ದೇವದಾಸಿ ಪುನರ್ವಸತಿ ಯೋಜನಾಧಿಕಾರಿ ಹುದ್ದೆಗೆ ಅರ್ಜಿ ಆಹ್ವಾನ
ಕೊಪ್ಪಳ, 17 ಜನವರಿ (ಹಿ.ಸ.) : ಆ್ಯಂಕರ್ : ಕರ್ನಾಟಕ ರಾಜ್ಯ ಮಹಿಳಾ ಅಭಿವೃದ್ಧಿ ನಿಗಮ ದೇವದಾಸಿ ಪುನರ್ವಸತಿ ಯೋಜನೆಯಡಿ 2025-26ನೇ ಸಾಲಿನಲ್ಲಿ ಕೊಪ್ಪಳ ಜಿಲ್ಲೆಯಲ್ಲಿನ ಖಾಲಿ ಇರುವ ಯೋಜನಾಧಿಕಾರಿ 1 ಹುದ್ದೆಗೆ ಅರ್ಜಿ ಆಹ್ವಾನಿಸಲಾಗಿದೆ. ಎಂ.ಎಸ್.ಡಬ್ಲ್ಯೂ., ಎಂ.ಎ, ಎಂ.ಎ ಸೋಶಿಯಾಲಜಿ, ಎಂ
ದೇವದಾಸಿ ಪುನರ್ವಸತಿ ಯೋಜನಾಧಿಕಾರಿ ಹುದ್ದೆಗೆ ಅರ್ಜಿ ಆಹ್ವಾನ


ಕೊಪ್ಪಳ, 17 ಜನವರಿ (ಹಿ.ಸ.) :

ಆ್ಯಂಕರ್ : ಕರ್ನಾಟಕ ರಾಜ್ಯ ಮಹಿಳಾ ಅಭಿವೃದ್ಧಿ ನಿಗಮ ದೇವದಾಸಿ ಪುನರ್ವಸತಿ ಯೋಜನೆಯಡಿ 2025-26ನೇ ಸಾಲಿನಲ್ಲಿ ಕೊಪ್ಪಳ ಜಿಲ್ಲೆಯಲ್ಲಿನ ಖಾಲಿ ಇರುವ ಯೋಜನಾಧಿಕಾರಿ 1 ಹುದ್ದೆಗೆ ಅರ್ಜಿ ಆಹ್ವಾನಿಸಲಾಗಿದೆ.

ಎಂ.ಎಸ್.ಡಬ್ಲ್ಯೂ., ಎಂ.ಎ, ಎಂ.ಎ ಸೋಶಿಯಾಲಜಿ, ಎಂ.ಎಸ್‍ಸಿ ಸೈಕಾಲಜಿ ವಿದ್ಯಾರ್ಹತೆ ಹಾಗೂ ಕಡ್ಡಾಯವಾಗಿ ಕಂಪ್ಯೂಟರ್ ಜ್ಞಾನವನ್ನು ಹೊಂದಿರುವ ಅಭ್ಯರ್ಥಿಗಳು ಹಾಗೂ ನಿವೃತ್ತ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳು ಅರ್ಜಿ ಸಲ್ಲಿಸಬಹುದು. 65 ವಯಸ್ಸಿನೊಳಗಿರುವ ನಿವೃತ್ತ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳಿಗೆ ಆದ್ಯತೆ ನೀಡಲಾಗುವುದು.

ಅರ್ಜಿ ಸಲ್ಲಿಸಲು ಜನವರಿ 23 ಕೊನೆಯ ದಿನವಾಗಿದ್ದು, ಆಸಕ್ತರು ಯೋಜನಾಧಿಕಾರಿಗಳ ಕಚೇರಿ, ದೇವದಾಸಿ ಪುನರ್ವಸತಿ ಯೋಜನೆ, ಮಳಿಗೆ ಸಂಖ್ಯೆ:29, ನಗರಾಭಿವೃದ್ಧಿ ಪ್ರಾಧಿಕಾರ ಹೊಸಪೇಟೆ ರಸ್ತೆ, ಕೊಪ್ಪಳದಲ್ಲಿ ಅರ್ಜಿಗಳನ್ನು ಪಡೆದು ತಮ್ಮ ನಿಗದಿತ ವಿದ್ಯಾರ್ಹತೆಯ ದಾಖಲಾತಿಗಳು ಹಾಗೂ ಅನುಭವದ ಮೂಲ ಪ್ರಮಾಣ ಪತ್ರಗಳೊಂದಿಗೆ ಕಚೇರಿ ಸಮಯದಲ್ಲಿ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗಾಗಿ ಈ ಕಚೇರಿಯನ್ನು ಸಂಪರ್ಕಿಸಬಹುದು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕರು ತಿಳಿಸಿದ್ದಾರೆ.

ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್


 rajesh pande