರು. ಈ ಸಂದರ್ಭದಲ್ಲಿ ಅಂಗರಚನಾಶಾಸ್ತ್ರ ವಿಭಾಗದ ಮುಖ್ಯಸ್ಥ ಡಾ. ಆರ್.ಎಸ್. ಬುಲಗೌಡ ಅವರು ಪಾರ್ಥಿವ ಶರೀರವನ್ನು ಸ್ವೀಕರಿಸಿ ಕೃತಜ್ಞತೆ ಸಲ್ಲಿಸಿದರು.
ಹಿಂದೂಸ್ತಾನ್ ಸಮಾಚಾರ್ / jyothi deshpande